Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 28:12 - ಕನ್ನಡ ಸತ್ಯವೇದವು J.V. (BSI)

12 ನರಪುತ್ರನೇ, ನೀನು ತೂರಿನ ಅರಸನ ವಿಷಯದಲ್ಲಿ ಶೋಕಗೀತವನ್ನೆತ್ತು, ಅವನಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಸರ್ವಸುಲಕ್ಷಣಶಿರೋಮಣಿ, ಪೂರ್ಣಜ್ಞಾನಿ, ಪರಿಪೂರ್ಣಸುಂದರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ನರಪುತ್ರನೇ, ನೀನು ತೂರಿನ ಅರಸನ ವಿಷಯದಲ್ಲಿ ಶೋಕ ಗೀತೆಯನ್ನು ಹಾಡು, ಅವನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಸರ್ವಸುಲಕ್ಷಣ ಶಿರೋಮಣಿ, ಪೂರ್ಣಜ್ಞಾನಿ, ಪರಿಪೂರ್ಣಸುಂದರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ನರಪುತ್ರನೇ, ನೀನು ಟೈರಿನ ಅರಸನನ್ನು ಕುರಿತು ಶೋಕಗೀತೆಯೊಂದನ್ನು ಹಾಡಿ ಅವನಿಗೆ ಹೀಗೆ ನುಡಿ: ಸರ್ವೇಶ್ವರನಾದ ದೇವರು ಹೀಗೆನ್ನುತ್ತಾರೆ: - “ನೀನು ಸರ್ವಸುಲಕ್ಷಣ ಶಿರೋಮಣಿ ಪರಿಪೂರ್ಣ ಸುಂದರ, ಪೂರ್ಣಜ್ಞಾನಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ನರಪುತ್ರನೇ, ತೂರ್ ದೇಶದ ರಾಜನಿಗೆ ಈ ಶೋಕಗೀತೆಯನ್ನು ಹಾಡು. ಅವನಿಗೆ ಹೀಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ: “‘ನೀನೊಬ್ಬ ಆದರ್ಶ ಮನುಷ್ಯನಾಗಿದ್ದೆ. ಸರ್ವಾಂಗಸುಂದರನೂ ಜ್ಞಾನದಿಂದ ತುಂಬಿದವನೂ ಆಗಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಮನುಷ್ಯಪುತ್ರನೇ, ಟೈರಿನ ಅರಸನ ವಿಷಯದಲ್ಲಿ ಶೋಕಗೀತೆಯನ್ನೆತ್ತಿ ಅವನಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನೀನು ಸರ್ವಸುಲಕ್ಷಣ ಶಿರೋಮಣಿ. ಸಂಪೂರ್ಣಜ್ಞಾನಿ, ಪರಿಪೂರ್ಣ ಸುಂದರವಾದ ನೀನು ಲೆಕ್ಕವನ್ನು ಮುದ್ರಿಸುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 28:12
28 ತಿಳಿವುಗಳ ಹೋಲಿಕೆ  

ಇಸ್ರಾಯೇಲಿನ ಪ್ರಭುಗಳ ವಿಷಯವಾಗಿ ಈ ಶೋಕಗೀತವನ್ನು ಎತ್ತು -


ಇವರು ನಿನ್ನ ವಿಷಯದಲ್ಲಿ - ನಾವಿಕರ ನಿವಾಸವೇ, ಹೆಸರುವಾಸಿಯ ಪುರಿಯೇ, ಸಮುದ್ರದಿಂದ ಬಲಗೊಂಡ ನಗರಿಯೇ, ನೀನು ಎಷ್ಟೋ ಹಾಳಾದಿ! ಸಮುದ್ರಸಂಚಾರಿಗಳಿಗೆಲ್ಲಾ ಭಯಾಸ್ಪದರಾಗಿದ್ದ ನಿನ್ನ ನಿವಾಸಿಗಳು ಎಷ್ಟೋ ಹಾಳಾದರು!


ಆದಕಾರಣ ನಾವು ನಿಮ್ಮ ಸುದ್ದಿಯನ್ನು ಕೇಳಿದ ದಿವಸದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲ ಆತ್ಮೀಯ ಜ್ಞಾನವನ್ನೂ ಗ್ರಹಿಕೆಯನ್ನೂ ಹೊಂದಿ


ಆತನು ನಮ್ಮ ಮೇಲೆ ಮುದ್ರೆ ಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.


ಯಾಕಂದರೆ ಇಹಲೋಕ ಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೇ ಹಿಡುಕೊಳ್ಳುತ್ತಾನೆಂತಲೂ


ನಾನು ಈ ಕೆಲಸವನ್ನು ತೀರಿಸಿಕೊಂಡು ಈ ಪ್ರೀತಿಯ ಫಲವನ್ನು ಅಲ್ಲಿಯವರ ವಶಕ್ಕೆ ಯಥಾಕ್ರಮವಾಗಿ ಕೊಟ್ಟ ಮೇಲೆ ನಿಮ್ಮ ಮಾರ್ಗವಾಗಿ ಸ್ಪೇನ್ ದೇಶಕ್ಕೆ ಹೋಗುವೆನು.


ಆದದರಿಂದ ಸಹೋದರರೇ, ಸಂಭಾವಿತರೂ ಪವಿತ್ರಾತ್ಮಭರಿತರೂ ಜ್ಞಾನಸಂಪನ್ನರೂ ಆಗಿರುವ ಏಳುಮಂದಿಯನ್ನು ನಿಮ್ಮೊಳಗಿಂದ ನೋಡಿ ಆರಿಸಿಕೊಳ್ಳಿರಿ; ಅವರನ್ನು ಈ ಕೆಲಸದ ಮೇಲೆ ನೇವಿುಸುವೆವು.


ಆ ಬಾಲಕನು ಬೆಳೆದು ಬಲಗೊಂಡು ಜ್ಞಾನದಿಂದ ತುಂಬಿದವನಾದನು; ಮತ್ತು ಆತನ ಮೇಲೆ ದೇವರ ದಯವಿತ್ತು.


ಪ್ರಲಾಪಿಸುವವರು ಈ ಶೋಕಗೀತವನ್ನೆತ್ತಲಿ; ಜನಾಂಗಗಳ ಯುವತಿಯರು ಹೀಗೆ ಗೋಳಿಡಲಿ; ಐಗುಪ್ತಕ್ಕಾಗಿಯೂ ಅಲ್ಲಿನ ಬಹುಪ್ರಜೆಗಾಗಿಯೂ ದುಃಖಿಸಿ ಈ ಗೀತವನ್ನು ಹಾಡಲಿ; ಇದು ಕರ್ತನಾದ ಯೆಹೋವನ ನುಡಿ.


ಅವರು ರೋದನಮಾಡುತ್ತಾ ನಿನ್ನ ವಿಷಯವಾಗಿ ಶೋಕಗೀತವನೆತ್ತಿ ಹೀಗೆ ಪ್ರಲಾಪಿಸುವರು - ಸಮುದ್ರದ ನಡುವೆ ಬಿಕೋ ಎನ್ನುವ ತೂರಿಗೆ ಯಾವದು ಸಮಾನ?


ಬೆಂಕಿಯು ದಂಡರೂಪವಾದ ಅದರ ಶಾಖೆಗಳಿಂದ ಹೊರಟು ಅದರ ಫಲವನ್ನು ನುಂಗಿಬಿಟ್ಟದ್ದರಿಂದ ರಾಜದಂಡಕ್ಕೆ ಯೋಗ್ಯವಾದ ಯಾವ ಗಟ್ಟಿಕೊಂಬೆಯೂ ಅದರಲ್ಲಿ ಉಳಿದಿಲ್ಲ. ಇದು ಶೋಕಗೀತ, ಶೋಕಗೀತವಾಗಿ ವಾಡಿಕೆಯಲ್ಲಿದೆ.


ಯೆಹೋವನು ಹೀಗನ್ನುತ್ತಾನೆ - ಜ್ಞಾನಿಯು ತನ್ನ ಜ್ಞಾನಕ್ಕೆ, ಪರಾಕ್ರವಿುಯು ತನ್ನ ಪರಾಕ್ರಮಕ್ಕೆ, ಐಶ್ವರ್ಯವಂತನು ತನ್ನ ಐಶ್ವರ್ಯಕ್ಕೆ ಹೆಚ್ಚಳಪಡದಿರಲಿ;


ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಪದ್ಯವನ್ನು ನೀವು ಹೀಗೆ ಎತ್ತಿ ಹೇಳಬೇಕು - ಆಹಾ, ಹಿಂಸಕನು ಕೊನೆಗೊಂಡನು, ರೇಗಾಟವು ನಿಂತಿತು!


ಏಕಂದರೆ ಅವನು ತನ್ನೊಳಗೆ - ನನ್ನ ಜ್ಞಾನಭುಜ ಬಲಗಳಿಂದಲೇ ಇದನ್ನು ಮಾಡಿದ್ದೇನೆ, ನಾನೇ ವಿವೇಕಿ; ಜನಾಂಗಗಳ ಎಲ್ಲೆಗಳನ್ನು ಕಿತ್ತು ಅವರ ನಿಧಿನಿಕ್ಷೇಪಗಳನ್ನು ಸೂರೆಮಾಡಿ ಸಿಂಹಾಸನಾರೂಢರನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ;


ಯಾವ ಜ್ಞಾನವೂ ಯಾವ ವಿವೇಕವೂ ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವದಿಲ್ಲ.


ಯೆರೆಮೀಯನು ಯೋಷೀಯನನ್ನು ಕುರಿತು ಶೋಕಗೀತವನ್ನು ರಚಿಸಿದನು. ಎಲ್ಲಾ ಗಾಯಕರೂ ಗಾಯಕಿಯರೂ ಅವನನ್ನು ಇಂದಿನವರೆಗೆ ತಮ್ಮ ಶೋಕಗೀತಗಳಲ್ಲಿ ವರ್ಣಿಸುತ್ತಿರುತ್ತಾರೆ. ಆ ಗೀತಗಳನ್ನು ಹಾಡುವದು ಇಸ್ರಾಯೇಲ್ಯರಲ್ಲಿ ಒಂದು ಪದ್ಧತಿಯಾಯಿತು.


ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನ ವಿಷಯವಾಗಿ ಶೋಕಗೀತವನ್ನೆತ್ತಿ ಅವನಿಗೆ ಹೀಗೆ ನುಡಿ - ನೀನು ಜನಾಂಗಗಳಲ್ಲಿ ಮೃಗರಾಜನೆನಿಸಿಕೊಂಡಿದ್ದಿ; ಇಗೋ ಮಹಾನದಿಯಲ್ಲಿನ ಪೇರ್ಮೊಸಳೆಯಾಗಿಬಿಟ್ಟಿ; ನೀನಿದ್ದ ನದಿಗಳನ್ನು ಭೇದಿಸಿಕೊಂಡು ಬಂದು ನೀರನ್ನು ನಿನ್ನ ಕಾಲುಗಳಿಂದ ಕಲಕಿ ಜನಾಂಗಗಳ ಹೊಳೆಗಳನ್ನೂ ತುಳಿದು ಬದಿಮಾಡಿದಿ.


ನೀವು ಇದರ ಹಣ್ಣನ್ನು ತಿಂದಾಗಲೇ ನಿಮ್ಮ ಕಣ್ಣುಗಳು ತೆರೆಯುವವು; ನೀವು ದೇವರಂತೆ ಆಗಿ ಒಳ್ಳೇದರ ಕೆಟ್ಟದ್ದರ ಭೇದವನ್ನು ಅರಿತವರಾಗುವಿರಿ; ಇದು ದೇವರಿಗೆ ಚೆನ್ನಾಗಿ ಗೊತ್ತುಂಟು ಅಂದಿತು.


ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು -


ನಿನ್ನ ಸೃಷ್ಟಿಯ ದಿನದಿಂದ ನಿನ್ನಲ್ಲಿ ಅಪರಾಧವು ಸಿಕ್ಕುವ ತನಕ ನಿನ್ನ ನಡತೆಯು ನಿರ್ದೋಷವಾಗಿ ಕಾಣುತಿತ್ತು.


ನರಪುತ್ರನೇ, ಇಸ್ರಾಯೇಲ್ ವಂಶದವರು ತಮ್ಮ ಅಪರಾಧಗಳ ನಿವಿುತ್ತ ನಾಚಿಕೆಪಡುವಂತೆ ದೇವಾಲಯವನ್ನು ಅವರಿಗೆ ತೋರಿಸು; ಅವರು ಅದನ್ನು ಅಳತೆ ಮಾಡಲಿ.


ದಮಸ್ಕದ ಪಕ್ಕದಲ್ಲಿನ ಹಮಾತಿನಲ್ಲಿಯೂ ಬಹು ಜಾಣತನದವುಗಳು ಎಂದುಕೊಂಡಿರುವ ತೂರ್ ಚೀದೋನ್ ಪಟ್ಟಣಗಳಲ್ಲಿಯೂ ಕಣ್ಣಿಟ್ಟಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು