Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 29:10 - ಕನ್ನಡ ಸತ್ಯವೇದವು J.V. (BSI)

10 ಇಗೋ, ನಾನು ನಿನಗೂ ನಿನ್ನ ನದಿಗೂ ವಿರುದ್ಧನಾಗಿ ಐಗುಪ್ತದೇಶವನ್ನು ವಿುಗ್ದೋಲಿನಿಂದ ಸೆವೇನೆಯ ತನಕ, ಹೌದು ಕೂಷಿನ ಎಲ್ಲೆಯವರೆಗೂ ತೀರಾ ಹಾಳುಪಾಳು ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ‘ಇಗೋ, ನಾನು ನಿನಗೂ, ನಿನ್ನ ನದಿಗೂ ವಿರುದ್ಧವಾಗಿ ಐಗುಪ್ತ ದೇಶವನ್ನು ಮಿಗ್ದೋಲಿನಿಂದ ಸೆವೇನಿಯ ತನಕ, ಹೌದು, ಕೂಷಿನ ಮೇರೆಯವರೆಗೂ ತೀರಾ ಹಾಳು ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇಗೋ, ನಾನು ನಿನಗೂ ನಿನ್ನ ನದಿಗೂ ವಿರುದ್ಧನಾಗಿ ಈಜಿಪ್ಟ್ ದೇಶವನ್ನು ಮಿಗ್ದೋಲಿನಿಂದ ಸೆವೇನೆಯ ತನಕ, ಹೌದು, ಸುಡಾನ್ ಎಲ್ಲೆಯವರೆಗೂ ಪೂರ್ತಿಯಾಗಿ ಹಾಳುಪಾಳುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದ್ದರಿಂದ ನಾನು ನಿನಗೆ ವಿರೋಧವಾಗಿರುತ್ತೇನೆ. ನೈಲ್ ನದಿಯ ಅನೇಕ ಶಾಖೆಗಳಿಗೂ ನಾನು ವಿರೋಧವಾಗಿದ್ದೇನೆ. ಈಜಿಪ್ಟನ್ನು ನಾನು ಸಂಪೂರ್ಣವಾಗಿ ನಾಶಮಾಡುತ್ತೇನೆ. ಮಿಗ್ದೋಲ್‌ನಿಂದ ಅಸ್ವಾನ್ ತನಕ ಇರುವ ಪಟ್ಟಣಗಳು ಬರಿದಾಗುವವು. ಇಥಿಯೋಪ್ಯದ ಮೇರೆಯ ತನಕವೂ ಬರಿದಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದ್ದರಿಂದ ಇಗೋ, ನಾನು ನಿನಗೂ ನಿನ್ನ ನದಿಗಳಿಗೂ ವಿರುದ್ಧವಾಗಿದ್ದೇನೆ. ಈಜಿಪ್ಟ್ ದೇಶವನ್ನು ಮಿಗ್ದೋಲಿನಿಂದ ಸೆವೇನೆಯ ಗೋಪುರ ಮೊದಲುಗೊಂಡು ಕೂಷಿನ ಪ್ರಾಂತದವರೆಗೂ ಸಂಪೂರ್ಣವಾಗಿ ಕಾಡಾಗಿಯೂ ಹಾಳಾಗಿಯೂ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 29:10
12 ತಿಳಿವುಗಳ ಹೋಲಿಕೆ  

ನಾನು ನದೀಶಾಖೆಗಳನ್ನು ಬತ್ತಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು; ಹೌದು, ದೇಶವನ್ನೂ ಅದರಲ್ಲಿನ ಸಮಸ್ತವನ್ನೂ ಅನ್ಯರ ಕೈಯಿಂದ ಹಾಳುಮಾಡಿಸುವೆನು; ಯೆಹೋವನಾದ ನಾನೇ ನುಡಿದಿದ್ದೇನೆ.


ಯೆಹೋವನೇ, ನಿನಗೆ ನದಿಗಳ ಮೇಲೆ ರೌದ್ರವೋ? ಹೊಳೆಗಳಿಗೆ ಸಿಟ್ಟುಗೊಂಡಿದ್ದೀಯಾ? ಸಮುದ್ರದ ಮೇಲೆ ಕೋಪವೋ? ಏಕೆ ನಿನ್ನ ಅಶ್ವಗಳ ಮೇಲೆ ಆರೂಢನಾಗಿ ನಿನ್ನ ಜಯರಥಗಳಲ್ಲಿ ಆಸೀನನಾಗಿ ಬರುತ್ತಿದ್ದೀ?


ಯಾವ ಮನುಷ್ಯನೂ ಅಲ್ಲಿ ಹೆಜ್ಜೆಯಿಟ್ಟು ಹಾದುಹೋಗನು; ಯಾವ ಪಶುವೂ ತುಳಿದು ದಾಟಿಹೋಗದು; ನಾಲ್ವತ್ತು ವರುಷ ನಿರ್ಜನವಾಗಿರುವದು.


ಐಗುಪ್ತದಲ್ಲಿ ಪ್ರಕಟಿಸಿರಿ, ವಿುಗ್ದೋಲ್, ತಹಪನೇಸ್, ನೋಫ್ ಎಂಬೀ ಪಟ್ಟಣಗಳಲ್ಲಿ ಪ್ರಚುರಪಡಿಸಿರಿ - [ಐಗುಪ್ತವೇ,] ಸ್ಥಿರವಾಗಿ ನಿಂತುಕೊಂಡು ಸನ್ನದ್ಧವಾಗು! ಖಡ್ಗವು ನಿನ್ನ ಸುತ್ತಲು ನುಂಗಿಬಿಟ್ಟಿದೆ ಎಂದು ಸಾರಿರಿ.


ಐಗುಪ್ತದೇಶದ ವಿುಗ್ದೋಲ್, ತಹಪನೇಸ್, ನೋಫ್ ಎಂಬ ಪಟ್ಟಣಗಳಲ್ಲಿಯೂ ಪತ್ರೋಸ್ ಪ್ರಾಂತದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ -


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀವು ವ್ಯರ್ಥವಾದದ್ದನ್ನು ನುಡಿದು ಸುಳ್ಳಾದದ್ದನ್ನು ಕಂಡದರಿಂದ ಇಗೋ, ನಿಮಗೆ ವಿರುದ್ಧವಾಗಿದ್ದೇನೆ, ಇದು ಕರ್ತನಾದ ಯೆಹೋವನೆಂಬ ನನ್ನ ನುಡಿ.


ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನಿನಗೆ ವಿರುದ್ಧನಾಗಿದ್ದೇನೆ, ನನ್ನ ಖಡ್ಗವನ್ನು ಒರೆಯಿಂದ ಹಿರಿದು ನಿನ್ನಲ್ಲಿನ ಶಿಷ್ಟರನ್ನೂ ದುಷ್ಟರನ್ನೂ ಸಂಹರಿಸಿಬಿಡುವೆನು.


ಕರ್ತನಾದ ಯೆಹೋವನು ಇಂತೆನ್ನುತಾನೆ - ಇಗೋ, ತೂರೇ, ನಿನಗೆ ವಿರುದ್ಧನಾಗಿದ್ದೇನೆ; ಸಮುದ್ರವು ತೆರೆಗಳನ್ನು ಎಬ್ಬಿಸುವಂತೆ ನಾನು ಬಹುಜನಾಂಗಗಳನ್ನು ನಿನ್ನ ಮೇಲೆ ಎಬ್ಬಿಸುವೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಐಗುಪ್ತದ ಅರಸನಾದ ಫರೋಹನೇ, ನಿನ್ನ ನದೀ ಶಾಖೆಗಳ ನಡುವೆ ಒರಗಿಕೊಂಡು - ಈ ನದಿಯು ನನ್ನದೇ, ನನಗಾಗಿಯೇ ಮಾಡಿಕೊಂಡದು ಅಂದುಕೊಳ್ಳುವ ಪೇರ್ಮೊಸಳೆಯೇ, ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ.


ಫರೋಹನು - ಈ ನದಿಯು ನನ್ನದೇ, ನಾನೇ ಮಾಡಿಕೊಂಡದು ಅಂದುಕೊಂಡ ಕಾರಣ ಐಗುಪ್ತದೇಶವು ಹಾಳುಪಾಳಾಗುವದು; ಆಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು