ಯೆಹೆಜ್ಕೇಲನು 3:22 - ಕನ್ನಡ ಸತ್ಯವೇದವು J.V. (BSI)22 ಅದೇ ಸ್ಥಳದಲ್ಲಿ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು ಆತನು ನನಗೆ - ನೀನೆದ್ದು ಬೈಲುಸೀಮೆಗೆ ಹೊರಡು, ಅಲ್ಲಿ ನಾನು ನಿನ್ನೊಂದಿಗೆ ಮಾತನಾಡುವೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅದೇ ಸ್ಥಳದಲ್ಲಿ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು ಆತನು ನನಗೆ, “ನೀನು ಎದ್ದು, ಬಯಲು ಸೀಮೆಗೆ ಹೊರಡು, ಅಲ್ಲಿ ನಾನು ನಿನ್ನೊಂದಿಗೆ ಮಾತನಾಡುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅದೇ ಸ್ಥಳದಲ್ಲಿ ನಾನು ಸರ್ವೇಶ್ವರನ ಹಸ್ತಸ್ಪರ್ಶದಿಂದ ಪರವಶನಾದೆ. ಆಗ ಅವರು ನನಗೆ, “ನೀನೆದ್ದು ಬಯಲುಪ್ರದೇಶಕ್ಕೆ ಹೊರಡು, ಅಲ್ಲಿ ನಾನು ನಿನ್ನೊಂದಿಗೆ ಮಾತಾಡುವೆನು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯೆಹೋವನ ಆತ್ಮನಿಂದ ನಾನು ಪರವಶನಾದೆನು. ಆತನು ನನಗೆ, “ಎದ್ದೇಳು, ಬಯಲು ಸೀಮೆಗೆ ಹೋಗು. ಅಲ್ಲಿ ನಾನು ನಿನ್ನೊಂದಿಗೆ ಮಾತನಾಡುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆಗ ಅಲ್ಲಿ ಯೆಹೋವ ದೇವರ ಹಸ್ತವು ನನ್ನ ಮೇಲಿತ್ತು. ನನಗೆ ಅವರು ಹೇಳಿದ್ದೇನೆಂದರೆ, “ಎದ್ದೇಳು, ಬಯಲು ಸೀಮೆಗೆ ಹೋಗು ಮತ್ತು ಅಲ್ಲಿ ನಾನು ನಿನ್ನ ಸಂಗಡ ಮಾತನಾಡುವೆನು.” ಅಧ್ಯಾಯವನ್ನು ನೋಡಿ |