Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 28:17 - ಕನ್ನಡ ಸತ್ಯವೇದವು J.V. (BSI)

17 ನೀನು ನಿನ್ನ ಸೊಬಗಿನ ನಿವಿುತ್ತ ಉಬ್ಬಿದ ಮನಸ್ಸುಳ್ಳವನಾಗಿ ನಿನ್ನ ಮೆರೆತದಿಂದ ನಿನ್ನ ಬುದ್ಧಿಯನ್ನು ಹಾಳುಮಾಡಿಕೊಂಡಿ; ಇದರಿಂದ ನಾನು ನಿನ್ನನ್ನು ನೆಲಕ್ಕೆ ದೊಬ್ಬಿ ನೀನು ಅರಸರಿಗೆ ನೋಟವಾಗುವಂತೆ ಅವರ ಕಣ್ಣಮುಂದೆ ಹಾಕಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “‘ನಿನ್ನ ಸೌಂದರ್ಯದ ನಿಮಿತ್ತ ನಿನ್ನ ಹೃದಯವು ಉಬ್ಬಿಕೊಂಡಿತು; ನಿನ್ನ ಪ್ರಕಾಶದ ನಿಮಿತ್ತ ನಿನ್ನ ಬುದ್ಧಿಯನ್ನು ಹಾಳು ಮಾಡಿಕೊಂಡೆ; ನಾನು ನಿನ್ನನ್ನು ನೆಲಕ್ಕೆ ಹಾಕಿ, ನಿನ್ನನ್ನು ಅರಸರು ನೋಡುವಂತೆ ಅವರ ಕಣ್ಣ ಮುಂದೆ ಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸೊಬಗಿನ ನಿಮಿತ್ತ ನೀ ಗರ್ವಿಯಾದೆ ಮೆರೆತದಿಂದ ಬುದ್ಧಿಯನ್ನು ಕಳೆದುಕೊಂಡೆ. ಎಂದೇ, ನಾ ನಿನ್ನನ್ನು ದೊಬ್ಬಿಬಿಟ್ಟೆ, ನೆಲಕೆ ಅರಸರ ಕಣ್ಮುಂದೆ ಎಸೆದೆ ಅವರಿಗೆ ಅವರಿಗೆ ನೋಟವಾಗಲೆಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಿನ್ನ ಸೌಂದರ್ಯವು ನಿನಗೆ ಹೆಮ್ಮೆ ಏರುವಂತೆ ಮಾಡಿತು. ನಿನ್ನ ಘನತೆಯು ನಿನ್ನ ಜ್ಞಾನವನ್ನು ಕೆಡಿಸಿತು. ಆದ್ದರಿಂದ ನಿನ್ನನ್ನು ನೆಲಕ್ಕೆ ದಬ್ಬಿದೆ. ಈಗ ಬೇರೆ ರಾಜರುಗಳು ನಿನ್ನನ್ನೆ ಎವೆಯಿಕ್ಕದೆ ನೋಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನೀನು ನಿನ್ನ ಸೌಂದರ್ಯದ ನಿಮಿತ್ತ ಉಬ್ಬಿದ ಮನಸ್ಸುಳ್ಳವನಾದೆ. ನಿನ್ನ ಮೆರೆತದ ನಿಮಿತ್ತ ನಿನ್ನ ಬುದ್ಧಿಯನ್ನು ಕಳೆದುಕೊಂಡೆ. ಇದರಿಂದ ನಾನು ನಿನ್ನನ್ನು ನೆಲಕ್ಕೆ ದೊಬ್ಬಿ ನೀನು ಅರಸರಿಗೆ ನೋಟವಾಗಲೆಂದೆ ಅವರ ಕಣ್ಣಮುಂದೆ ಎಸೆದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 28:17
28 ತಿಳಿವುಗಳ ಹೋಲಿಕೆ  

ನೀನು ನಿನ್ನ ಅಧಿಕಜ್ಞಾನದಿಂದಲೂ ವ್ಯಾಪಾರದಿಂದಲೂ ಸಂಪತ್ತನ್ನು ವೃದ್ಧಿಮಾಡಿಕೊಂಡಿರಲು ನಿನ್ನ ಮನಸ್ಸು ನಿನ್ನ ಆಸ್ತಿಯ ನಿವಿುತ್ತ ಉಬ್ಬಿಕೊಂಡಿದೆ;


ಆತನು ನಮ್ಮ ಮೇಲೆ ಅತಿಶಯವಾದ ಕೃಪೆಯನ್ನು ಇಡುತ್ತಾನೆ. ಆದುದರಿಂದ - ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ ಎಂದು ಶಾಸ್ತ್ರವು ಹೇಳುತ್ತದೆ.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆ ವೃಕ್ಷವು ಬಹಳ ಎತ್ತರವಾಗಿ ಬೆಳೆದು ತನ್ನ ತುದಿಯನ್ನು ಮೋಡಕ್ಕೆ ತಗಲಿಸಿ ತನ್ನ ನೀಳದ ವಿಷಯವಾಗಿ ಉಬ್ಬಿಕೊಂಡದರಿಂದ


ನರಪುತ್ರನೇ, ನೀನು ತೂರಿನ ಪ್ರಭುವಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನು ದೇವರು, ಸಮುದ್ರ ಮಧ್ಯದಲ್ಲಿ ದೇವರ ಆಸನವನ್ನೇ ಹತ್ತಿದ್ದೇನೆ ಅಂದುಕೊಂಡಿಯಷ್ಟೆ; ನೀನು ನಿನ್ನ ಮನಸ್ಸನ್ನು ದೇವರ ಮನಸ್ಸಿನಷ್ಟು ಹೆಚ್ಚಿಸಿಕೊಂಡದೇನು? ನೀನು ಎಂದಿಗೂ ದೇವರಲ್ಲ, ನೀನು ನರಪ್ರಾಣಿಯೇ.


ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.


ಹೌದು, ಬಹುಜನಾಂಗಗಳು ನಿನ್ನ ಗತಿಗೆ ಬೆಚ್ಚಿಬೆರಗಾಗುವಂತೆ ಮಾಡುವೆನು; ನಾನು ನನ್ನ ಖಡ್ಗವನ್ನು ಅವುಗಳ ಅರಸರ ಕಣ್ಣೆದುರಿಗೆ ಬೀಸುವಾಗ ಅವರು ನಿನ್ನ ದುರ್ಗತಿಯನ್ನು ನೆನಸಿ ಭಯಭ್ರಾಂತರಾಗುವರು; ನಿನ್ನ ಪತನದಿನದಲ್ಲಿ ಪ್ರತಿಯೊಬ್ಬನು ತನ್ನ ತನ್ನ ಪ್ರಾಣಾಪಾಯಕ್ಕೆ ಕ್ಷಣಕ್ಷಣವೂ ನಡುಗುವನು.


ನಾನು ನಿನ್ನ ಮೇಲೆ ಅತಿ ಭಯಂಕರ ಜನಾಂಗದವರಾದ ಮ್ಲೇಚ್ಫರನ್ನು ಬೀಳಮಾಡುವೆನು; ಅವರು ನಿನ್ನ ಜ್ಞಾನದ ಸೊಬಗಿನ ಮೇಲೆ ಕತ್ತಿಹಿರಿದು ನಿನ್ನ ಹೊಳಪನ್ನು ಹೊಲಸುಮಾಡುವರು.


ಹೀಗೆ ನಾನು ದೇಶದೊಳಗಿಂದ ಪುಂಡಾಟವನ್ನು ತೊಲಗಿಸುವೆನು; ಇದರಿಂದ ಸಮಸ್ತ ಸ್ತ್ರೀಯರಿಗೂ ನಿಮ್ಮ ಪುಂಡಾಟವನ್ನು ಅನುಸರಿಸಬಾರದೆಂದು ಬುದ್ಧಿಬರುವದು. ನಿಮ್ಮ ಪುಂಡಾಟದ ಫಲವನ್ನು ನಿಮಗೆ ತಿನ್ನಿಸುವರು;


ನಿನ್ನ ಮನೆಗಳನ್ನು ಬೆಂಕಿಯಿಂದ ಸುಡುವರು; ಬಹುಮಂದಿ ಹೆಂಗಸರ ಕಣ್ಣೆದುರಿನಲ್ಲಿ ನಿನ್ನನ್ನು ದಂಡಿಸುವರು; ನೀನು ನಿನ್ನ ಸೂಳೆತನವನ್ನು ನಿಲ್ಲಿಸಿಬಿಡುವಂತೆ ನಾನು ಮಾಡುವೆನು; ನೀನು [ನಿನ್ನ ವಿುಂಡರಿಗೆ] ಇನ್ನು ಹಣಕೊಡದಿರುವಿ.


ಜ್ಞಾನಿಗಳು ಆಶಾಭಂಗಪಟ್ಟು ಬೆಬ್ಬರಬಿದ್ದು ಸಿಕ್ಕಿಕೊಂಡಿದ್ದಾರೆ; ಇಗೋ, ಯೆಹೋವನ ಮಾತನ್ನು ನಿರಾಕರಿಸಿದರು;


ಗರ್ವದಿಂದ ಭಂಗ; ಉಬ್ಬಿನಿಂದ ದೊಬ್ಬು.


ಎಲ್ಲಿ ಹೆಮ್ಮೆಯೋ ಅಲ್ಲಿ ನಾಚಿಕೆ; ದೀನರಲ್ಲಿ ಜ್ಞಾನ.


ಯೆಹೋವನು ದೀನರಿಗೆ ಆಧಾರವಾಗಿದ್ದಾನೆ; ದುಷ್ಟರನ್ನು ನೆಲಕ್ಕೆ ಹತ್ತಿಸಿಬಿಡುತ್ತಾನೆ.


ಹೌದು, ನೀನು ಅವರನ್ನು ಅಪಾಯಕರ ಸ್ಥಳದಲ್ಲಿಟ್ಟು ಬೀಳಿಸಿ ನಾಶಮಾಡಿಬಿಡುತ್ತೀ.


ಆ ಲತೆಯನ್ನು ಕ್ರೋಧಿಗಳು ಕಿತ್ತು ನೆಲದ ಮೇಲೆ ಬಿಸಾಟುಬಿಟ್ಟರು, ಮೂಡಣ ಗಾಳಿಯು ಅದರ ಫಲವನ್ನು ಬಾಡಿಸಿತು, ಅದರ ಗಟ್ಟಿಕೊಂಬೆಗಳು ಮುರಿದು ಒಣಗಿಹೋದವು, ಬೆಂಕಿಯು ಅವುಗಳನ್ನು ನುಂಗಿತು.


ಆಗ ಸಮುದ್ರದ ಸುತ್ತುಮುತ್ತಲಿನ ಸಕಲಪ್ರಭುಗಳು ತಮ್ಮ ಸಿಂಹಾಸನಗಳಿಂದಿಳಿದು ನಿಲುವಂಗಿಗಳನ್ನು ತೆಗೆದುಹಾಕಿ ಬೂಟೇದಾರಿಯ ವಸ್ತ್ರಗಳನ್ನು ಕಿತ್ತೆಸೆದು ತತ್ತರವನ್ನೇ ಹೊದ್ದುಕೊಂಡು ನೆಲದ ಮೇಲೆ ಕುಕ್ಕರಿಸಿ ಕ್ಷಣಕ್ಷಣವೂ ನಡುಗುತ್ತಾ ನಿನಗೆ ಬೆಚ್ಚಿ ಬೆರಗಾಗುವರು.


ಸಮುದ್ರದ್ವಾರದಲ್ಲಿ ವಾಸಿಸುತ್ತಾ ಜನಾಂಗಗಳಿಗಾಗಿ ಬಹುದ್ವೀಪಗಳೊಂದಿಗೆ ವ್ಯಾಪಾರಮಾಡುವ ಪುರಿಯೇ! ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ತೂರೇ, ಪರಿಪೂರ್ಣಸುಂದರಿಯಾಗಿದ್ದೇನೆ ಅಂದುಕೊಂಡಿಯಲ್ಲಾ!


ನಿನ್ನ ನೆಲೆಯು ಸಮುದ್ರಮಧ್ಯವೇ; ನಿನ್ನನ್ನು ಕಟ್ಟಿದವರು ನಿನ್ನ ಸೌಂದರ್ಯವನ್ನು ಪರಿಪೂರ್ಣಗೊಳಿಸಿದರು.


ನಿನ್ನ ಸೃಷ್ಟಿಯ ದಿನದಿಂದ ನಿನ್ನಲ್ಲಿ ಅಪರಾಧವು ಸಿಕ್ಕುವ ತನಕ ನಿನ್ನ ನಡತೆಯು ನಿರ್ದೋಷವಾಗಿ ಕಾಣುತಿತ್ತು.


ದುರ್ಗಮವಾಗಿಯೂ ಎತ್ತರವಾಗಿಯೂ ಇರುವ ನಿನ್ನ ಕೋಟೆಗಳನ್ನು ಆತನು ಕೆಡವಿ ತಗ್ಗಿಸಿ ನೆಲಸಮಮಾಡಿ ದೂಳಿಗೇ ತರುವನು.


ಆತನು ಎತ್ತರದಲ್ಲಿ ವಾಸಿಸುವವರನ್ನೂ [ಅವರ] ಉನ್ನತಪಟ್ಟಣವನ್ನೂ ತಗ್ಗಿಸಿದ್ದಾನೆ. ಅದನ್ನು ಕೆಡವಿ ನೆಲಸಮಮಾಡಿ ದೂಳಿಗೆ ತಂದಿದ್ದಾನೆ.


ಅದರಿಂದ ಅವನ ಮನಸ್ಸು ಉಬ್ಬಿಕೊಳ್ಳುವದು; ಅವನು ಲಕ್ಷಾಂತರ ಸೈನಿಕರನ್ನು ಬೀಳಿಸಿದರೂ ಪ್ರಾಬಲ್ಯಕ್ಕೆ ಬಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು