Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:6 - ಕನ್ನಡ ಸತ್ಯವೇದವು J.V. (BSI)

6 ಬಾಷಾನಿನ ಅಲ್ಲೋನ್ ಮರದಿಂದ ನಿನ್ನ ಹುಟ್ಟುಗಳನ್ನು ರೂಪಿಸಿ ಕಿತ್ತೀಮ್ ದ್ವೀಪದ ತಿಲಕದ ಹಲಿಗೆಯಿಂದ ನಿನ್ನ ಮೇಲ್ಮಾಳಿಗೆಯನ್ನು ಕಟ್ಟಿ ದಂತದಿಂದ ಕೆತ್ತಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಿನ್ನ ಹುಟ್ಟುಗೋಲನ್ನು ಬಾಷಾನಿನ ಓಕ್ ಮರದಿಂದ ಮಾಡಿ, ಕಿತ್ತೀಮ್ ದ್ವೀಪದ ಹಲಿಗೆಯಿಂದ ನಿನ್ನ ಹಡಗಿನ ಮೇಲ್ಮಾಳಿಗೆಯನ್ನು ಕಟ್ಟಿ, ಅದನ್ನು ದಂತದಿಂದ ಕೆತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಿನ್ನ ಹುಟ್ಟುಗಳು ರೂಪಿಸಲಾಗಿವೆ ಬಾಷಾನಿನ ಅಲ್ಲೋನ್ ಮರದಿಂದ ನಿನ್ನ ಮೇಲ್ಮಾಳಿಗೆ ಕಟ್ಟಲಾಗಿದೆ ಕಿತ್ತೀಮ್ ದ್ವೀಪದ ತಿಲಕ ಹಲಗೆಯಿಂದ, ಕೆತ್ತಲಾಗಿದೆ ದಂತದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಬಾಷಾನಿನ ಅಲ್ಲೋನ್ ಮರಗಳಿಂದ ಹುಟ್ಟುಗಳನ್ನು ತಯಾರಿಸಿದರು. ನಿನ್ನ ಮೇಲ್ಮಾಳಿಗೆಯನ್ನು ಕಿತ್ತೀಮ್ ದ್ವೀಪದ ತಿಲಕದ ಮರಗಳಿಂದ ಮಾಡಿದರು. ಅದನ್ನು ದಂತಗಳಿಂದ ಶೃಂಗರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಿನ್ನ ಹುಟ್ಟುಗೋಲನ್ನು ಬಾಷಾನಿನ ಅಲ್ಲೋನ್ ವೃಕ್ಷದಿಂದ ಮಾಡಿದ್ದಾರೆ, ಕಿತ್ತೀಮ್ ದ್ವೀಪಗಳಿಂದ ತಂದ ಹಲಗೆಗಳಿಂದ ನಿನ್ನ ಹಡಗಿನ ಮೇಲ್ಮಾಳಿಗೆಯನ್ನು ಕಟ್ಟಿ, ಅದನ್ನು ದಂತದಿಂದ ಶೃಂಗರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:6
10 ತಿಳಿವುಗಳ ಹೋಲಿಕೆ  

ಎತ್ತರವಾಗಿ ಬೆಳೆದಿರುವ ಲೆಬನೋನಿನ ಸರ್ವದೇವದಾರು ವೃಕ್ಷಗಳು, ಬಾಷಾನಿನ ಎಲ್ಲಾ ಅಲ್ಲೋನ್ ಮರಗಳು,


ಯಾವಾನನ ಸಂತಾನದವರು - ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾ ಎಂಬ ಸ್ಥಳಗಳವರು; ಇವರು ಸಮುದ್ರದ ರೇವುಗಳಲ್ಲಿ ಹರಡಿಕೊಂಡರು.


ತುರಾಯಿ ಮರವೇ, ಗೋಳಾಡು! ದೇವದಾರು ಬಿದ್ದಿದೆ, ಶ್ರೇಷ್ಠವೃಕ್ಷಗಳು ನಾಶವಾಗಿವೆ. ಬಾಷಾನಿನ ಅಲ್ಲೋನ್ ಮರಗಳೇ, ಕಿರಚಿರಿ! ನುಗ್ಗಲಾಗದ ವನವು ಉರುಳಿದೆ.


ಕಿತ್ತೀಮ್ ದ್ವೀಪಗಳಿಗೆ ಹೋಗಿ ನೋಡಿರಿ, ಕೇದಾರಿಗೆ ಕಳುಹಿಸಿ ವಿಚಾರಮಾಡಿರಿ; ಇಂಥಾ ಕಾರ್ಯವು ಎಲ್ಲಿಯಾದರೂ ನಡೆಯಿತೇ ಎಂದು ಚೆನ್ನಾಗಿ ಆಲೋಚಿಸಿರಿ.


[ಚೀಯೋನ್ ಯುವತಿಯೇ,] ಲೆಬನೋನ್ ಪರ್ವತವನ್ನು ಹತ್ತಿ ಕೂಗಿಕೋ! ಬಾಷಾನಿನಲ್ಲಿ ಮೊರೆಯಿಡು, ಅಬಾರೀವಿುನಲ್ಲಿ ಅರಚಿಕೋ! ನಿನ್ನ ವಿುಂಡರೆಲ್ಲಾ ಹಾಳಾಗಿ ಹೋದರಲ್ಲಾ.


ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀವಿುಗೆ ಸಮುದ್ರದ ಮೇಲೆ ಹಾದುಹೋಗು, ಅಲ್ಲಿಯೂ ನಿನಗೆ ವಿಶ್ರಾಂತಿಯಿರದು ಎಂದು ಹೇಳಿದ್ದಾನೆ.


ಕಿತ್ತೀಮೆಂಬ ಸ್ಥಳದಿಂದ ಜನರು ಹಡಗುಗಳಲ್ಲಿ ಬಂದು ಅಶ್ಯೂರ್ಯರನ್ನೂ ಏಬೆರ್ ಜನರನ್ನೂ ಸೋಲಿಸುವರು; ಅವರಿಗೂ ನಾಶವುಂಟಾಗುವದು ಅಂದನು.


ಇಸ್ರಾಯೇಲ್ಯರು ಹಿಂದಿರುಗಿ ಬಾಷಾನಿನ ಮಾರ್ಗವಾಗಿ ಹತ್ತಿಹೋಗಲಾಗಿ ಬಾಷಾನಿನ ಅರಸನಾದ ಓಗನು ತನ್ನ ಜನರೆಲ್ಲರೊಡನೆ ಅವರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಎದ್ರೈವೂರಿಗೆ ಹೊರಟುಬಂದನು.


ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಅಂಗಲಾಚಿರಿ! [ನಿಮ್ಮ ಆಶ್ರಯವು] ಹಾಳಾಯಿತು, ನಿಮಗೆ ನೆಲೆಯಿಲ್ಲ, ರೇವಿಲ್ಲ. (ಕಿತ್ತೀಮ್ ದೇಶೀಯರಿಂದ ಅವುಗಳಿಗೆ ತಿಳಿಯಿತು).


ಅವನಿಗೆ ವಿರುದ್ಧವಾಗಿ ಕಿತ್ತೀವಿುನ ಹಡಗುಗಳು ಬರಲು ಅವನು ಎದೆಗುಂದಿ ಹಿಂದಿರುಗಿ ಪರಿಶುದ್ಧ ನಿಬಂಧನೆಯ ಮೇಲೆ ಮತ್ಸರಗೊಂಡು ಮಾಡುವಷ್ಟು ಮಾಡುವನು; ಅವನು ಸ್ವದೇಶಕ್ಕೆ ಸೇರಿ ಪರಿಶುದ್ಧ ನಿಬಂಧನೆ ತೊರೆದವರನ್ನು ಕಟಾಕ್ಷಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು