Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 28:4 - ಕನ್ನಡ ಸತ್ಯವೇದವು J.V. (BSI)

4 ನಿನ್ನ ಜ್ಞಾನವಿವೇಕಗಳಿಂದ ನೀನು ಐಶ್ವರ್ಯವನ್ನು ಗಳಿಸಿ ನಿನ್ನ ಬೊಕ್ಕಸಗಳಲ್ಲಿ ಬೆಳ್ಳಿಬಂಗಾರವನ್ನು ತುಂಬಿಸಿಕೊಂಡಿದ್ದೀ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿನ್ನ ಜ್ಞಾನದಿಂದಲೂ, ನಿನ್ನ ವಿವೇಕದಿಂದಲೂ ನೀನು ಐಶ್ವರ್ಯವನ್ನು ಹೆಚ್ಚಿಸಿಕೊಂಡಿರುವೆ. ನಿನ್ನ ಭಂಡಾರಗಳಲ್ಲಿ ಬೆಳ್ಳಿಯನ್ನೂ, ಬಂಗಾರವನ್ನು ತುಂಬಿಸಿಕೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಿನ್ನ ಜ್ಞಾನವಿವೇಕಗಳಿಂದ ಐಶ್ವರ್ಯವನ್ನು ಗಳಿಸಿ, ನಿನ್ನ ಬೊಕ್ಕಸಗಳಲ್ಲಿ ಬೆಳ್ಳಿಬಂಗಾರವನ್ನು ತುಂಬಿಸಿಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿನ್ನ ಜ್ಞಾನ ಮತ್ತು ತಿಳುವಳಿಕೆಯಿಂದ ನೀನು ಐಶ್ವರ್ಯವನ್ನು ಕೂಡಿಹಾಕಿದ್ದೀ. ನಿನ್ನ ಖಜಾನೆಯಲ್ಲಿ ಬೆಳ್ಳಿಬಂಗಾರವನ್ನು ಶೇಖರಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿನ್ನ ಜ್ಞಾನದಿಂದಲೂ ನಿನ್ನ ವಿವೇಕದಿಂದಲೂ ನಿನಗೆ ಐಶ್ವರ್ಯವನ್ನು ಗಳಿಸಿಕೊಂಡಿರುವೆ. ಚಿನ್ನವನ್ನೂ ಬೆಳ್ಳಿಯನ್ನೂ ನಿನ್ನ ಭಂಡಾರಗಳಲ್ಲಿ ಇಟ್ಟುಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 28:4
11 ತಿಳಿವುಗಳ ಹೋಲಿಕೆ  

ಧನವಂತನು ತನ್ನ ಐಶ್ವರ್ಯವನ್ನು ಬಲವಾದ ಕೋಟೆಯೆಂದೂ ಎತ್ತರವಾದ ಗೋಡೆಯೆಂದೂ ಭಾವಿಸಿಕೊಳ್ಳುತ್ತಾನೆ.


ತನ್ನ ಬಲೆಗೆ ಬಲಿಕೊಡುತ್ತಾನೆ, ತನ್ನ ಜಾಲಕ್ಕೆ ಧೂಪಹಾಕುತ್ತಾನೆ; ಅವುಗಳ ಮೂಲಕವೇ ಅವನ ಭೋಜನವು ಪುಷ್ಟಿ, ಅವನ ಆಹಾರವು ರುಚಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಐಗುಪ್ತದ ಅರಸನಾದ ಫರೋಹನೇ, ನಿನ್ನ ನದೀ ಶಾಖೆಗಳ ನಡುವೆ ಒರಗಿಕೊಂಡು - ಈ ನದಿಯು ನನ್ನದೇ, ನನಗಾಗಿಯೇ ಮಾಡಿಕೊಂಡದು ಅಂದುಕೊಳ್ಳುವ ಪೇರ್ಮೊಸಳೆಯೇ, ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ.


ನಾನು ಲೋಕದಲ್ಲಿ ತಿರಿಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲವಿಲ್ಲ, ಬಲಿಷ್ಠರಿಗೆ ಯುದ್ಧದಲ್ಲಿ ಜಯವಾಗದು, ಜ್ಞಾನಿಗಳಿಗೆ ಅನ್ನ ಸಿಕ್ಕದು, ವಿವೇಕಿಗಳಿಗೆ ಧನ ಲಭಿಸದು, ಪ್ರವೀಣರಿಗೆ ದಯೆ ದೊರೆಯದು; ಕಾಲವೂ ಪ್ರಾಪ್ತಿಯೂ ಯಾರಿಗೂ ತಪ್ಪಿದ್ದಲ್ಲ ಎಂದು ತಿಳಿದುಕೊಂಡೆನು.


ಏಕಂದರೆ ಅವನು ತನ್ನೊಳಗೆ - ನನ್ನ ಜ್ಞಾನಭುಜ ಬಲಗಳಿಂದಲೇ ಇದನ್ನು ಮಾಡಿದ್ದೇನೆ, ನಾನೇ ವಿವೇಕಿ; ಜನಾಂಗಗಳ ಎಲ್ಲೆಗಳನ್ನು ಕಿತ್ತು ಅವರ ನಿಧಿನಿಕ್ಷೇಪಗಳನ್ನು ಸೂರೆಮಾಡಿ ಸಿಂಹಾಸನಾರೂಢರನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ;


ನನ್ನ ಮೇಲೆ ಯಾರು ತಾನೆ ಬಿದ್ದಾರು ಎಂದು ಸ್ವಂತ ಆಸ್ತಿಪಾಸ್ತಿಯಲ್ಲಿ ಭರವಸವಿಟ್ಟಿರುವ ಭ್ರಷ್ಟದೇಶವೇ, ನನ್ನ ತಗ್ಗುಗಳಲ್ಲಿ ತುಂಬಾ ನೀರು ಹರಿಯುತ್ತದೆಂದು ಏಕೆ ಕೊಚ್ಚಿಕೊಳ್ಳುತ್ತೀ?


ನಿನ್ನ ಸರಕುಗಳು ಸಮುದ್ರಗಳನ್ನು ಹಾದು ಹರಡಿಕೊಂಡವು. ಅವುಗಳಿಂದ ಬಹುಜನಾಂಗಗಳನ್ನು ತುಂಬಿಸಿದಿ; ನಿನ್ನ ಅಪಾರವಾದ ಐಶ್ವರ್ಯದಿಂದಲೂ ವ್ಯಾಪಾರದ ದಿನಸುಗಳಿಂದಲೂ ಭೂರಾಜರನ್ನು ಸಮೃದ್ಧಿಪಡಿಸಿದಿ.


ಪರಿಶುದ್ಧದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ; ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ ವಿವೇಕವೂ ಬುದ್ಧಿಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು; ನಿನ್ನ ತಂದೆಯಾದ ನೆಬೂಕದ್ನೆಚ್ಚರ ರಾಜನು ಅವನನ್ನು ಜೋಯಿಸರು ಮಂತ್ರವಾದಿಗಳು ಪಂಡಿತರು ಶಾಕುನಿಕರು ಇವರಿಗೆ ಅಧ್ಯಕ್ಷನನ್ನಾಗಿ ನೇವಿುಸಿದನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು