Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 28:3 - ಕನ್ನಡ ಸತ್ಯವೇದವು J.V. (BSI)

3 ಇಗೋ, ನೀನು ದಾನಿಯೇಲನಿಗಿಂತಲೂ ಬುದ್ಧಿವಂತನು; ನಿನಗೆ ಮರೆಯಾದ ಮರ್ಮವು ಯಾವದೂ ಇಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ಇಗೋ, ನೀನು ದಾನಿಯೇಲನಿಗಿಂತಲೂ ಜ್ಞಾನಿಯಾಗಿರುವೆಯಾ; ನಿನಗೆ ರಹಸ್ಯವಾದುದು ಯಾವುದೇ ಇದ್ದರು ನಿನಗೆ ಮರೆಯಾಗಿರುವುದಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನೀನು ದಾನಿಯೇಲನಿಗಿಂತಲೂ ಬುದ್ಧಿವಂತನೋ? ಹಾಗಾದರೆ ನಿನಗೆ ಮರೆಯಾದ ರಹಸ್ಯ ಯಾವುದೂ ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀನು ದಾನಿಯೇಲನಿಗಿಂತ ಜಾಣನು ಎಂಬುದಾಗಿ ಭಾವಿಸುತ್ತಿ. ಎಲ್ಲಾ ರಹಸ್ಯಗಳು ನನಗೆ ಗೊತ್ತು ಎಂದು ನೀನು ನೆನಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೀನು ದಾನಿಯೇಲನಿಗಿಂತ ಜ್ಞಾನಿಯಾಗಿರುವೆಯಾ? ನಿಮ್ಮಿಂದ ಮರೆಮಾಡಲು ಯಾವುದೇ ರಹಸ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 28:3
16 ತಿಳಿವುಗಳ ಹೋಲಿಕೆ  

ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಸರ್ವವಿಷಯಗಳಲ್ಲಿ ಅವರನ್ನು ವಿಚಾರಮಾಡಲು ಅವನ ಪೂರ್ಣರಾಜ್ಯದಲ್ಲಿನ ಎಲ್ಲಾ ಜೋಯಿಸರಿಗಿಂತಲೂ ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.


ಆತನು ಅಗಾಧವಿಷಯಗಳನ್ನೂ ಗೂಡಾರ್ಥಗಳನ್ನೂ ಬೈಲಿಗೆ ತರುತ್ತಾನೆ; ಕಗ್ಗತ್ತಲೆಯಲ್ಲಿ ಅಡಗಿರುವದೂ ಆತನಿಗೆ ಗೋಚರ; ತೇಜಸ್ಸು ಆತನಲ್ಲೇ ನೆಲೆಗೊಂಡಿದೆ.


ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತವಿುತ್ರನಂತಿರುವನು; ಅವರಿಗೇ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.


ದೇವರ ಆಲೋಚನಾಸಭೆಯಲ್ಲಿದ್ದುಕೊಂಡು ಅಲ್ಲಿ ಹೇಳಿದ್ದನ್ನು ಕೇಳಿದಿಯೇನೋ? ಜ್ಞಾನವನ್ನೆಲ್ಲಾ ನಿನ್ನ ಕಡೆಗೆ ಸೆಳೆದುಕೊಂಡಿದ್ದೀಯಾ?


ಸೊಲೊಮೋನನು ಆಕೆಯ ಎಲ್ಲಾ ಪ್ರಶ್ನೆಗಳಿಗೆ ಉತ್ತರಕೊಟ್ಟನು; ಅರಸನಾದ ಅವನಿಗೆ ತಿಳಿಯದಂಥದು ಅವುಗಳಲ್ಲಿ ಒಂದೂ ಇರಲಿಲ್ಲವಾದದರಿಂದ ಎಲ್ಲವುಗಳಿಗೂ ಉತ್ತರ ಕೊಟ್ಟನು.


ಯೆಹೋವನು ಹೀಗನ್ನುತ್ತಾನೆ - ಜ್ಞಾನಿಯು ತನ್ನ ಜ್ಞಾನಕ್ಕೆ, ಪರಾಕ್ರವಿುಯು ತನ್ನ ಪರಾಕ್ರಮಕ್ಕೆ, ಐಶ್ವರ್ಯವಂತನು ತನ್ನ ಐಶ್ವರ್ಯಕ್ಕೆ ಹೆಚ್ಚಳಪಡದಿರಲಿ;


ನೋಹ ದಾನಿಯೇಲ ಯೋಬ ಎಂಬೀ ಮೂವರು ಪುರುಷರು ಅದರಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು; ಇದು ಕರ್ತನಾದ ಯೆಹೋವನ ನುಡಿ.


ನಿನ್ನ ಸೃಷ್ಟಿಯ ದಿನದಿಂದ ನಿನ್ನಲ್ಲಿ ಅಪರಾಧವು ಸಿಕ್ಕುವ ತನಕ ನಿನ್ನ ನಡತೆಯು ನಿರ್ದೋಷವಾಗಿ ಕಾಣುತಿತ್ತು.


ಆರಿಸಲ್ಪಟ್ಟ ಯುವಕರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಎಂಬ ಯೆಹೂದ್ಯರು ಸೇರಿದ್ದರು.


ದೇವರ ನಾಮಕ್ಕೆ ಯುಗಯುಗಾಂತರಗಳಲ್ಲಿಯೂ ಕೊಂಡಾಟವಾಗಲಿ! ಜ್ಞಾನತ್ರಾಣಗಳು ಆತನವುಗಳೇ.


ಬೇಲ್ತೆಶಚ್ಚರನೇ, ಜೋಯಿಸರಲ್ಲಿ ಪ್ರಧಾನನೇ, ಪರಿಶುದ್ಧದೇವರುಗಳ ಆತ್ಮವು ನಿನ್ನಲ್ಲಿ ನೆಲೆಯಾಗಿದೆ ಎಂದು ತಿಳಿದಿದ್ದೇನೆ, ಯಾವ ರಹಸ್ಯವೂ ನಿನಗೆ ಅಶೋಧ್ಯವಲ್ಲವೆಂಬದು ನನಗೆ ಗೊತ್ತು. ಆದದರಿಂದ ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು