ಯೆಹೆಜ್ಕೇಲನು 3:27 - ಕನ್ನಡ ಸತ್ಯವೇದವು J.V. (BSI)27 ನಾನು ನಿನ್ನೊಡನೆ ಮತ್ತೆ ಮಾತಾಡುವ ಕಾಲದಲ್ಲಿ ನಿನ್ನ ಬಾಯನ್ನು ಬಿಚ್ಚುವೆನು; ಆಗ ನೀನು ಅವರಿಗೆ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ ಎಂದು ನುಡಿಯಬೇಕು; ಕೇಳುವವನು ಕೇಳಲಿ. ಕೇಳದವನು ಬಿಡಲಿ; ಅವರು ದ್ರೋಹದ ಜನವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ನಾನು ನಿನ್ನೊಡನೆ ಮತ್ತೆ ಮಾತನಾಡುವಾಗ ನಾನು ನಿನ್ನ ಬಾಯಿಯನ್ನು ಬಿಚ್ಚುವೆನು; ಆಗ ನೀನು ಅವರಿಗೆ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ಹೇಳಬೇಕು; ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ; ಅವರು ತಿರುಗಿ ಬೀಳುವ ವಂಶದವರೇ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ನಾನು ನಿನ್ನೊಡನೆ ಮತ್ತೆ ಮಾತಾಡುವಾಗ ನಿನ್ನ ಬಾಯನ್ನು ಬಿಚ್ಚುವೆನು; ಆಗ ನೀನು ಅವರಿಗೆ, ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ’ ಎಂದು ನುಡಿಯಬೇಕು; ಕೇಳುವವನು ಕೇಳಲಿ, ಕೇಳದವನು ಬಿಡಲಿ; ಏಕೆಂದರೆ ಅವರು ದ್ರೋಹಿವಂಶದವರೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆದರೆ ನಾನು ನಿನ್ನೊಂದಿಗೆ ಮಾತನಾಡುವಾಗ, ನಿನ್ನನ್ನು ಮಾತನಾಡಲಾಗುವಂತೆ ಮಾಡುವೆನು. ಆಗ ನೀನು ಅವರಿಗೆ, ‘ನಮ್ಮ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ’ ಎಂದು ಹೇಳಬೇಕು. ಕೆಲವರು ಕಿವಿಗೊಡುವರು; ಕೆಲವರು ಕಿವಿಗೊಡರು; ಯಾಕೆಂದರೆ ಅವರು ಯಾವಾಗಲೂ ನನಗೆ ವಿರುದ್ಧವಾಗಿಯೇ ಇರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆಯುವೆನು. ಆಗ ನೀನು ಅವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ.’ ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಏಕೆಂದರೆ ಅವರು ತಿರುಗಿಬೀಳುವ ಜನರಾಗಿದ್ದಾರೆಂದು ಹೇಳಬೇಕು. ಅಧ್ಯಾಯವನ್ನು ನೋಡಿ |