Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 28:9 - ಕನ್ನಡ ಸತ್ಯವೇದವು J.V. (BSI)

9 ನೀನು ನಿನ್ನನ್ನು ಸಂಹರಿಸುವವನೆದುರಿಗೆ ನಾನು ದೇವರು ಎಂದು ಹೇಳುವಿಯಾ? ಹತಿಸುವವನ ಕೈಗೆ ನೀನು ಎಂದಿಗೂ ದೇವರಲ್ಲ, ನರಪ್ರಾಣಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀನು ನಿನ್ನನ್ನು ಸಂಹರಿಸುವವರ ಎದುರಿಗೆ ನಾನು ದೇವರು ಎಂದು ಹೇಳುವೆಯೋ? ನಿನ್ನನ್ನು ಸಂಹರಿಸುವವನ ಕೈಯಲ್ಲಿ ನೀನು ದೇವರಲ್ಲ, ನರಪ್ರಾಣಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಿನ್ನನ್ನು ಸಂಹರಿಸುವವನೆದುರಿಗೆ ನಿಂತು, ‘ನಾನು ದೇವರು’ ಎಂದು ಹೇಳಬಲ್ಲೆಯಾ? ಹತಿಸುವವನ ಕೈಗೆ ನೀನು ಎಂದಿಗೂ ದೇವರಲ್ಲ, ನರಪ್ರಾಣಿಯೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆ ಮನುಷ್ಯನು ನಿನ್ನನ್ನು ಕೊಂದುಹಾಕುವನು. ಆಗಲೂ ನೀನು “ನಾನು ದೇವರು” ಎಂದು ಹೇಳುವಿಯಾ? ಇಲ್ಲ. ಅವನು ನಿನ್ನನ್ನು ತನ್ನ ಅಧಿಕಾರದಲ್ಲಿರಿಸುವನು. ಆಗ ನೀನು “ಕೇವಲ ಮನುಷ್ಯನೇ” ಎಂದು ತಿಳಿಯುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಿನ್ನನ್ನು ಕೊಲ್ಲಲು ಬರುವವನ ಮುಂದೆ ಇನ್ನು, “ನಾನು ದೇವರು,” ಎಂದು ಹೇಳುವೆಯೋ? ನಿನ್ನನ್ನು ಕೊಲ್ಲುವವನ ಕೈಯಲ್ಲಿ ನೀನು ದೇವರಲ್ಲ ನರಪ್ರಾಣಿಯೇ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 28:9
10 ತಿಳಿವುಗಳ ಹೋಲಿಕೆ  

ನರಪುತ್ರನೇ, ನೀನು ತೂರಿನ ಪ್ರಭುವಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನು ದೇವರು, ಸಮುದ್ರ ಮಧ್ಯದಲ್ಲಿ ದೇವರ ಆಸನವನ್ನೇ ಹತ್ತಿದ್ದೇನೆ ಅಂದುಕೊಂಡಿಯಷ್ಟೆ; ನೀನು ನಿನ್ನ ಮನಸ್ಸನ್ನು ದೇವರ ಮನಸ್ಸಿನಷ್ಟು ಹೆಚ್ಚಿಸಿಕೊಂಡದೇನು? ನೀನು ಎಂದಿಗೂ ದೇವರಲ್ಲ, ನೀನು ನರಪ್ರಾಣಿಯೇ.


ಐಗುಪ್ತ್ಯರು ಮನುಷ್ಯ ಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಮಾಂಸಮಯವೇ, ಆತ್ಮವಲ್ಲ; ಯೆಹೋವನು ಕೈಚಾಚುವಾಗ ಸಹಾಯ ಮಾಡಿದವನು ಮುಗ್ಗರಿಸುವನು, ಸಹಾಯಪಡೆದವನು ಬಿದ್ದು ಹೋಗುವನು, ಅಂತು ಎಲ್ಲರೂ ಒಟ್ಟಿಗೆ ಲಯವಾಗುವರು.


ಆದರೂ ನರರಂತೆ ಸತ್ತೇ ಹೋಗುವಿರಿ; ಪ್ರತಿಯೊಬ್ಬ ಪ್ರಭುವಿನಂತೆ ನೀವೆಲ್ಲರೂ ಬಿದ್ದು ಹೋಗುವಿರಿ.


ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಹೆಮ್ಮೆಪಡುವದು, ಹೊಟ್ಟೆತುಂಬಿಸಿಕೊಳ್ಳುವದು, ಸ್ವಸುಖದಲ್ಲಿ ಮುಳುಗಿರುವದು, ಇವು ಆಕೆಯಲ್ಲಿಯೂ ಆಕೆಯ ಕುಮಾರ್ತೆಯರಲ್ಲಿಯೂ ಇದ್ದವು. ಅಲ್ಲದೆ ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ.


ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು; ಸಮುದ್ರಮಧ್ಯದಲ್ಲಿ ನಿನಗೆ ಹತರಾದವರ ಗತಿ ಸಂಭವಿಸುವದು.


ನೀನು ಅನ್ಯರ ಕೈಯಿಂದ ಸುನ್ನತಿಹೀನರ ಮರಣಕ್ಕೆ ಗುರಿಯಾಗುವಿ; ನಾನೇ ನುಡಿದಿದ್ದೇನೆ, ಇದು ಕರ್ತನಾದ ಯೆಹೋವನ ಸಂಕಲ್ಪ.


ಈ ನಿನೆವೆಯು ಮೊದಲು ಉಲ್ಲಾಸದ ನಗರಿಯಾಗಿ ನೆಮ್ಮದಿಯಿಂದ ನೆಲೆಗೊಂಡಿದ್ದು ತನ್ನ ಹೃದಯದೊಳಗೆ - ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ ಅಂದುಕೊಳ್ಳುತ್ತಿತ್ತು; ಅಯ್ಯೋ, ಎಷ್ಟೋ ಹಾಳಾಗಿ ಹೋಗಿ ಮೃಗಗಳು ತಂಗುವ ಹಕ್ಕೆಯಾಗಿದೆ! ಹಾದುಹೋಗುವವರೆಲ್ಲರೂ ಸಿಳ್ಳುಹಾಕಿ ಕೈಯಾಡಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು