ಯೆಹೆಜ್ಕೇಲನು 27:32 - ಕನ್ನಡ ಸತ್ಯವೇದವು J.V. (BSI)32 ಅವರು ರೋದನಮಾಡುತ್ತಾ ನಿನ್ನ ವಿಷಯವಾಗಿ ಶೋಕಗೀತವನೆತ್ತಿ ಹೀಗೆ ಪ್ರಲಾಪಿಸುವರು - ಸಮುದ್ರದ ನಡುವೆ ಬಿಕೋ ಎನ್ನುವ ತೂರಿಗೆ ಯಾವದು ಸಮಾನ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಅವರು ರೋದನ ಮಾಡುತ್ತಾ ನಿನ್ನ ವಿಷಯವಾಗಿ ಶೋಕ ಗೀತವನ್ನೆತ್ತಿ ಹೀಗೆ ಪ್ರಲಾಪಿಸುವರು, ‘ಸಮುದ್ರದ ನಡುವೆ ಹಾಳಾಗಿರುವ ತೂರಿಗೆ ಯಾವ ಪಟ್ಟಣ ಸಮಾನವಾಗಿದೆ?’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ರೋಧಿಸುವರು, ಪ್ರಲಾಪಿಸುವರು, ಹಾಡುವರು ಶೋಕಗೀತೆಯನ್ನು; ಕಡಲ ನಡುವೆ ಬಿಕೋ ಎನ್ನುವ ಟೈರನ್ನು ಏತಕೆ ಹೋಲಿಸೋಣ? ಎಂದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 “‘ಅಳುತ್ತಾ ನಿನಗೆ ಈ ಶೋಕಗೀತೆಯನ್ನು ಹಾಡುವರು: “‘ತೂರಿನಂತೆ ಯಾರಿಲ್ಲ. ಆದರೆ ತೂರ್ ಹಾಳಾಗಿಹೋಯಿತು, ಸಮುದ್ರ ಮಧ್ಯದಲ್ಲಿ ನಾಶವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಅವರು ಗೋಳಾಡುತ್ತಾ ನಿನ್ನ ವಿಷಯವಾಗಿ ಶೋಕಗೀತೆಯನ್ನೆತ್ತಿ ಹೀಗೆ ಪ್ರಲಾಪಿಸುವರು; “ಸಮುದ್ರದ ನಡುವೆ ಹಾಳಾಗಿರುವ ಟೈರ್‌ನಂಥ ಪಟ್ಟಣ ಯಾವುದು?” ಅಧ್ಯಾಯವನ್ನು ನೋಡಿ |