ಯೆಹೆಜ್ಕೇಲನು 3:15 - ಕನ್ನಡ ಸತ್ಯವೇದವು J.V. (BSI)15 ಆಗ ಸೆರೆಯಾಗಿ ಒಯ್ಯಲ್ಪಟ್ಟು ಕೆಬಾರ್ ನದಿಯ ಹತ್ತಿರ ತೇಲ್ ಆಬೀಬಿನಲ್ಲಿ ವಾಸವಾಗಿದ್ದವರ ಬಳಿಗೆ ಬಂದು ಅವರು ಕೂತಿದ್ದ ಸ್ಥಳದಲ್ಲಿಯೇ ಕೂತುಕೊಂಡೆನು; ಏಳು ದಿವಸ ಅಲ್ಲೇ ಅವರ ಮಧ್ಯದಲ್ಲಿ ಸ್ತಬ್ಧನಾಗಿ ಇದ್ದುಬಿಟ್ಟೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಗ ಸೆರೆಯಾಗಿ ಒಯ್ಯಲ್ಪಟ್ಟು ಕೆಬಾರ್ ನದಿಯ ಹತ್ತಿರ ತೇಲ್ ಆಬೀಬಿನಲ್ಲಿ ವಾಸವಾಗಿದ್ದವರ ಬಳಿಗೆ ಬಂದು, ಅವರು ಕುಳಿತುಕೊಂಡಿದ್ದ ಸ್ಥಳದಲ್ಲಿಯೇ ಕುಳಿತುಕೊಂಡೆನು; ಏಳು ದಿನಗಳವರೆಗೂ ಅಲ್ಲೇ ಅವರ ಮಧ್ಯದಲ್ಲಿ ಸ್ತಬ್ಧನಾಗಿ ಉಳಿದುಬಿಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅನಂತರ ಕೆಬಾರ್ ನದಿಯ ಹತ್ತಿರ ತೇಲ್ ಅಬೀಬ್‍ನಲ್ಲಿ ವಾಸವಾಗಿದ್ದ ಗಡೀಪಾರಾಗಿ ಸೆರೆಯಾಳುಗಳಾಗಿದ್ದವರ ಬಳಿಗೆ ಬಂದೆ. ಅವರು ಕೂತಿದ್ದ ಸ್ಥಳದಲ್ಲಿಯೇ ಕುಳಿತುಕೊಂಡೆ; ಏಳು ದಿವಸ ಅಲ್ಲೇ ಅವರ ಮಧ್ಯದಲ್ಲಿ ಸ್ತಬ್ದನಾಗಿ ಇದ್ದುಬಿಟ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಕೆಬಾರ್ ಕಾಲುವೆ ಪಕ್ಕದಲ್ಲಿದ್ದ ತೇಲ್ ಆಬೀಬ್‌ನಲ್ಲಿ ಸೆರೆಯಾಳುಗಳಾಗಿದ್ದ ಇಸ್ರೇಲ್ ಜನರ ಬಳಿಗೆ ನಾನು ಒಯ್ಯಲ್ಪಟ್ಟೆನು. ಅಲ್ಲಿದ್ದ ಜನರ ಮಧ್ಯೆ ನಾನು ಏಳು ದಿವಸ ಸ್ತಬ್ಧನಾಗಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಮೇಲೆ ನಾನು ಕೆಬಾರ್ ನದಿಯ ದಡದಲ್ಲಿ ವಾಸಿಸುತ್ತಿದ್ದ ತೆಲ್ ಅಬೀಬಿನ ಸೆರೆಯವರ ಬಳಿಗೆ ಬಂದೆನು. ನಾನು ಬಹು ದುಃಖಿತನಾಗಿ ಅವರು ಕುಳಿತಿದ್ದ ಕಡೆಗೆ ನಾನು ಏಳು ದಿನಗಳ ಕಾಲ ಅವರ ಜೊತೆಗೆ ಕುಳಿತುಕೊಂಡೆನು. ಅಧ್ಯಾಯವನ್ನು ನೋಡಿ |