Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 29:8 - ಕನ್ನಡ ಸತ್ಯವೇದವು J.V. (BSI)

8 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನಿನ್ನ ಮೇಲೆ ಖಡ್ಗವನ್ನು ಬರಮಾಡಿ ಜನರನ್ನೂ ಪಶುಗಳನ್ನೂ ನಿನ್ನೊಳಗಿಂದ ನಿರ್ಮೂಲಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಇಗೋ, ನಾನು ನಿನ್ನ ಮೇಲೆ ಖಡ್ಗವನ್ನು ಬರಮಾಡಿ, ಜನರನ್ನೂ, ಪಶುಗಳನ್ನೂ ನಿನ್ನೊಳಗಿಂದ ನಿರ್ಮೂಲ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹೀಗಿರಲು, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಗೋ, ನಾನು ನಿನ್ನ ಮೇಲೆ ಖಡ್ಗವನ್ನು ಬರಮಾಡಿ ಜನರನ್ನೂ ಜಾನುವಾರುಗಳನ್ನೂ ನಿನ್ನಿಂದ ನಿರ್ಮೂಲಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದ್ದರಿಂದ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ, “ನಾನು ನಿನಗೆ ವಿರುದ್ಧವಾಗಿ ಖಡ್ಗವನ್ನು ತರುವೆನು. ನಾನು ನಿನ್ನ ಜನರನ್ನೂ ಪ್ರಾಣಿಗಳನ್ನೂ ಸಂಪೂರ್ಣವಾಗಿ ಸಂಹರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾನೆ: ಇಗೋ, ನಾನು ನಿನ್ನ ಮೇಲೆ ಖಡ್ಗವನ್ನು ತರುತ್ತೇನೆ. ಮನುಷ್ಯರನ್ನೂ ಮೃಗಗಳನ್ನೂ ನಿನ್ನೊಳಗಿಂದ ಕಡಿದುಬಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 29:8
11 ತಿಳಿವುಗಳ ಹೋಲಿಕೆ  

ಖಡ್ಗವೇ, ದೇಶವನ್ನು ಹೊಕ್ಕು ಹೋಗು ಎಂದು ಆಜ್ಞಾಪಿಸಿ ನಾನು ಅದನ್ನು ಆ ದೇಶಕ್ಕೆ ತಂದು ಜನಪಶುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಿಂದ ಐಗುಪ್ತದ ಅಸಂಖ್ಯಾತಪ್ರಜೆಯನ್ನು ಕೊನೆಗಾಣಿಸುವೆನು.


ಖಡ್ಗವು ಐಗುಪ್ತದ ಮೇಲೆ ಬೀಳುವದು; ಅಲ್ಲಿನ ಪ್ರಜೆಗಳು ಹತರಾಗಲು ಕೂಷಿನಲ್ಲಿಯೂ ಸಂಕಟವಾಗುವದು ; ಐಗುಪ್ತದ ಲಕ್ಷೋಪಲಕ್ಷ ಪ್ರಜೆಯು ಒಯ್ಯಲ್ಪಡುವದು; ಅದರ ಅಸ್ತಿವಾರವು ಹಾಳಾಗುವದು;


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಎದೋವಿುನ ಮೇಲೆ ಕೈಯೆತ್ತಿ ಅದರೊಳಗಿಂದ ಜನರನ್ನೂ ಪಶುಗಳನ್ನೂ ನಿರ್ಮೂಲಪಡಿಸಿ ತೇಮಾನಿನಿಂದ ದೆದಾನಿನವರೆಗೂ ಅದನ್ನು ಹಾಳುಮಾಡಿ ಪ್ರಜೆಗಳನ್ನು ಖಡ್ಗಕ್ಕೆ ಸಿಕ್ಕಿಸುವೆನು.


ಜನ ಪಶುಗಳಿಲ್ಲದೆ ಹಾಳಾಗಿ ಕಸ್ದೀಯರ ಕೈವಶವಾಗಿದೆ ಎಂದು ನೀವು ಹೇಳುವ ಈ ದೇಶದಲ್ಲಿ ಹೊಲಗದ್ದೆಗಳನ್ನು ಕೊಳ್ಳುವರು, ಕೊಡುವರು.


ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ - ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವದು; ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಕಾಡುಮರಗಳ ಮೇಲೆಯೂ ಭೂವಿುಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಆರದೆ ದಹಿಸುವದು.


ಆ ರಾತ್ರಿ ನಾನು ಐಗುಪ್ತ ದೇಶದ ನಡುವೆ ಹಾದುಹೋಗಿ ಮನುಷ್ಯರಲ್ಲಾಗಲಿ ಪಶುಗಳಲ್ಲಾಗಲಿ ಚೊಚ್ಚಲಾಗಿರುವದನ್ನೆಲ್ಲಾ ಸಂಹರಿಸುವೆನು; ಐಗುಪ್ತ ದೇಶದ ಸಮಸ್ತ ದೇವತೆಗಳಿಗೂ ಶಿಕ್ಷೆಮಾಡುವೆನು; ನಾನು ಯೆಹೋವನು.


ಮತ್ತು ಯೆಹೋವನು - ನಾನು ಸೃಷ್ಟಿಸಿದ ಮನುಷ್ಯ ಜಾತಿಯನ್ನು ಭೂವಿುಯ ಮೇಲಿನಿಂದ ಅಳಿಸಿಬಿಡುವೆನು; ಅದನ್ನು ಉಂಟುಮಾಡಿದ್ದಕ್ಕೆ ನನ್ನಲ್ಲಿ ಪಶ್ಚಾತ್ತಾಪ ಹುಟ್ಟಿತು; ಮನುಷ್ಯರೊಂದಿಗೆ ಸಕಲಮೃಗ ಕ್ರಿವಿುಪಕ್ಷಿಗಳನ್ನೂ ಅಳಿಸಿ ಬಿಡುವೆನು ಅಂದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು