Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 28:5 - ಕನ್ನಡ ಸತ್ಯವೇದವು J.V. (BSI)

5 ನೀನು ನಿನ್ನ ಅಧಿಕಜ್ಞಾನದಿಂದಲೂ ವ್ಯಾಪಾರದಿಂದಲೂ ಸಂಪತ್ತನ್ನು ವೃದ್ಧಿಮಾಡಿಕೊಂಡಿರಲು ನಿನ್ನ ಮನಸ್ಸು ನಿನ್ನ ಆಸ್ತಿಯ ನಿವಿುತ್ತ ಉಬ್ಬಿಕೊಂಡಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀನು ನಿನ್ನ ಅಧಿಕ ಜ್ಞಾನದಿಂದ ವ್ಯಾಪಾರದಲ್ಲಿ ಸಂಪತ್ತನ್ನು ವೃದ್ಧಿಮಾಡಿಕೊಂಡಿರುವೆ. ನಿನ್ನ ಮನಸ್ಸು ನಿನ್ನ ಆಸ್ತಿಯ ನಿಮಿತ್ತ ಉಬ್ಬಿಕೊಂಡಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿನ್ನ ಅಧಿಕ ಜ್ಞಾನದಿಂದ ಹಾಗು ವ್ಯಾಪಾರದಿಂದ ಸಿರಿಸಂಪತ್ತನ್ನು ವೃದ್ಧಿಮಾಡಿಕೊಂಡಿರುವೆ. ಆದುದರಿಂದ ನಿನ್ನ ಮನಸ್ಸು ನಿನ್ನ ಆಸ್ತಿಯ ನಿಮಿತ್ತ ಉಬ್ಬಿಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಿನ್ನ ವ್ಯಾಪಾರದ ಜಾಣತನದಿಂದ ನಿನ್ನ ಐಶ್ವರ್ಯವು ಬೆಳೆಯುವಂತೆ ಮಾಡಿದ್ದೀ. ಆ ಐಶ್ವರ್ಯದ ಕಾರಣದಿಂದ ನೀನು ಹೆಮ್ಮೆಯಿಂದ ತುಂಬಿರುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ವ್ಯಾಪಾರದಲ್ಲಿ ನಿನ್ನ ಅಧಿಕ ಚಾತುರ್ಯದಿಂದಲೂ ನಿನ್ನ ಸಂಪತ್ತನ್ನು ವೃದ್ಧಿಮಾಡಿಕೊಂಡಿರುವೆ. ನಿನ್ನ ಆಸ್ತಿಯ ನಿಮಿತ್ತ ನಿನ್ನ ಹೃದಯ ಗರ್ವಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 28:5
32 ತಿಳಿವುಗಳ ಹೋಲಿಕೆ  

ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ; ಸುಲಿಗೆಯಿಂದ ಗಳಿಸಿ ಸೊಕ್ಕಿರಬೇಡಿರಿ; ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ.


ನೋಡಿರಿ, ದೇವರನ್ನು ಆಶ್ರಯಿಸಿಕೊಳ್ಳದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ದುಷ್ಟತ್ವವೇ ತನಗೆ ಬಲವೆಂದು ನಂಬಿಕೊಂಡ ಮೂಢನು ಇವನೇ ಎಂದು ಹೇಳುವರು.


ಆಹಾರವು ನಿನ್ನವರಿಗೆ ಸಿಕ್ಕಿದಾಗ ಹೊಟ್ಟೆತುಂಬಿಸಿಕೊಂಡರು; ಹೊಟ್ಟೆತುಂಬಿದಾಗ ಅವರ ಮನಸ್ಸು ಉಬ್ಬಿಕೊಂಡಿತು; ಇದರಿಂದ ನನ್ನನ್ನು ಮರೆತುಬಿಟ್ಟರು.


ನರಪುತ್ರನೇ, ನೀನು ತೂರಿನ ಪ್ರಭುವಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನು ದೇವರು, ಸಮುದ್ರ ಮಧ್ಯದಲ್ಲಿ ದೇವರ ಆಸನವನ್ನೇ ಹತ್ತಿದ್ದೇನೆ ಅಂದುಕೊಂಡಿಯಷ್ಟೆ; ನೀನು ನಿನ್ನ ಮನಸ್ಸನ್ನು ದೇವರ ಮನಸ್ಸಿನಷ್ಟು ಹೆಚ್ಚಿಸಿಕೊಂಡದೇನು? ನೀನು ಎಂದಿಗೂ ದೇವರಲ್ಲ, ನೀನು ನರಪ್ರಾಣಿಯೇ.


ಧನವನ್ನೇ ನಂಬಿದವನು ಬಿದ್ದು ಹೋಗುವನು; ಸದ್ಧರ್ಮಿಯು ಕುಡಿಯ ಹಾಗೆ ಚಿಗುರುವನು.


ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ


ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರ್ರಿ, ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕರಾಜನನ್ನು ಹೊಗಳಿ ಕೊಂಡಾಡಿ ಕೀರ್ತಿಸುತ್ತೇನೆ; ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.


ಅಯ್ಯೋ, ತಮ್ಮಲ್ಲಿ ತಾವೇ ಜ್ಞಾನಿಗಳೆಂದೂ ಸ್ವಂತ ಗಣನೆಯಲ್ಲಿ ವಿವೇಕಿಗಳೆಂದೂ ಭಾವಿಸಿಕೊಳ್ಳುವವರ ಪಾಡು ಏನು ಹೇಳಲಿ!


ತಾನೇ ಜ್ಞಾನಿಯೆಂದೆಣಿಸಿಕೊಳ್ಳುವವನನ್ನು ನೋಡು; ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನಿಡಬಹುದು.


ತೂರ್ ಪಟ್ಟಣವು ಕೋಟೆಯನ್ನು ಕಟ್ಟಿಕೊಂಡು ಬೆಳ್ಳಿಯನ್ನು ದೂಳಿನಂತೆಯೂ ಬಂಗಾರವನ್ನು ಬೀದಿಯ ಬದಿಯಂತೆಯೂ ರಾಶಿರಾಶಿ ಮಾಡಿಕೊಂಡಿದೆ.


ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವದು ಇಗೋ, ಮಹಾಪಟ್ಟಣವಾದ ಈ ಬಾಬೆಲ್ ಎಂದು ಕೊಚ್ಚಿಕೊಂಡನು.


ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಹೆಮ್ಮೆಪಡುವದು, ಹೊಟ್ಟೆತುಂಬಿಸಿಕೊಳ್ಳುವದು, ಸ್ವಸುಖದಲ್ಲಿ ಮುಳುಗಿರುವದು, ಇವು ಆಕೆಯಲ್ಲಿಯೂ ಆಕೆಯ ಕುಮಾರ್ತೆಯರಲ್ಲಿಯೂ ಇದ್ದವು. ಅಲ್ಲದೆ ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ.


ಅದು ಕಿರೀಟದಾಯಕವು; ಅದರ ವರ್ತಕರು ಪ್ರಭುಗಳು, ಅದರ ವ್ಯಾಪಾರಿಗಳು ಲೋಕಮಾನ್ಯರು; ಇಂಥ ತೂರಿಗೆ ವಿರುದ್ಧವಾಗಿ ಈ ಸಂಕಲ್ಪವನ್ನು ಮಾಡಿದವನು ಯಾರು?


ವಿಶಾಲವಾದ ಸಾಗರದ ಮೇಲೆ ತಂದ ಶೀಹೋರಿನ ಧಾನ್ಯದಿಂದಲೂ ನೈಲಿನ ಬೆಳೆಯಿಂದಲೂ ಆದಾಯ ಹೊಂದಿದ [ನಿಮ್ಮ ನಗರಿಯು] ಅನೇಕ ಜನಾಂಗಗಳಿಗೆ ಲಾಭಕರವಾಗಿತ್ತು.


ಹಾಗಾಗದೆ ಹೊಟ್ಟೆತುಂಬಿದವನಾದರೆ ಯೆಹೋವನು ಯಾರೋ ಎಂದು ನಿನ್ನನ್ನು ತಿರಸ್ಕರಿಸೇನು; ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರನ್ನು ಅಯೋಗ್ಯವಾಗಿ ಎತ್ತೇನು.


ಅಹಹ, ಎದೋಮ್ಯರನ್ನು ಸೋಲಿಸಿ ಬಹುಕೀರ್ತಿಯನ್ನು ಪಡಕೊಂಡೆನಲ್ಲಾ ಎಂದು ನೀನು ಹೆಮ್ಮೆಗೊಂಡಿದ್ದೀ; ಸುಮ್ಮನೆ ಮನೆಯಲ್ಲಿ ಕೂತುಕೊಳ್ಳಬಾರದೇ; ನನ್ನನ್ನು ಕೆಣಕಿ ನಿನಗೂ ನಿನ್ನ ರಾಜ್ಯಕ್ಕೂ ಯಾಕೆ ಕೇಡನ್ನು ತಂದುಕೊಳ್ಳುತ್ತೀ ಎಂದು ಉತ್ತರಕೊಟ್ಟನು.


ನನ್ನ ಮೇಲೆ ಯಾರು ತಾನೆ ಬಿದ್ದಾರು ಎಂದು ಸ್ವಂತ ಆಸ್ತಿಪಾಸ್ತಿಯಲ್ಲಿ ಭರವಸವಿಟ್ಟಿರುವ ಭ್ರಷ್ಟದೇಶವೇ, ನನ್ನ ತಗ್ಗುಗಳಲ್ಲಿ ತುಂಬಾ ನೀರು ಹರಿಯುತ್ತದೆಂದು ಏಕೆ ಕೊಚ್ಚಿಕೊಳ್ಳುತ್ತೀ?


ಈ ಭಾಗ್ಯವು ನಮ್ಮ ಸಾಮರ್ಥ್ಯ ಸಾಹಸಗಳಿಂದಲೇ ನಮಗುಂಟಾಯಿತು ಅಂದುಕೊಂಡೀರಿ.


ನೀನು ಎದೋಮ್ಯರನ್ನು ಸೋಲಿಸಿದದರಿಂದ ಬಹಳವಾಗಿ ಉಬ್ಬಿಕೊಂಡಿದ್ದೀ; ಆ ಕೀರ್ತಿಯು ಸಾಕೆಂದು ನೆನಸಿ ಸುಮ್ಮನೆ ಮನೆಯಲ್ಲಿ ಕೂತುಕೋ. ನನ್ನನ್ನು ಕೆಣಕಿ ನಿನ್ನ ಮೇಲೆಯೂ ನಿನ್ನ ರಾಜ್ಯದ ಮೇಲೆಯೂ ಯಾಕೆ ಕೇಡನ್ನು ಬರಮಾಡಿಕೊಳ್ಳುತ್ತೀ ಎಂದು ಉತ್ತರಕೊಟ್ಟು ಕಳುಹಿಸಿದನು.


ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ, ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ.


ನೀನು ನಿನ್ನ ಸೊಬಗಿನ ನಿವಿುತ್ತ ಉಬ್ಬಿದ ಮನಸ್ಸುಳ್ಳವನಾಗಿ ನಿನ್ನ ಮೆರೆತದಿಂದ ನಿನ್ನ ಬುದ್ಧಿಯನ್ನು ಹಾಳುಮಾಡಿಕೊಂಡಿ; ಇದರಿಂದ ನಾನು ನಿನ್ನನ್ನು ನೆಲಕ್ಕೆ ದೊಬ್ಬಿ ನೀನು ಅರಸರಿಗೆ ನೋಟವಾಗುವಂತೆ ಅವರ ಕಣ್ಣಮುಂದೆ ಹಾಕಿದೆನು.


ಅದರಿಂದ ಅವನ ಮನಸ್ಸು ಉಬ್ಬಿಕೊಳ್ಳುವದು; ಅವನು ಲಕ್ಷಾಂತರ ಸೈನಿಕರನ್ನು ಬೀಳಿಸಿದರೂ ಪ್ರಾಬಲ್ಯಕ್ಕೆ ಬಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು