Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:20 - ಕನ್ನಡ ಸತ್ಯವೇದವು J.V. (BSI)

20 ಇದಲ್ಲದೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿ ನಾನು ಅವನ ಮುಂದೆ ಒಡ್ಡಿದ ಆಟಂಕವನ್ನು ಎಡವಿದರೆ ಅವನು ಸತ್ತೇ ಸಾಯುವನು; ನೀನು ಅವನನ್ನು ಎಚ್ಚರಿಸದೆಹೋದ ಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಸುಕೃತ್ಯಗಳು ಲೆಕ್ಕಕ್ಕೆ ಬಾರವು; ಅವನ ಮರಣಕ್ಕಾಗಿ ನಿನಗೇ ಮುಯ್ಯಿತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇದಲ್ಲದೆ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯಮಾಡುವವನಾದರೆ, ಆಗ ನಾನು ಅವನ ಮುಂದೆ ಅಡಚಣೆಯನ್ನು ಒಡ್ಡುವೆನು, ಎಡವಿದರೆ ಅವನು ಸಾಯುವನು; ನೀನು ಅವನನ್ನು ಎಚ್ಚರಿಸದೆ ಹೋದಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಒಳ್ಳೆಕಾರ್ಯಗಳು ಲೆಕ್ಕಕ್ಕೆ ಬರುವುದಿಲ್ಲ. ಆದರೆ ಅವನ ಮರಣಕ್ಕೆ ನೀನು ಹೊಣೆಯಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇದಲ್ಲದೆ, ಸಜ್ಜನನೊಬ್ಬನು ತನ್ನ ಸನ್ನಡತೆಯನ್ನು ಬಿಟ್ಟು ಅಧರ್ಮಮಾಡುವಲ್ಲಿ, ನಾನು ಅವನ ಮುಂದೆ ಒಡ್ಡುವ ಆತಂಕವನ್ನು ಎಡವಿ ಅವನು ಸತ್ತೇ ಸಾಯುವನು; ನೀನು ಅವನನ್ನು ಎಚ್ಚರಿಸದೆಹೋದ ಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಸುಕೃತ್ಯಗಳು ಲೆಕ್ಕಕ್ಕೆಬಾರವು; ಅವನ ಮರಣಕ್ಕೆ ನೀನೆ ಹೊಣೆಯಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಒಳ್ಳೆಯವನು ತನ್ನ ಒಳ್ಳೆಯತನವನ್ನು ತೊರೆದು ಕೆಟ್ಟದ್ದನ್ನು ಮಾಡಿದರೆ, ನಾನು ಅವನ ಹಾದಿಗೆ ತಡೆಯನ್ನು ಹಾಕಿ ಅವನು ಬೀಳುವಂತೆ ಮಾಡುವೆನು; ಅವನು ಸಾಯುವನು. ನೀನು ಅವನನ್ನು ಎಚ್ಚರಿಸಲಿಲ್ಲವಾದ್ದರಿಂದ ಅವನು ತನ್ನ ಪಾಪದ ನಿಮಿತ್ತ ಸಾಯುವನು. ಆದರೆ ಅವನ ಮರಣಕ್ಕೆ ನಾನು ನಿನ್ನನ್ನೆ ಹೊಣೆಗಾರನನ್ನಾಗಿ ಮಾಡುತ್ತೇನೆ. ಜನರು ಅವನ ಒಳ್ಳೆಯ ಕಾರ್ಯಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡುವನೋ, ಆಗ ನಾನು ಅವನ ಮುಂದೆ ಅಡತಡೆಯನ್ನು ಇಡುವೆನು, ಅವನು ಸಾಯುವನು. ನೀನು ಅವನನ್ನು ಎಚ್ಚರಿಸದೆ ಇದ್ದುದರಿಂದಲೇ ಅವನು ತನ್ನ ಪಾಪದಲ್ಲಿ ಸಾಯುವನು. ಅವನು ಮಾಡಿರುವ ಸುಕೃತ್ಯಗಳು ಲೆಕ್ಕಕ್ಕೆ ಬರುವುದಿಲ್ಲ. ಆದರೆ ಅವನ ಸಾವಿಗೆ ನೀನೇ ಹೊಣೆಯಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:20
41 ತಿಳಿವುಗಳ ಹೋಲಿಕೆ  

ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿ ದುಷ್ಟನು ನಡಿಸುವ ದುರಾಚಾರಗಳನ್ನೆಲ್ಲಾ ನಡಿಸಿದರೆ ಅವನು ಬಾಳುವನೋ? ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು, ಅವನು ಮಾಡುತ್ತಿರುವ ಪಾಪಾಪರಾಧಗಳಿಂದಲೇ ಸಾಯುವನು.


ನಾನು ದುಷ್ಟನಿಗೆ - ಸತ್ತೇ ಸಾಯುವಿ ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆಯೂ ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆಯೂ ಇದ್ದರೆ ಆ ದುಷ್ಟನು ತನ್ನ ಅಪರಾಧದಿಂದ ಸಾಯಬೇಕಾಗುವದು; ಅವನ ಮರಣಕ್ಕಾಗಿ ನಿನಗೇ ಮುಯ್ಯಿತೀರಿಸುವೆನು.


ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನಗೆ ಸಂತೋಷವಿರುವದಿಲ್ಲ ಎಂದು ಬರೆದದೆ.


ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮ ಮಾಡಿ ಅದರಲ್ಲಿ ಸತ್ತರೆ ತಾನು ಮಾಡಿದ ಅಧರ್ಮದಿಂದಲೇ ಸಾಯಬೇಕಾಯಿತು.


ಯೆಹೋವನು ಡೊಂಕುದಾರಿಹಿಡಿದವರನ್ನು ಪಾತಕಿಗಳ ಗತಿಗೆ ಹೋಗಮಾಡಲಿ. ಇಸ್ರಾಯೇಲ್ಯರಿಗೆ ಶುಭವುಂಟಾಗಲಿ.


ಅವರು ನಮ್ಮನ್ನು ಬಿಟ್ಟು ಹೊರಟುಹೋದರು, ಆದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು, ಆದರೆ ಅವರು ನಮ್ಮನ್ನು ಬಿಟ್ಟುಹೋದದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲವೆಂಬದು ಸ್ಪಷ್ಟವಾಗಿ ತೋರಬಂತು.


ಅದು ಎಡವುವ ಕಲ್ಲು ಮುಗ್ಗರಿಸುವ ಬಂಡೆ ಎಂತಲೂ ಬರೆದಿರುವ ಮಾತು ಸರಿಬೀಳುತ್ತದೆ. ಅವರು ದೇವರ ವಾಕ್ಯವನ್ನು ನಂಬಲೊಲ್ಲದೆ ಇರುವದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ; ಅದಕ್ಕಾಗಿಯೇ ಅವರು ನೇಮಕವಾದರು.


ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿದರೆ ಆ ಅಧರ್ಮದಿಂದಲೇ ಸಾಯುವನು.


ಆದಕಾರಣ ಇಗೋ, ನಾನು ಈ ಜನರ ಮುಂದೆ ಆಟಂಕಗಳನ್ನು ಒಡ್ಡುವೆನು; ತಂದೆಗಳೂ ಮಕ್ಕಳೂ ಅವುಗಳನ್ನು ಎಡವುವರು, ನೆರೆಹೊರೆಯವರೂ ನಾಶವಾಗುವರು. ಇದೇ ಯೆಹೋವನಾದ ನನ್ನ ನುಡಿ.


ಯೆಹೋವನನ್ನು ಆಶ್ರಯಿಸದೆ ಯೆಹೋವನ ದರ್ಶನವನ್ನು ಬಯಸದೆ ಯೆಹೋವನ ಮಾರ್ಗಬಿಟ್ಟವರನ್ನೂ ಧ್ವಂಸಪಡಿಸುವೆನು.


ಆದರೆ ಕಾವಲುಗಾರನು ಬೀಳುವ ಖಡ್ಗವನ್ನು ನೋಡಿಯೂ ಕೊಂಬನ್ನೂದದೆ ಸ್ವಜನರನ್ನು ಎಚ್ಚರಿಸದೆ ಇರುವಲ್ಲಿ ಖಡ್ಗವು ಬಿದ್ದು ಆ ಜನರೊಳಗೆ ಯಾವನನ್ನೇ ಆಗಲಿ ನಾಶಮಾಡಿದರೆ ತನ್ನ ಅಧರ್ಮದಲ್ಲೇ ನಾಶಗೊಂಡ ಆ ಮನುಷ್ಯನ ಮರಣಕ್ಕೆ ಹೊಣೆಯಾದ ಕಾವಲುಗಾರನಿಗೆ ಮುಯ್ಯಿತೀರಿಸುವೆನು.


ನರಪುತ್ರನೇ, ಇವರು ತಮ್ಮ ಬೊಂಬೆಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ ತಮಗೆ ಪಾಪಕಾರಿಯಾದ ವಿಘ್ನವನ್ನು ತಮ್ಮ ಮುಂದೆ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವದು ಯುಕ್ತವೋ? ಎಂದಿಗೂ ಅಲ್ಲ.


ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ತರಗೆಲೆಯೋಪಾದಿಯಲ್ಲಿ ಒಣಗಿ ಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.


ಆತನು ಆಶ್ರಯವಾಗುವನು; ಆದರೆ ಇಸ್ರಾಯೇಲಿನ ಎರಡು ಮನೆತನಕ್ಕೆ ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಯೆರೂಸಲೇವಿುನ ನಿವಾಸಿಗಳಿಗೆ ಬಲೆಯೂ ಬೋನೂ ಆಗುವನು.


ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವಂತೆ ನೋಡಿರಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.


ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರಪಡಿಸುತ್ತೇವೆ. ಇಂಥ ಕ್ರಿಸ್ತನ ಸಂಗತಿಯು ಯೆಹೂದ್ಯರಿಗೆ ವಿಘ್ನವೂ ಅನ್ಯಜನರಿಗೆ ಹುಚ್ಚುಮಾತೂ ಆಗಿದೆ;


ಇದಲ್ಲದೆ - ಅವರ ಊಟವೇ ಅವರಿಗೆ ಉರ್ಲೂ ಬೋನೂ ಎಡತಡೆಯೂ ಶಿಕ್ಷೆಯೂ ಆಗಲಿ;


ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ಒಳ್ಳೆಯ ಹೃದಯದಲ್ಲಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ; ಇವರೇ ಬೀಜ ಬಿದ್ದ ಒಳ್ಳೆಯ ನೆಲವಾಗಿರುವವರು.


ನನ್ನ ದೇವರೇ, ಕಿವಿಗೊಟ್ಟು ಕೇಳು, ಕಣ್ಣುತೆರೆದು ನಮ್ಮ ಹಾಳುಪ್ರದೇಶಗಳನ್ನೂ ನಿನ್ನ ಹೆಸರುಗೊಂಡಿರುವ ಪಟ್ಟಣವನ್ನೂ ನೋಡು; ನಾವು ಸದ್ಧರ್ಮಿಗಳೆಂತಲ್ಲ, ನಿನ್ನ ಮಹಾ ಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿನ್ನ ಮುಂದೆ ಅರಿಕೆಮಾಡುತ್ತಿದ್ದೇವೆ.


ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧಪದಾರ್ಥದಂತಿರುವದು; ಯೆಹೋವನು ತನ್ನ ರೋಷವನ್ನು ತೀರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರವು ಅವರನ್ನು ರಕ್ಷಿಸಲಾರದು; ಅವರ ಇಷ್ಟಾರ್ಥ ನೆರವೇರದು, ಅವರ ಹೊಟ್ಟೆ ತುಂಬದು; ಏಕಂದರೆ ಅವರ ಆಸ್ತಿಯು ಅವರಿಗೆ ಪಾಪಕಾರಿವಿಘ್ನವಾಗಿತ್ತು.


ಕೇಳುವ ಕಿವಿಗೆ ಮುಟ್ಟುವ ಬುದ್ಧಿವಾದವು ಹೊನ್ನಿನ ಮುರುವಿಗೂ ಅಪರಂಜಿಯ ಆಭರಣಕ್ಕೂ ಸಮಾನ.


ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ ಸಂಪೂರ್ಣ ಸಮಾಧಾನವಿರುತ್ತದೆ; ಅಂಥವರಿಗೆ ವಿಘ್ನಕರವಾದದ್ದೇನೂ ಇರುವದಿಲ್ಲ.


ಅವನ ಬಾಯಿಂದ ಕೆಡುಕೂ ವಂಚನೆಯೂ ಬರುತ್ತವೆ; ವಿವೇಕಮಾರ್ಗವನ್ನೂ ಪರಹಿತವನ್ನೂ ಬಿಟ್ಟೇ ಬಿಟ್ಟಿದ್ದಾನೆ.


ಆಗ ಯೆಹೋವನು ಅಮಚ್ಯನ ಮೇಲೆ ಬಹಳವಾಗಿ ಕೋಪಗೊಂಡು ಅವನ ಬಳಿಗೆ ಪ್ರವಾದಿಯನ್ನು ಕಳುಹಿಸಿ ಅವನಿಗೆ - ನಿನ್ನ ಕೈಯಿಂದ ತಮ್ಮ ಜನರನ್ನು ತಪ್ಪಿಸಲಾರದೆಹೋದ ಅನ್ಯದೇವತೆಗಳಲ್ಲಿ ಭಕ್ತಿಯನ್ನೇಕೆ ಇಟ್ಟಿದ್ದೀ ಎಂದು ಹೇಳಿಸಿದನು.


ಅವನು ಯಾಜಕನಾದ ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಚಿತ್ತಾನುಸಾರವಾಗಿ ನಡೆದುಕೊಳ್ಳುತ್ತಿದ್ದನು.


ನಿಮ್ಮ ದೇವರಾದ ಯೆಹೋವನು - ಇವರು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ತನ್ನನ್ನೇ ಪ್ರೀತಿಸುವವರು ಹೌದೋ ಅಲ್ಲವೋ ಎಂಬದನ್ನು ತಿಳಿದುಕೊಳ್ಳುವದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾನೆ.


ಸಹೋದರನ ವಿಷಯವಾಗಿ ಮನಸ್ಸಿನಲ್ಲಿ ದ್ವೇಷವನ್ನು ಇಟ್ಟುಕೊಳ್ಳಬಾರದು. ನೆರೆಯವನ ದೋಷಕ್ಕೆ ನೀವು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ತಿಳಿಸಲೇಬೇಕು.


ಸಿಮೆಯೋನನು ಅವರನ್ನು ಆಶೀರ್ವದಿಸಿ ತಾಯಿಯಾದ ಮರಿಯಳಿಗೆ - ಇಗೋ, ಈತನು ಇಸ್ರಾಯೇಲ್ ಜನರಲ್ಲಿ ಅನೇಕರು ಬೀಳುವದಕ್ಕೂ ಅನೇಕರು ಏಳುವದಕ್ಕೂ ಕಾರಣನಾಗಿರುವನು; ಮತ್ತು ಜನರು ಎದುರು ಮಾತಾಡುವದಕ್ಕೆ ಗುರುತಾಗಿರುವನು; ಹೀಗೆ ಬಹುಜನರ ಅಂತರಂಗದ ವಿಚಾರಗಳು ಬೈಲಿಗೆ ಬಂದಾವು; ಇದಕ್ಕೆ ಈತನು ಹುಟ್ಟಿದ್ದು.


ಇದಲ್ಲದೆ ನಿನ್ನ ಸಹೋದರನು ತಪ್ಪುಮಾಡಿದರೆ ನೀನು ಹೋಗಿ ನೀನೂ ಅವನೂ ಇಬ್ಬರೇ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ.


ಆಮೇಲೆ ನೀವು ಮನಸ್ಸನ್ನು ಬೇರೆ ಮಾಡಿಕೊಂಡಿರಿ; ಸ್ವತಂತ್ರರನ್ನಾಗಿ ಬಿಟ್ಟಿದ್ದವರನ್ನು ಪುನಃ ದಾಸದಾಸಿಯರನ್ನಾಗಿ ಸೇರಿಸಿಕೊಂಡು ಅಧೀನಮಾಡಿಕೊಂಡು ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು