ಯೆಹೆಜ್ಕೇಲನು 3:6 - ಕನ್ನಡ ಸತ್ಯವೇದವು J.V. (BSI)6 ಹೌದು, ನಿನಗೆ ತಿಳಿಯಲಾಗದ ಕಷ್ಟಕರವಾದ ಅನ್ಯಭಾಷೆಯನ್ನಾಡುವ ನಾನಾ ಜನಾಂಗಗಳ ಕಡೆಗೆ ನೀನು ಕಳುಹಿಸಲ್ಪಟ್ಟವನಲ್ಲ. ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ ಪಕ್ಷದಲ್ಲಿ ಅವರಾದರೂ ನಿಶ್ಚಯವಾಗಿ ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಹೌದು, ನಿನಗೆ ಅರ್ಥವಾಗದ ಕಷ್ಟಕರವಾದ ಅನ್ಯಭಾಷೆಯನ್ನಾಡುವ ನಾನಾ ಜನಾಂಗಗಳ ಬಳಿಗೆ ನಿನ್ನನು ಕಳುಹಿಸುವುದಿಲ್ಲ. ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ ಪಕ್ಷದಲ್ಲಿ ಅವರಾದರೂ ನಿಶ್ಚಯವಾಗಿ ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಹೌದು, ನಿನಗೆ ಅರ್ಥವಾಗದ ಕಷ್ಟಕರವಾದ ಅನ್ಯಭಾಷೆಯನ್ನಾಡುವ ನಾನಾ ಜನಾಂಗಗಳ ಕಡೆಗೆ ಕಳುಹಿಸುತ್ತಿಲ್ಲ. ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ ಪಕ್ಷದಲ್ಲಿ ಅವರಾದರೂ ನಿಶ್ಚಯವಾಗಿ ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಭಾಷೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟಕರವಾದ ಅಥವಾ ಮಾತಾಡಲು ಕಷ್ಟವಾದ ಅಥವಾ ಪದಗಳನ್ನು ಅರ್ಥಮಾಡಿಕೊಳ್ಳಲು ನಿನಗೆ ಸಾಧ್ಯವಾಗದ ಅನೇಕ ಜನಾಂಗಗಳ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತಿಲ್ಲ. ಆ ಜನಾಂಗಗಳ ಬಳಿಗೆ ನಾನು ನಿನ್ನನ್ನು ಕಳುಹಿಸಿದರೆ ಅವರು ಖಂಡಿತವಾಗಿಯೂ ಕಿವಿಗೊಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಾನು ನಿನ್ನನ್ನು ಅಸ್ಪಷ್ಟ ಮಾತು ಮತ್ತು ಅನ್ಯಭಾಷೆ ಹೊಂದಿರುವ ಅನೇಕ ಜನರ ಬಳಿ ಕಳುಹಿಸುತ್ತಿಲ್ಲ. ಏಕೆಂದರೆ ಅವರ ಪದಗಳು ನಿಮಗೆ ಅರ್ಥವಾಗುವುದಿಲ್ಲ. ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ ಪಕ್ಷದಲ್ಲಿ, ನಿಶ್ಚಯವಾಗಿ ಅವರು ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು. ಅಧ್ಯಾಯವನ್ನು ನೋಡಿ |