Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:4 - ಕನ್ನಡ ಸತ್ಯವೇದವು J.V. (BSI)

4 ಆಮೇಲೆ ಆತನು ನನಗೆ ಹೀಗೆ ಹೇಳಿದನು - ನರಪುತ್ರನೇ, ನೀನು ಇಸ್ರಾಯೇಲ್ ವಂಶದವರ ಬಳಿಗೆ ಹೋಗಿ ನಾನು ತಿಳಿಸುವ ಮಾತುಗಳನ್ನು ಅವರಿಗೆ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಮೇಲೆ ಆತನು ನನಗೆ ಹೀಗೆಂದನು, “ನರಪುತ್ರನೇ, ನೀನು ಇಸ್ರಾಯೇಲ್ ವಂಶದವರ ಬಳಿಗೆ ಹೋಗಿ ನಾನು ತಿಳಿಸುವ ಮಾತುಗಳನ್ನು ಅವರಿಗೆ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆಮೇಲೆ ಸರ್ವೇಶ್ವರ ನನಗೆ ಹೀಗೆಂದರು: “ನರಪುತ್ರನೇ, ನೀನು ಇಸ್ರಯೇಲ್ ವಂಶದವರ ಬಳಿಗೆ ಹೋಗಿ ನಾನು ತಿಳಿಸುವ ಮಾತುಗಳನ್ನು ಅವರಿಗೆ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ದೇವರು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಇಸ್ರೇಲ್ ವಂಶದವರ ಬಳಿಗೆ ಹೋಗಿ ನನ್ನ ಮಾತುಗಳನ್ನು ಅವರಿಗೆ ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನನಗೆ ಅವರು, “ಮನುಷ್ಯಪುತ್ರನೇ, ಹೋಗು; ಇಸ್ರಾಯೇಲಿನ ಜನರ ಬಳಿಗೆ ಹೋಗಿ, ನನ್ನ ಮಾತುಗಳನ್ನು ಅವರಿಗೆ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:4
12 ತಿಳಿವುಗಳ ಹೋಲಿಕೆ  

ಆದರೆ ಪವಿತ್ರಾತ್ಮ ನಿಮ್ಮ ಮೇಲೆ ಬರಲು ನೀವು ಬಲವನ್ನು ಹೊಂದಿ ಯೆರೂಸಲೇವಿುನಲ್ಲಿಯೂ ಎಲ್ಲಾ ಯೂದಾಯ ಸಮಾರ್ಯ ಸೀಮೆಗಳಲ್ಲಿಯೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರಬೇಕು ಅಂದನು.


ಅದಕ್ಕಾತನು - ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲನ ಮನೆತನದವರ ಬಳಿಗೇ ಹೊರತು ಮತ್ತಾರ ಬಳಿಗೂ ನಾನು ಕಳುಹಿಸಲ್ಪಟ್ಟವನಲ್ಲ ಅಂದನು.


ಸೆರೆಯಾಗಿರುವ ನಿನ್ನ ಸ್ವಜನರ ಬಳಿಗೆ ಹೋಗಿ ಅವರು ಕೇಳಿದರೂ ಕೇಳದೆಹೋದರೂ ಅವರನ್ನು ಪ್ರಬೋಧಿಸಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ ಎಂದು ಅವರಿಗೆ ಸಾರು.


ಅವರು ಕೇಳಿದರೂ ಕೇಳದೆಹೋದರೂ ನೀನು ನನ್ನ ಮಾತುಗಳನ್ನು ಅವರಿಗೆ ನುಡಿಯಲೇಬೇಕು; ಅವರು ದ್ರೋಹಿಗಳೇ ಹೌದು.


ಆತನು ನನಗೆ ಹೀಗೆ ಹೇಳಿದನು - ನರಪುತ್ರನೇ, ನನಗೆ ವಿರುದ್ಧವಾಗಿ ತಿರುಗಿಬಿದ್ದು ದ್ರೋಹಮಾಡಿದ ಜನಾಂಗದವರಾದ ಇಸ್ರಾಯೇಲ್ಯರ ಬಳಿಗೆ ನಿನ್ನನ್ನು ಕಳುಹಿಸುವೆನು; ಈ ದಿನದವರೆಗೆ ಅವರೂ ಅವರ ಪಿತೃಗಳೂ ನನಗೆ ಅಪರಾಧಮಾಡುತ್ತಲೇ ಇದ್ದಾರೆ.


ಆಗ ಆತನು ನನಗೆ - ನರಪುತ್ರನೇ, ನಾನು ಕೊಡುವ ಈ ಸುರಳಿಯನ್ನು ತಿಂದು ಹೊಟ್ಟೆ ತುಂಬಿಸಿಕೋ ಎಂದು ಹೇಳಲು ಅದನ್ನು ತಿಂದುಬಿಟ್ಟೆನು; ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು.


ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಬಳಿಗೆ ಕಳುಹಿಸುತ್ತೇನೆಯೇ ಹೊರತು ಕಷ್ಟಕರವಾದ ಅನ್ಯಭಾಷೆಯ ಜನರ ಬಳಿಗೆ ಕಳುಹಿಸುವದಿಲ್ಲ;


ಆದಕಾರಣ, ನರಪುತ್ರನೇ, ನೀನು ಇವರ ವಿಷಯವಾಗಿ ಅಹಿತವನ್ನು ನುಡಿ, ತಪ್ಪದೆ ನುಡಿ ಎಂದು ಆಜ್ಞಾಪಿಸಿದನು.


ಯೆಹೋವನು ತೋರಿಸಿದ ಎಲ್ಲವುಗಳನ್ನು ಕೂಡಲೆ ಸೆರೆಯವರಿಗೆ ತಿಳಿಸಿದೆನು.


ಹೀಗಿರಲು, ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಈ ಮಾತನ್ನು ಹೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ಪಿತೃಗಳು ಇನ್ನೂ ಒಂದು ದ್ರೋಹವನ್ನು ಮಾಡಿ ನನ್ನನ್ನು ದೂಷಿಸಿದ್ದಾರೆ.


ನಾನು ಯಾವ ಸಂತಾನದವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಂತಾನದವರು ನಾಚಿಕೆಗೆಟ್ಟವರೂ ಹಟಗಾರರೂ ಆಗಿರುತ್ತಾರೆ; ನೀನು ಅವರಿಗೆ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ ಎಂದು ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು