ಯೆಹೆಜ್ಕೇಲನು 27:9 - ಕನ್ನಡ ಸತ್ಯವೇದವು J.V. (BSI)9 ನಿನ್ನಲ್ಲಿ ಸೇರಿಕೊಂಡಿದ್ದ ಗೆಬಲಿನ ಹಿರಿಯರೂ ಜಾಣರೂ ನಿನ್ನ ಕಂಡಿಗಳನ್ನು ಭದ್ರಪಡಿಸುವವರು. ಸಮುದ್ರದ ಸಕಲ ನಾವೆಗಳು ನಾವಿಕರ ಸಮೇತ ನಿನ್ನ ಬಳಿಯಲ್ಲಿದ್ದು ನಿನಗೆ ಸರಕುಗಳನ್ನು ತಂದೊಪ್ಪಿಸುತ್ತಿದ್ದವು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಿನ್ನಲ್ಲಿ ಸೇರಿಕೊಂಡಿದ್ದ ಗೇಬಾಲಿನ ಹಿರಿಯರೂ ಮತ್ತು ಜಾಣರೂ ನಿನ್ನ ಬಿರುಕುಗಳನ್ನು ಮುಚ್ಚಿದ್ದಾರೆ. ಸಮುದ್ರದ ಸಕಲ ನಾವೆಗಳ ಮತ್ತು ನಾವಿಕರ ಸಮೇತ ನಿನ್ನ ಬಳಿಯಲ್ಲಿದ್ದು, ನಿನಗೆ ಸರಕುಗಳನ್ನು ತಂದೊಪ್ಪಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಿನ್ನ ಕಂಡಿಗಳ ಭದ್ರಪಡಿಸಿಹರು, ನಿನ್ನಲ್ಲಿ ಸೇರಿದ್ದ ಗೆಬಲಿನ ಜಾಣರು, ಹಿರಿಯರು. ನಿನಗೆ ಸರಕುಗಳ ತಂದೊಪ್ಪಿಸುತ್ತಿದ್ದರು ಸಕಲ ನಾವೆಗಳು, ಸಕಲ ನಾವಿಕರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಗೆಬಲಿನ ಹಿರಿಯರೂ ಜ್ಞಾನಿಗಳೂ ನಿನ್ನ ಹಡಗುಗಳ ಬಿರುಕುಗಳನ್ನು ಸರಿಪಡಿಸುವವರಾಗಿದ್ದರು. ಸಾಗರದ ಹಡಗುಗಳೂ ಅದರ ನಾವಿಕರೂ ನಿನ್ನೊಂದಿಗೆ ವ್ಯಾಪಾರ ಮಾಡಲು ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಗೆಬಾಲಿನ ಹಿರಿಯರೂ ಅದರ ಜ್ಞಾನಿಗಳೂ ನಿನ್ನ ಬಿರುಕುಗಳನ್ನು ಮುಚ್ಚುವವರಾಗಿ ನಿನ್ನಲ್ಲಿದ್ದಾರೆ. ಸಮುದ್ರದ ಸಕಲ ನಾವೆಗಳೂ ನಾವಿಕರ ಸಮೇತ ನಿನ್ನ ಬಳಿಯಲ್ಲಿದ್ದು ನಿನಗೆ ಸರಕುಗಳನ್ನು ತಂದೊಪ್ಪಿಸುತ್ತಿದ್ದವು. ಅಧ್ಯಾಯವನ್ನು ನೋಡಿ |