Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 29:21 - ಕನ್ನಡ ಸತ್ಯವೇದವು J.V. (BSI)

21 ಆ ದಿನದಲ್ಲಿ ನಾನು ಇಸ್ರಾಯೇಲ್‍ವಂಶಕ್ಕೆ ಕೊಂಬನ್ನು ಮೊಳೆಯಿಸಿ ಆ ವಂಶದವರ ಮಧ್ಯದಲ್ಲಿ ನಿನ್ನ ಬಾಯನ್ನು ಬಿಚ್ಚುವೆನು; ನಾನೇ ಯೆಹೋವನು ಎಂದು ಅವರಿಗೆ ನಿಶ್ಚಯವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ಆ ದಿನದಲ್ಲಿ ನಾನು ಇಸ್ರಾಯೇಲ್ ವಂಶಕ್ಕೆ ಕೊಂಬನ್ನು ಮೊಳೆಯಿಸಿ, ಆ ವಂಶದವರ ಮಧ್ಯದಲ್ಲಿ ನಿನ್ನ ಬಾಯಿಯನ್ನು ತೆರೆಯುವಂತೆ ಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ನಿಶ್ಚಯವಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ಆ ದಿನದಲ್ಲಿ ನಾನು ಇಸ್ರಯೇಲ್ ವಂಶಕ್ಕೆ ಕೋಡುಮೂಡಿಸಿ ಆ ವಂಶದವರ ಮಧ್ಯೆ ನಿನ್ನ ಬಾಯನ್ನು ಬಿಚ್ಚುವೆನು; ನಾನೇ ಸರ್ವೇಶ್ವರ ಎಂದು ಅವರಿಗೆ ಖಚಿತವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಆ ದಿವಸದಲ್ಲಿ ಇಸ್ರೇಲ್ ವಂಶವನ್ನು ನಾನು ಬಲಪಡಿಸುವೆನು. ಯೆಹೆಜ್ಕೇಲನೇ, ನೀನು ಅವರೊಂದಿಗೆ ಮಾತನಾಡುವಂತೆ ಮಾಡುವೆನು. ಆಗ ಅವರು ನಾನೇ ಯೆಹೋವನೆಂದು ತಿಳಿದುಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಆ ದಿನದಲ್ಲಿ ನಾನು ಇಸ್ರಾಯೇಲರ ಮನೆತನದವರ ಕೊಂಬನ್ನು ಚಿಗುರಿಸುವೆನು. ಅವರ ಮಧ್ಯದಲ್ಲಿ ನಿನ್ನ ಬಾಯನ್ನು ತೆರೆಯುವಂತೆ ಮಾಡುವೆನು. ಆಗ ಅವರು ನಾನೇ ಯೆಹೋವ ದೇವರೆಂದು ತಿಳಿಯುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 29:21
21 ತಿಳಿವುಗಳ ಹೋಲಿಕೆ  

ಯೆಹೋವನ ವಿರೋಧಿಗಳು ಮುರಿಯಲ್ಪಡುತ್ತಾರೆ; ಆತನು ಆಕಾಶದಿಂದ ಅವರ ಮೇಲೆ ಗರ್ಜಿಸುತ್ತಾನೆ. ಯೆಹೋವನು ಭೂವಿುಯ ಕಟ್ಟಕಡೆಯಲ್ಲಿರುವವರಿಗೂ ನ್ಯಾಯತೀರಿಸುವನು. ತಾನು ನೇವಿುಸಿದ ಅರಸನಿಗೆ ಬಲವನ್ನು ಅನುಗ್ರಹಿಸುವನು; ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು.


ಯಾಕಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರುನಿಲ್ಲುವದಕ್ಕೂ ಎದುರುಮಾತಾಡುವದಕ್ಕೂ ಆಗದಂಥ ಬಾಯನ್ನೂ ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.


ಇಲ್ಲಿಯೇ ದಾವೀದನ ಕೊಂಬು ಚಿಗುರುವಂತೆ ಮಾಡುವೆನು; ನನ್ನ ಅಭಿಷಿಕ್ತನ ದೀಪವು ಉರಿಯುತ್ತಲೇ ಇರಬೇಕೆಂದು ನೇವಿುಸಿದ್ದೇನೆ.


ಅವನು ಬರುವದಕ್ಕೆ ಹಿಂದಿನ ಸಾಯಂಕಾಲ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು ಯೆಹೋವನು ಆ ಪಲಾಯಿತನು ಬೆಳಿಗ್ಗೆ ಬರುವನೆಂದು ನನ್ನ ಬಾಯನ್ನು ಬಿಚ್ಚಿದ್ದನು; ಹೌದು, ನನ್ನ ಬಾಯಿ ಬಿಚ್ಚಿತು, ನನ್ನ ಮೂಕತನವು ಹೋಯಿತು.


ಆ ದಿನದಲ್ಲಿ ತಪ್ಪಿಸಿಕೊಂಡವನಿಗಾಗಿ ನೀನು ಬಾಯಿಬಿಡುವಿ, ನಿನ್ನ ಮೂಕತನವನ್ನು ಕಳಕೊಂಡು ಮಾತಾಡುವಿ; ಹೀಗೆ ನೀನು ಅವರಿಗೆ ಗುರುತಾಗಲು ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.


ಆದರೆ ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಂತೆ ಎತ್ತಿದ್ದೀ; ಚೈತನ್ಯತೈಲದಿಂದ ನನ್ನನ್ನು ಅಭಿಷೇಕಿಸಿದ್ದೀ.


ಐಗುಪ್ತವು ಇನ್ನು ಇಸ್ರಾಯೇಲ್ ವಂಶದವರ ಭರವಸವಾಗದು; ಮತ್ತು ಅದರ ಕಡೆಗೆ ಕಣ್ಣೆತ್ತುವ ದೇವದ್ರೋಹದ ನೆನಪು ಇಸ್ರಾಯೇಲ್ಯರಲ್ಲಿ ಐಗುಪ್ತದಿಂದ ಇನ್ನು ಹುಟ್ಟದು. ನಾನೇ ಯೆಹೋವನು ಎಂದು ಅವರಿಗೆ ಮನದಟ್ಟಾಗುವದು.


ಫರೋಹನು - ಈ ನದಿಯು ನನ್ನದೇ, ನಾನೇ ಮಾಡಿಕೊಂಡದು ಅಂದುಕೊಂಡ ಕಾರಣ ಐಗುಪ್ತದೇಶವು ಹಾಳುಪಾಳಾಗುವದು; ಆಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.


ಆಗ ಐಗುಪ್ತದ ಸಕಲ ನಿವಾಸಿಗಳು ಇಸ್ರಾಯೇಲ್ ವಂಶದವರಿಗೆ ತಾವು ಬರೀ ದಂಟಿನ ಊರುಗೋಲಾದೆವು ಎಂದು ನಾಚಿಕೆಪಟ್ಟು ನಾನೇ ಯೆಹೋವನು ಎಂಬದಾಗಿ ದೃಢಮಾಡಿಕೊಳ್ಳುವರು.


ಇದಲ್ಲದೆ ನಿನ್ನ ನಾಲಿಗೆಯು ಸೇದಿಹೋಗಿ ನೀನು ಮೂಕನಾಗಿರುವಂತೆ ಮಾಡುವೆನು; ನೀನು ಅವರನ್ನು ಖಂಡಿಸದಿರುವಿ; ಅವರು ದ್ರೋಹಿವಂಶದವರು.


ಯೆಹೋವನು ಹೀಗನ್ನುತ್ತಾನೆ - ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಿಕೆಯನ್ನು ಚಿಗುರಿಸುವೆನು; ಅವನು ರಾಜನಾಗಿ ಆಳುತ್ತಾ ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ ದೇಶದಲ್ಲಿ ನೀತಿನ್ಯಾಯಗಳನ್ನು ನಿರ್ವಹಿಸುವನು.


ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವದು, ಇಸ್ರಾಯೇಲು ಹೂಬಿಟ್ಟು ಚಿಗುರುವದು, ಆ ವೃಕ್ಷವು ಭೂಮಂಡಲವನ್ನೆಲ್ಲಾ ಫಲದಿಂದ ತುಂಬಿಸುವದು.


ಆತನು ತನ್ನ ಪ್ರಜೆಗೋಸ್ಕರ [ಘನದ] ಕೊಂಬನ್ನು ಎಬ್ಬಿಸಿದ್ದಾನೆ. ಆದದರಿಂದ ಆತನ ಎಲ್ಲಾ ಭಕ್ತರೂ ಆತನ ಸಮೀಪ ಪ್ರಜೆಗಳಾದ ಇಸ್ರಾಯೇಲ್ಯರೂ ಹಿಗ್ಗುತ್ತಾರೆ. ಯಾಹುವಿಗೆ ಸ್ತೋತ್ರ!


ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವದು.


ಕರ್ತನೇ, ನನ್ನ ಬಾಯಿ ನಿನ್ನನ್ನು ಸ್ತೋತ್ರ ಮಾಡುವಂತೆ ನನ್ನ ತುಟಿಗಳನ್ನು ತೆರೆಯಮಾಡು.


ನಾನು ನಿನ್ನೊಡನೆ ಮತ್ತೆ ಮಾತಾಡುವ ಕಾಲದಲ್ಲಿ ನಿನ್ನ ಬಾಯನ್ನು ಬಿಚ್ಚುವೆನು; ಆಗ ನೀನು ಅವರಿಗೆ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ ಎಂದು ನುಡಿಯಬೇಕು; ಕೇಳುವವನು ಕೇಳಲಿ. ಕೇಳದವನು ಬಿಡಲಿ; ಅವರು ದ್ರೋಹದ ಜನವೇ.


ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು