Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:30 - ಕನ್ನಡ ಸತ್ಯವೇದವು J.V. (BSI)

30 ನಿನ್ನ ನಿವಿುತ್ತ ದನಿಗೈದು ದುಃಖದಿಂದರಚಿ ತಲೆಗೆ ದೂಳೆರಚಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನಿನ್ನ ನಿಮಿತ್ತ ದುಃಖದಿಂದ ಅರಚಿ, ತಲೆಗೆ ಧೂಳೆರಚಿಕೊಂಡು, ಬೂದಿಯಲ್ಲಿ ಬಿದ್ದು ಹೊರಳಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ತಮ್ಮ ತಮ್ಮ ಹಡಗುಗಳಿಂದಿಳಿದು, ನೆಲದ ಮೇಲೆ ನಿಂತು. ತಲೆಗೆ ದೂಳೆರಚಿಕೊಂಡು, ಬೂದಿಯಲ್ಲಿ ಹೊರಳಾಡಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನಿನಗೋಸ್ಕರ ಅವರು ದುಃಖಿಸುತ್ತಾ ಅಳುವರು; ತಲೆಯ ಮೇಲೆ ಧೂಳನ್ನು ತೂರಿಕೊಂಡು ಬೂದಿರಾಶಿಯ ಮೇಲೆ ಹೊರಳಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನಿನ್ನ ನಿಮಿತ್ತ ಧ್ವನಿಗೈದು ದುಃಖದಿಂದ, ತಲೆಗೆ ಧೂಳೆರಚಿಕೊಂಡು, ಬೂದಿಯಲ್ಲಿ ಹೊರಳಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:30
15 ತಿಳಿವುಗಳ ಹೋಲಿಕೆ  

ನನ್ನ ಪ್ರಜೆಯೆಂಬ ಯುವತಿಯೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡು; ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ದುಃಖಪಟ್ಟು ಘೋರಪ್ರಲಾಪಮಾಡು; ಕೊಳ್ಳೆಗಾರನು ತಟ್ಟನೆ ನಮ್ಮ ಮೇಲೆ ಬೀಳುವನಷ್ಟೆ.


ಚೀಯೋನ್ ನಗರಿಯ ಹಿರಿಯರು ನೆಲದಲ್ಲಿ ಮೌನವಾಗಿ ಕುಕ್ಕರಿಸಿದ್ದಾರೆ; ತಲೆಯ ಮೇಲೆ ಧೂಳನ್ನು ತೂರಿಕೊಂಡು ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆ; ಯೆರೂಸಲೇವಿುನ ಯುವತಿಯರು ತಲೆಗಳನ್ನು ನೆಲಕ್ಕೆ ಬೊಗ್ಗಿಸಿದ್ದಾರೆ.


ಮೂರನೆಯ ದಿನ ಸೌಲನ ಪಾಳೆಯದಿಂದ ಒಬ್ಬ ಮನುಷ್ಯನು ದಾವೀದನ ಬಳಿಗೆ ಬಂದು ನೆಲದ ಮಟ್ಟಿಗೆ ಬಾಗಿ ನಮಸ್ಕರಿಸಿದನು. ಅವನು ವಸ್ತ್ರಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದನು.


ಯೋನನ ಪ್ರಕಟನೆಯು ನಿನೆವೆಯ ಅರಸನಿಗೆ ಮುಟ್ಟಲು ಅವನು ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದುಬಿಟ್ಟು ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತನು.


ಇವರು ನಿನ್ನ ವಿಷಯದಲ್ಲಿ - ನಾವಿಕರ ನಿವಾಸವೇ, ಹೆಸರುವಾಸಿಯ ಪುರಿಯೇ, ಸಮುದ್ರದಿಂದ ಬಲಗೊಂಡ ನಗರಿಯೇ, ನೀನು ಎಷ್ಟೋ ಹಾಳಾದಿ! ಸಮುದ್ರಸಂಚಾರಿಗಳಿಗೆಲ್ಲಾ ಭಯಾಸ್ಪದರಾಗಿದ್ದ ನಿನ್ನ ನಿವಾಸಿಗಳು ಎಷ್ಟೋ ಹಾಳಾದರು!


ಅದೇ ದಿವಸ ಒಬ್ಬ ಬೆನ್ಯಾಮೀನ್ಯನು ರಣರಂಗದಿಂದ ತಪ್ಪಿಸಿಕೊಂಡು ತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣುಹಾಕಿಕೊಂಡು


ಇದನ್ನು ಗತ್ ಊರಿನಲ್ಲಿ ತಿಳಿಸಬೇಡಿರಿ; ಅಳಲೇಬೇಡಿರಿ; ಬೇತ್ಲೆಯಪ್ರದಲ್ಲಿ ಧೂಳಿನೊಳಗೆ ಹೊರಳಾಡಿರಿ.


ಕುರುಬರೇ, ಅರಚಿ ಗೋಳಾಡಿರಿ! ಮಂದೆಯಲ್ಲಿನ ಹಿರಿಯ ಮಣಿಗಳೇ, [ಬೂದಿಯಲ್ಲಿ] ಬಿದ್ದು ಹೊರಳಾಡಿರಿ! ನಿಮ್ಮನ್ನು ವಧಿಸುವ ಕಾಲವು ತುಂಬಿದೆ; ನಾನು ನಿಮ್ಮನ್ನು ಭಂಗಪಡಿಸುವೆನು; ನೀವು ಬಿದ್ದುಹೋದ ಅಂದವಾದ ಪಾತ್ರೆಯಂತೆ ಚೂರುಚೂರಾಗುವಿರಿ.


ಆದಕಾರಣ [ನಾನು ಆಡಿದ್ದನ್ನು] ತಿರಸ್ಕರಿಸಿ ಧೂಳಿಯಲ್ಲಿಯೂ ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ.


ಅವರು ದೂರದಿಂದ ಕಣ್ಣೆತ್ತಿ ನೋಡಿ ಯೋಬನ ಗುರುತನ್ನು ಹಿಡಿಯಲಾರದೆ ಹೋದ ಕಾರಣ ಗಟ್ಟಿಯಾಗಿ ಅತ್ತು ತಮ್ಮ ತಮ್ಮ ಮೇಲಂಗಿಗಳನ್ನು ಹರಿದುಕೊಂಡು ಮಣ್ಣನ್ನು ಮೇಲಕ್ಕೆ ತೂರಿ ತಮ್ಮ ತಲೆಯ ಮೇಲೆ ಸುರಿಸಿಕೊಂಡರು.


ಯೋಬನು ಒಂದು ಬೋಕಿಯನ್ನು ತೆಗೆದುಕೊಂಡು ತನ್ನ ಮೈಯನ್ನು ಕೆರೆದುಕೊಳ್ಳುತ್ತಾ ಬೂದಿಯಲ್ಲಿ ಕೂತುಕೊಂಡಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು