Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:17 - ಕನ್ನಡ ಸತ್ಯವೇದವು J.V. (BSI)

17 ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇವಿುಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ ನನ್ನ ಪರವಾಗಿ ಅವರನ್ನು ಎಚ್ಚರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ಪರವಾಗಿ ಅವರನ್ನು ಎಚ್ಚರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ನರಪುತ್ರನೇ, ನಾನು ನಿನ್ನನ್ನು ಇಸ್ರಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ ನನ್ನ ಪರವಾಗಿ ಅವರನ್ನು ಎಚ್ಚರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ನರಪುತ್ರನೇ, ನಾನು ನಿನ್ನನ್ನು ಇಸ್ರೇಲರಿಗೆ ಕಾವಲುಗಾರನನ್ನಾಗಿ ಮಾಡಿದ್ದೇನೆ. ನಾನು ಅವರಿಗೆ ಸಂಭವಿಸುವ ಕೆಟ್ಟ ವಿಷಯಗಳನ್ನು ನಿನಗೆ ಹೇಳುತ್ತಿದ್ದೇನೆ. ಮತ್ತು ನೀನು ನನ್ನ ಪರವಾಗಿ ಅವರನ್ನು ಎಚ್ಚರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಆದ್ದರಿಂದ ನೀನು ನನ್ನ ಬಾಯಿಂದ ಹೊರಡುವ ವಾಕ್ಯವನ್ನು ಕೇಳಿ, ನನ್ನ ಪರವಾಗಿ ಅವರನ್ನು ಎಚ್ಚರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:17
29 ತಿಳಿವುಗಳ ಹೋಲಿಕೆ  

ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವಂತೆ ನೋಡಿರಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.


ಯೆರೂಸಲೇಮೇ, ನಾನು ನಿನ್ನ ಪೌಳಿಗೋಡೆಗಳಲ್ಲಿ ಕಾವಲುಗಾರರನ್ನು ನೇವಿುಸಿದ್ದೇನೆ; ಅವರು ಹಗಲೂ ಇರುಳೂ ಮೌನವಾಗಿರರು.


ಇಗೋ, ನಿನ್ನ ಕಾವಲುಗಾರರ ಕೂಗು! ಸ್ವರವೆತ್ತಿ ಒಟ್ಟಿಗೆ ಹರ್ಷಧ್ವನಿಗೈಯುತ್ತಾರೆ; ಯೆಹೋವನು ಚೀಯೋನಿಗೆ ತಿರುಗಿ ಬರುವದನ್ನು ಪ್ರತ್ಯಕ್ಷವಾಗಿ ನೋಡುತ್ತಿದ್ದಾರೆ.


ಯೆಹೂದದ ಪಟ್ಟಣಗಳಲ್ಲಿ ವಾಸಿಸುವ ನಿಮ್ಮ ಸಹೋದರರೊಳಗೆ ಜೀವಹತ್ಯ ಸಂಬಂಧದಲ್ಲಿಯಾಗಲಿ ಧರ್ಮಶಾಸ್ತ್ರದ ಆಯಾ ಆಜ್ಞಾವಿಧಿನ್ಯಾಯಗಳ ಸಂಬಂಧದಲ್ಲಿಯಾಗಲಿ ವ್ಯಾಜ್ಯವುಂಟಾಗಿ ಅದು ನಿಮ್ಮ ಮುಂದೆ ಬರುವದಾದರೆ ನಿಮ್ಮ ಸಹೋದರರು ಯೆಹೋವನ ದೃಷ್ಟಿಯಲ್ಲಿ ಅಪರಾಧಿಗಳಾಗದಂತೆಯೂ ನೀವು ಅವರೊಂದಿಗೆ ದೇವಕೋಪಕ್ಕೆ ಗುರಿಯಾಗದಂತೆಯೂ ಅವರನ್ನು ಎಚ್ಚರಿಸಿರಿ. ಹೀಗೆ ಮಾಡುವದಾದರೆ ನೀವು ನಿರ್ದೋಷಿಗಳಾಗಿರುವಿರಿ.


ನಾವು ಆತನನ್ನು ಪ್ರಸಿದ್ಧಿಪಡಿಸುವವರಾಗಿ ಸಕಲರಿಗೂ ಬುದ್ಧಿಹೇಳುತ್ತಾ ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವದಕ್ಕೆ ಪ್ರಯತ್ನಿಸುತ್ತಿದ್ದೇವೆ.


ತುತೂರಿಯ ಶಬ್ದವನ್ನು ಕೇಳಿರಿ ಎಂದು ನಾನು ಅವರ ಮೇಲೆ ಕಾವಲುಗಾರರನ್ನು ನೇವಿುಸಲು ನಾವು ಕೇಳಲೊಲ್ಲೆವು ಎಂದು ಹೇಳಿದರು.


ಸಹೋದರರೇ, ಅಕ್ರಮವಾಗಿ ನಡೆಯುವವರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರಲ್ಲಿಯೂ ದೀರ್ಘಶಾಂತರಾಗಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.


ನಾವು ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೇ ನಮ್ಮ ಮೂಲಕ ಬುದ್ಧಿ ಹೇಳುವ ಹಾಗಾಯಿತು. ದೇವರೊಂದಿಗೆ ಸಮಾಧಾನವಾಗಿರೆಂದು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇವೆ.


ಕರ್ತನ ಭಯವು ನಮಗಿರುವದರಿಂದ ನಾವು ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಯಥಾರ್ಥರೆಂಬದು ದೇವರಿಗೆ ಗೊತ್ತುಂಟು; ನಿಮ್ಮ ಮನಸ್ಸಿಗೆ ಕೂಡ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ.


ನಿಮ್ಮನ್ನು ನಾಚಿಕೆಪಡಿಸುವದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮಗೆ ಬುದ್ಧಿ ಹೇಳುವದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ.


ನನ್ನ ಕೋವರದಲ್ಲಿ ನಿಂತುಕೊಳ್ಳುವೆನು, ಬುರುಜಿನ ಮೇಲೆ ನೆಲೆಯಾಗಿರುವೆನು, ಯೆಹೋವನು ನನಗೆ ಏನು ಹೇಳುವನೋ, ನನ್ನ ಆಕ್ಷೇಪಣೆಯನ್ನು ನಿವಾರಿಸಿಕೊಳ್ಳಲು ಯಾವ ಉತ್ತರಕೊಡಬೇಕೋ ಎಂದು ಎದುರು ನೋಡುವೆನು [ಅಂದುಕೊಂಡೆನು].


ಗಂಟಲೆತ್ತಿ ಕೂಗು, ಸಂಕೋಚಪಡಬೇಡ, ಕೊಂಬಿನಂತೆ ದನಿಗೈದು ನನ್ನ ಜನರಿಗೆ ಅವರ ದ್ರೋಹವನ್ನು ತಿಳಿಸು, ಯಾಕೋಬವಂಶದವರಿಗೆ ಅವರ ಪಾಪಗಳನ್ನು ಅರುಹು.


ಇವರ ಕಾವಲುಗಾರರು ಕುರುಡರು, ಇವರಲ್ಲಿ ಯಾರಿಗೂ ತಿಳುವಳಿಕೆಯಿಲ್ಲ; ಇವರೆಲ್ಲರೂ ಬೊಗಳಲಾರದ ಮೂಗನಾಯಿಗಳು, ನಿದ್ರೆಯನ್ನಾಶಿಸಿ ಮಲಗಿಕೊಂಡು ಕನವರಿಸುವ ನಾಯಿಗಳು.


ದೇವರು ತನ್ನ ಸಭೆಯಲ್ಲಿ ಮೊದಲನೇದಾಗಿ ಅಪೊಸ್ತಲರನ್ನು, ಎರಡನೇದಾಗಿ ಪ್ರವಾದಿಗಳನ್ನು, ಮೂರನೇದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹಾತ್ಕಾರ್ಯ ಮಾಡುವ ಶಕ್ತಿಯನ್ನೂ ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ ಪರಸಹಾಯ ಮಾಡುವ ಗುಣವನ್ನೂ ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನೂ ವಿವಿಧ ವಾಣಿಗಳನ್ನಾಡುವ ವರವನ್ನೂ ಅವರವರಿಗೆ ಕೊಟ್ಟಿದ್ದಾನೆ.


[ಅದಕ್ಕೆ ನಾನು] - ಯಾರ ಸಂಗಡ ಮಾತಾಡಿ ಅವರು ಗಮನಿಸುವಂತೆ ಸಾಕ್ಷಿಕೊಡಲಿ? ಇಗೋ, ಅವರು ಕರ್ಣಶುದ್ಧಿಯಿಲ್ಲದವರು, ಕೇಳಲಾರರು; ಅಯ್ಯೋ, ಯೆಹೋವನ ಮಾತು ಅವರಿಗೆ ತಿರಸ್ಕಾರ, ಅದರಲ್ಲಿ ಅವರಿಗೆ ಆನಂದವೇ ಇಲ್ಲ.


ಕರ್ತನು ನನಗೆ ಹೇಳಿರುವದೇನಂದರೆ - ಕಾವಲುಗಾರನನ್ನು ಇಡು, ನಡೆ; ಕಂಡದ್ದನ್ನು ತಿಳಿಸಲಿ;


ಒಂದು ದಿನವು ಬರುವದು, ಆಗ ಎಫ್ರಾಯೀವಿುನ ಗುಡ್ಡಗಳ ಮೇಲಿರುವ ಕಾವಲುಗಾರರು - ಏಳಿರಿ, ಚೀಯೋನಿಗೆ, ನಮ್ಮ ದೇವರಾದ ಯೆಹೋವನ ಸನ್ನಿಧಾನಕ್ಕೆ ಹೋಗೋಣ ಬನ್ನಿ ಎಂದು ಕೂಗುವರು.


ಬಳಿಕ ಅವನು ಸಿಂಹಧ್ವನಿಯಿಂದ - ಕರ್ತನೇ, ಹಗಲೆಲ್ಲಾ ಕೋವರದಲ್ಲಿ ನಿಂತಿದ್ದೇನೆ, ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ;


ಊರಲ್ಲಿ ಸುತ್ತುತ್ತಿರುವ ಕಾವಲುಗಾರರು ನನ್ನನ್ನು ಕಂಡು ಹಿಡಿದು ಹೊಡೆದು ಗಾಯಪಡಿಸಿದರು; ಪವುಳಿಯ ಕಾವಲುಗಾರರು ಮೇಲುಹೊದಿಕೆಯನ್ನು ನನ್ನಿಂದ ಕಿತ್ತುಕೊಂಡರು.


ಊರಲ್ಲಿ ತಿರುಗುವ ಕಾವಲುಗಾರರ ಕೈಗೆ ಸಿಕ್ಕಿದೆನು; ನನ್ನ ಪ್ರಾಣಪ್ರಿಯನನ್ನು ಕಂಡಿರಾ ಎಂದು ಅವರನ್ನು ವಿಚಾರಿಸಿದೆನು.


ಆದರೆ ಅವನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಸ್ನಾನಮಾಡಿಸಿಕೊಳ್ಳುವದಕ್ಕೆ ಬರುವದನ್ನು ಕಂಡು ಅವರಿಗೆ - ಎಲೈ ಸರ್ಪಜಾತಿಯವರೇ, ಮುಂದೆ ಕಾಣಬರುವ ದೈವಕೋಪದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮಗೆ ಉಪದೇಶ ಮಾಡಿದವರಾರು?


ಅವರು ಕೇಳಿದರೂ ಕೇಳದೆಹೋದರೂ ನೀನು ನನ್ನ ಮಾತುಗಳನ್ನು ಅವರಿಗೆ ನುಡಿಯಲೇಬೇಕು; ಅವರು ದ್ರೋಹಿಗಳೇ ಹೌದು.


ಆದಕಾರಣ, ನರಪುತ್ರನೇ, ನೀನು ಇವರ ವಿಷಯವಾಗಿ ಅಹಿತವನ್ನು ನುಡಿ, ತಪ್ಪದೆ ನುಡಿ ಎಂದು ಆಜ್ಞಾಪಿಸಿದನು.


ಯೆಹೋವನು ತೋರಿಸಿದ ಎಲ್ಲವುಗಳನ್ನು ಕೂಡಲೆ ಸೆರೆಯವರಿಗೆ ತಿಳಿಸಿದೆನು.


ಯೆಹೋವನ ದೂತನಾದ ಹಗ್ಗಾಯನು ಇದನ್ನು ನೋಡಿ ಜನರಿಗೆ - ನಿಮ್ಮೊಂದಿಗೆ ಇದ್ದೇನೆ ಎಂದು ಯೆಹೋವನು ನುಡಿಯುತ್ತಾನೆ ಎಂಬದನ್ನು ಯೆಹೋವನ ದೂತನಾಗಿಯೇ ಹೇಳಿದನು.


ಆಗ ಯೆಹೋವನು ನನಗೆ - ಬಾಲಕನೆನ್ನಬೇಡ; ಯಾರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಅವರೆಲ್ಲರ ಬಳಿಗೆ ನೀನು ಹೋಗೇ ಹೋಗುವಿ; ನಾನು ಆಜ್ಞಾಪಿಸುವದನ್ನೆಲ್ಲಾ ನುಡಿಯಲೇ ನುಡಿಯುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು