Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 28:2 - ಕನ್ನಡ ಸತ್ಯವೇದವು J.V. (BSI)

2 ನರಪುತ್ರನೇ, ನೀನು ತೂರಿನ ಪ್ರಭುವಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನು ದೇವರು, ಸಮುದ್ರ ಮಧ್ಯದಲ್ಲಿ ದೇವರ ಆಸನವನ್ನೇ ಹತ್ತಿದ್ದೇನೆ ಅಂದುಕೊಂಡಿಯಷ್ಟೆ; ನೀನು ನಿನ್ನ ಮನಸ್ಸನ್ನು ದೇವರ ಮನಸ್ಸಿನಷ್ಟು ಹೆಚ್ಚಿಸಿಕೊಂಡದೇನು? ನೀನು ಎಂದಿಗೂ ದೇವರಲ್ಲ, ನೀನು ನರಪ್ರಾಣಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನರಪುತ್ರನೇ, ನೀನು ತೂರಿನ ಅರಸನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನೇ ದೇವರು, ಸಮುದ್ರ ಮಧ್ಯದಲ್ಲಿ ದೇವರ ಸ್ಥಾನದಲ್ಲಿ ಕುಳಿತುಕೊಂಡಿರುವೆನು’ ಎಂದು ಹೇಳಿಕೊಂಡಿದ್ದೀ; ನೀನು ದೇವರಲ್ಲ, ಮನುಷ್ಯನೇ. ಆದರೂ ನಿನ್ನನ್ನು ನೀನೇ ದೇವರಿಗೆ ಸಮಾನನೆಂದು ಭಾವಿಸಿಕೊಂಡಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನರಪುತ್ರನೇ, ನೀನು ಟೈರ್ ನಗರದ ರಾಜನಿಗೆ ಹೀಗೆ ನುಡಿ; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಗರ್ವದಿಂದ ‘ಆಹಾ, ನಾನೆ ದೇವರು, ಸಮುದ್ರ ಮಧ್ಯೆ ದೇವರ ಆಸನವನ್ನೇ ಅಲಂಕರಿಸಿದ್ದೇನೆ’, ಎಂದುಕೊಂಡೆ. ನೀನು ನಿನ್ನ ದೇವರಿಗೆ ಸಮನಾಗಿಸಿಕೊಂಡೆಯೋ? ನೀನು ಎಂದಿಗೂ ದೇವರಲ್ಲ, ನೀನೊಬ್ಬ ನರಪ್ರಾಣಿಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನರಪುತ್ರನೇ, ತೂರಿನ ರಾಜನಿಗೆ ಹೀಗೆ ಹೇಳು, ‘ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ: “‘ನೀನು ಬಹಳ ಹೆಮ್ಮೆಯುಳ್ಳವನು. “ನಾನು ದೇವರು ಎಂದು ಹೇಳುವೆ. ಸಾಗರದ ಮಧ್ಯದಲ್ಲಿ ದೇವರುಗಳ ಸಿಂಹಾಸನದಲ್ಲಿ ನಾನು ಕೂತಿರುತ್ತೇನೆ ಎಂದು ಅನ್ನುವೆ.” “‘ಆದರೆ ನೀನು ಮನುಷ್ಯನು, ದೇವರಲ್ಲ. ನೀನು ದೇವರೆಂದು ನೀನೇ ನೆನಸಿಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಮನುಷ್ಯಪುತ್ರನೇ, ಟೈರಿನ ಆಡಳಿತ ಅಧಿಕಾರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನೀನು ಗರ್ವದಿಂದ, “ನಾನು ಒಬ್ಬ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿರುವೆನು,” ಎಂದು ಹೇಳಿಕೊಂಡಿದ್ದೀ. ಆದರೆ ನೀನು ದೇವರಲ್ಲ, ಮನುಷ್ಯನೇ, ಆದರೂ ನಿನ್ನನ್ನು ನೀನೇ ದೇವರಿಗೆ ಸಮನೆಂದು ಭಾವಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 28:2
40 ತಿಳಿವುಗಳ ಹೋಲಿಕೆ  

ನೀನು ನಿನ್ನನ್ನು ಸಂಹರಿಸುವವನೆದುರಿಗೆ ನಾನು ದೇವರು ಎಂದು ಹೇಳುವಿಯಾ? ಹತಿಸುವವನ ಕೈಗೆ ನೀನು ಎಂದಿಗೂ ದೇವರಲ್ಲ, ನರಪ್ರಾಣಿಯೇ.


ಯಾವದು ದೇವರೆನಿಸಿಕೊಳ್ಳುತ್ತದೋ ಯಾವದು ಪೂಜೆ ಹೊಂದುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಹೇಳಿಕೊಂಡು ದೇವರ ಗರ್ಭಗುಡಿಯಲ್ಲೇ ಕೂತುಕೊಳ್ಳುತ್ತಾನೆ.


ಐಗುಪ್ತ್ಯರು ಮನುಷ್ಯ ಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಮಾಂಸಮಯವೇ, ಆತ್ಮವಲ್ಲ; ಯೆಹೋವನು ಕೈಚಾಚುವಾಗ ಸಹಾಯ ಮಾಡಿದವನು ಮುಗ್ಗರಿಸುವನು, ಸಹಾಯಪಡೆದವನು ಬಿದ್ದು ಹೋಗುವನು, ಅಂತು ಎಲ್ಲರೂ ಒಟ್ಟಿಗೆ ಲಯವಾಗುವರು.


ಗರ್ವದಿಂದ ಭಂಗ; ಉಬ್ಬಿನಿಂದ ದೊಬ್ಬು.


ಯೆಹೋವನೇ, ಅವರಿಗೆ ಭಯವನ್ನು ಹುಟ್ಟಿಸು; ಜನಾಂಗಗಳು ತಾವು ಮನುಷ್ಯಮಾತ್ರದವರೆಂದು ತಿಳಿದುಕೊಳ್ಳಲಿ. ಸೆಲಾ.


ಸೇನಾಧೀಶ್ವರನಾದ ಯೆಹೋವನ [ನ್ಯಾಯನಿರ್ಣಯ] ದಿವಸವು ಗರ್ವದಿಂದ ಹೆಚ್ಚಿಕೊಂಡಿರುವ ಸಮಸ್ತಕ್ಕೂ ಸಂಭವಿಸುವದು; ಆಗ ಅದೆಲ್ಲಾ ತಗ್ಗುವದು.


ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರದಿಂದ ಸೊಂಟಾಕಟ್ಟಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.


ಅವನು ಹೊಸದಾಗಿ ಸಭೆಯಲ್ಲಿ ಸೇರಿದವನಾಗಿರಬಾರದು; ಅಂಥವನಾದರೆ ಉಬ್ಬಿಕೊಂಡು ಸೈತಾನನಿಗೆ ಪ್ರಾಪ್ತವಾದ ಶಿಕ್ಷಾವಿಧಿಗೆ ಒಳಗಾದಾನು.


ಇಗೋ, ಆ ದುಷ್ಟನ ಅಂತರಾತ್ಮವು ಉಬ್ಬಿಕೊಂಡಿದೆ, ಯಥಾರ್ಥವಲ್ಲ; ನೀತಿವಂತನೋ ತನ್ನ ನಂಬಿಕೆಯಿಂದಲೇ ಬದುಕುವನು.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆ ವೃಕ್ಷವು ಬಹಳ ಎತ್ತರವಾಗಿ ಬೆಳೆದು ತನ್ನ ತುದಿಯನ್ನು ಮೋಡಕ್ಕೆ ತಗಲಿಸಿ ತನ್ನ ನೀಳದ ವಿಷಯವಾಗಿ ಉಬ್ಬಿಕೊಂಡದರಿಂದ


ನೀನು ನಿನ್ನ ಸೊಬಗಿನ ನಿವಿುತ್ತ ಉಬ್ಬಿದ ಮನಸ್ಸುಳ್ಳವನಾಗಿ ನಿನ್ನ ಮೆರೆತದಿಂದ ನಿನ್ನ ಬುದ್ಧಿಯನ್ನು ಹಾಳುಮಾಡಿಕೊಂಡಿ; ಇದರಿಂದ ನಾನು ನಿನ್ನನ್ನು ನೆಲಕ್ಕೆ ದೊಬ್ಬಿ ನೀನು ಅರಸರಿಗೆ ನೋಟವಾಗುವಂತೆ ಅವರ ಕಣ್ಣಮುಂದೆ ಹಾಕಿದೆನು.


ಭಂಗಕ್ಕೆ ಮೊದಲು ಗರ್ವದ ಹೃದಯ; ಮಾನಕ್ಕೆ ಮುಂಚೆ ದೈನ್ಯ.


ಆದರೆ ಅವನು ಬಲಿಷ್ಠನಾದ ಮೇಲೆ ಗರ್ವಿಷ್ಠನಾಗಿ ಭ್ರಷ್ಟನಾದನು; ತನ್ನ ದೇವರಾದ ಯೆಹೋವನಿಗೆ ದ್ರೋಹಿಯಾಗಿ ಧೂಪವೇದಿಯ ಮೇಲೆ ತಾನೇ ಧೂಪ ಹಾಕಬೇಕೆಂದು ಯೆಹೋವನ ಆಲಯದೊಳಕ್ಕೆ ಹೋದನು.


ಒಂದು ವೇಳೆ ನೀವು ಮದಿಸಿ ನಿಮ್ಮ ದೇವರಾದ ಯೆಹೋವನನ್ನು ಮರೆತೀರಿ.


ನೀವು ಇದರ ಹಣ್ಣನ್ನು ತಿಂದಾಗಲೇ ನಿಮ್ಮ ಕಣ್ಣುಗಳು ತೆರೆಯುವವು; ನೀವು ದೇವರಂತೆ ಆಗಿ ಒಳ್ಳೇದರ ಕೆಟ್ಟದ್ದರ ಭೇದವನ್ನು ಅರಿತವರಾಗುವಿರಿ; ಇದು ದೇವರಿಗೆ ಚೆನ್ನಾಗಿ ಗೊತ್ತುಂಟು ಅಂದಿತು.


ಆಗ ಅವನು ದೇವರಾತ್ಮವಶನಾದ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು. ಅಲ್ಲಿ ನಾನು ರಕ್ತವರ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ಕಂಡೆನು; ಆ ಮೃಗದ ಮೈಮೇಲೆಲ್ಲಾ ದೇವದೂಷಣೆಯ ಹೆಸರುಗಳು ತುಂಬಿದ್ದವು.


ಅವಳು ಎಷ್ಟು ಮಟ್ಟಿಗೆ ತನ್ನನ್ನು ಘನಪಡಿಸಿಕೊಂಡು ಭೋಗಿನಿಯಾಗಿದ್ದಾಳೋ ಅಷ್ಟು ಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ. ಅವಳು ತನ್ನ ಹೃದಯದಲ್ಲಿ - ನಾನು ರಾಣಿಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ,


ಅದು ಕಿರೀಟದಾಯಕವು; ಅದರ ವರ್ತಕರು ಪ್ರಭುಗಳು, ಅದರ ವ್ಯಾಪಾರಿಗಳು ಲೋಕಮಾನ್ಯರು; ಇಂಥ ತೂರಿಗೆ ವಿರುದ್ಧವಾಗಿ ಈ ಸಂಕಲ್ಪವನ್ನು ಮಾಡಿದವನು ಯಾರು?


ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ, ನಾನು ವಿಧವೆಯಾಗಿ ಕೂತುಕೊಳ್ಳುವದಿಲ್ಲ, ಪುತ್ರಶೋಕವನ್ನು ಅನುಭವಿಸುವದಿಲ್ಲ ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು -


ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಹೆಮ್ಮೆಪಡುವದು, ಹೊಟ್ಟೆತುಂಬಿಸಿಕೊಳ್ಳುವದು, ಸ್ವಸುಖದಲ್ಲಿ ಮುಳುಗಿರುವದು, ಇವು ಆಕೆಯಲ್ಲಿಯೂ ಆಕೆಯ ಕುಮಾರ್ತೆಯರಲ್ಲಿಯೂ ಇದ್ದವು. ಅಲ್ಲದೆ ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ.


ಇವರು ನಿನ್ನ ವಿಷಯದಲ್ಲಿ - ನಾವಿಕರ ನಿವಾಸವೇ, ಹೆಸರುವಾಸಿಯ ಪುರಿಯೇ, ಸಮುದ್ರದಿಂದ ಬಲಗೊಂಡ ನಗರಿಯೇ, ನೀನು ಎಷ್ಟೋ ಹಾಳಾದಿ! ಸಮುದ್ರಸಂಚಾರಿಗಳಿಗೆಲ್ಲಾ ಭಯಾಸ್ಪದರಾಗಿದ್ದ ನಿನ್ನ ನಿವಾಸಿಗಳು ಎಷ್ಟೋ ಹಾಳಾದರು!


ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು -


ಈ ನಿನೆವೆಯು ಮೊದಲು ಉಲ್ಲಾಸದ ನಗರಿಯಾಗಿ ನೆಮ್ಮದಿಯಿಂದ ನೆಲೆಗೊಂಡಿದ್ದು ತನ್ನ ಹೃದಯದೊಳಗೆ - ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ ಅಂದುಕೊಳ್ಳುತ್ತಿತ್ತು; ಅಯ್ಯೋ, ಎಷ್ಟೋ ಹಾಳಾಗಿ ಹೋಗಿ ಮೃಗಗಳು ತಂಗುವ ಹಕ್ಕೆಯಾಗಿದೆ! ಹಾದುಹೋಗುವವರೆಲ್ಲರೂ ಸಿಳ್ಳುಹಾಕಿ ಕೈಯಾಡಿಸುತ್ತಾರೆ.


ದಮಸ್ಕದ ಪಕ್ಕದಲ್ಲಿನ ಹಮಾತಿನಲ್ಲಿಯೂ ಬಹು ಜಾಣತನದವುಗಳು ಎಂದುಕೊಂಡಿರುವ ತೂರ್ ಚೀದೋನ್ ಪಟ್ಟಣಗಳಲ್ಲಿಯೂ ಕಣ್ಣಿಟ್ಟಿದ್ದಾನೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಐಗುಪ್ತದ ಅರಸನಾದ ಫರೋಹನೇ, ನಿನ್ನ ನದೀ ಶಾಖೆಗಳ ನಡುವೆ ಒರಗಿಕೊಂಡು - ಈ ನದಿಯು ನನ್ನದೇ, ನನಗಾಗಿಯೇ ಮಾಡಿಕೊಂಡದು ಅಂದುಕೊಳ್ಳುವ ಪೇರ್ಮೊಸಳೆಯೇ, ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ.


ಫರೋಹನು - ಈ ನದಿಯು ನನ್ನದೇ, ನಾನೇ ಮಾಡಿಕೊಂಡದು ಅಂದುಕೊಂಡ ಕಾರಣ ಐಗುಪ್ತದೇಶವು ಹಾಳುಪಾಳಾಗುವದು; ಆಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.


ಅದರಿಂದ ಅವನ ಮನಸ್ಸು ಉಬ್ಬಿಕೊಳ್ಳುವದು; ಅವನು ಲಕ್ಷಾಂತರ ಸೈನಿಕರನ್ನು ಬೀಳಿಸಿದರೂ ಪ್ರಾಬಲ್ಯಕ್ಕೆ ಬಾರನು.


ರಾಜನು ಮನಸ್ಸುಬಂದ ಹಾಗೆ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಉಬ್ಬಿ ದೇವಾಧಿದೇವನನ್ನು ವಿುತಿಮೀರಿ ದೂಷಿಸಿ [ನಿಮ್ಮ ಮೇಲಿನ] ದೇವೋಗ್ರವು ತೀರುವ ತನಕ ವೃದ್ಧಿಯಾಗಿರುವನು; ದೈವಸಂಕಲ್ಪವು ನೆರವೇರಲೇಬೇಕು.


ಅವನು ತನ್ನ ಪಿತೃಗಳ ದೇವರುಗಳನ್ನಾಗಲಿ ಸ್ತ್ರೀಯರು ಮೋಹಿಸುವ ದೇವರನ್ನಾಗಲಿ ಯಾವ ದೇವರನ್ನಾಗಲಿ ಲಕ್ಷಿಸನು. ಎಲ್ಲಾ ದೇವರುಗಳಿಗಿಂತ ತನ್ನನ್ನೇ ಹೆಚ್ಚಿಸಿಕೊಳ್ಳುವನು.


ಮತ್ತು ನಿನ್ನನ್ನೂ ಅವನನ್ನೂ ಕರೆದವನು ಬಂದು - ಇವನಿಗೆ ಸ್ಥಳಬಿಡು ಎಂದು ನಿನಗೆ ಹೇಳುವಾಗ ನೀನು ನಾಚಿಕೊಂಡು ಕಡೆಯ ಸ್ಥಾನದಲ್ಲಿ ಕೂತುಕೊಳ್ಳುವದಕ್ಕೆ ಹೋಗುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು