Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:7 - ಕನ್ನಡ ಸತ್ಯವೇದವು J.V. (BSI)

7 ಇಸ್ರಾಯೇಲ್ ವಂಶದವರೋ ನಿನಗೆ ಕಿವಿಗೊಡಲೊಲ್ಲರು; ನನಗೂ ಕಿವಿಗೊಡಲೊಲ್ಲರು; ಅವರೆಲ್ಲರೂ ನಾಚಿಕೆಗೆಟ್ಟವರೂ ಹಟಗಾರರೂ ಆಗಿದ್ದಾರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇಸ್ರಾಯೇಲ್ ವಂಶದವರೋ ನಿನಗೆ ಕಿವಿಗೊಡಲು ಸಿದ್ಧರಿಲ್ಲ; ನನಗೂ ಕಿವಿಗೊಡಲು ಸಿದ್ಧರಿಲ್ಲ; ಅವರೆಲ್ಲರೂ ನಾಚಿಕೆಗೆಟ್ಟವರೂ, ಹಟಮಾರಿಗಳು ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇಸ್ರಯೇಲ್ ವಂಶದವರೋ ನಿನಗೆ ಕಿವಿಗೊಡಲು ಸಿದ್ಧರಿಲ್ಲ; ನನಗೂ ಕಿವಿಗೊಡಲು ಸಿದ್ಧರಿಲ್ಲ; ಅವರೆಲ್ಲರು ಗರ್ವಿಗಳು ಹಾಗೂ ಹಟಮಾರಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ನಾನು ಇಸ್ರೇಲ್ ವಂಶದವರ ಬಳಿಗೆ ನಿನ್ನನ್ನು ಕಳುಹಿಸುತ್ತಿದ್ದೇನೆ. ಇವರಿಗೆ ಮೊಂಡತನವಿರುವದು. ನಿನ್ನ ಮಾತನ್ನು ಕೇಳಲು ನಿರಾಕರಿಸುವರು. ಅವರಿಗೆ ನನ್ನ ಮಾತುಗಳನ್ನು ಕೇಳಲು ಇಷ್ಟವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೆ ಇಸ್ರಾಯೇಲಿನ ಜನರೋ ನಿನ್ನ ಮಾತನ್ನು ಕೇಳಲು ಸಿದ್ಧರಿಲ್ಲ. ಏಕೆಂದರೆ ಅವರು ನನ್ನ ಮಾತನ್ನು ಕೇಳಲು ಸಿದ್ಧರಿಲ್ಲ. ಅವರೆಲ್ಲರು ಗರ್ವಿಗಳು ಹಾಗೂ ಹಟಮಾರಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:7
22 ತಿಳಿವುಗಳ ಹೋಲಿಕೆ  

ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ; ನಿಮ್ಮನ್ನು ಅಲಕ್ಷ್ಯಮಾಡುವವನು ನನ್ನನ್ನು ಅಲಕ್ಷ್ಯಮಾಡುವವನಾಗಿದ್ದಾನೆ; ನನ್ನನ್ನು ಅಲಕ್ಷ್ಯಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಅಲಕ್ಷ್ಯಮಾಡುವವನಾಗಿದ್ದಾನೆ ಅಂದನು.


ನಾನು ಯಾವ ಸಂತಾನದವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಂತಾನದವರು ನಾಚಿಕೆಗೆಟ್ಟವರೂ ಹಟಗಾರರೂ ಆಗಿರುತ್ತಾರೆ; ನೀನು ಅವರಿಗೆ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ ಎಂದು ನುಡಿ.


ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳಿಕೆಗೆ ಬೇಡವೆನ್ನುತ್ತಾರೆ.


ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ಇವನು ನಮ್ಮ ಮೇಲೆ ದೊರೆತನಮಾಡುವದು ನಮಗೆ ಇಷ್ಟವಿಲ್ಲ ಎಂದು ಹೇಳಿಸಿದರು.


ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಕೂಡಿಸಿಕೊಳ್ಳುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿಮಗೆ ಮನಸ್ಸಿಲ್ಲದೆ ಹೋಯಿತು.


ಯೆರೂಸಲೇಮು ಸುರಿಸಿದ ರಕ್ತವು ಅದರಲ್ಲೇ ನಿಂತಿದೆ; ದೂಳು ಮುಚ್ಚೀತೆಂದು ಆ ಪಟ್ಟಣದವರು ಅದನ್ನು ನೆಲದ ಮೇಲೆ ಹೊಯ್ಯದೆ ಬರೀ ಬಂಡೆಯ ಮೇಲೆ ನಿಲ್ಲಿಸಿರುತ್ತಾರೆ;


ಯೆಹೋವನ ಹೆಸರಿನಿಂದ ನೀನು ನಮಗೆ ನುಡಿದ ಮಾತನ್ನು ಕೇಳಲೊಲ್ಲೆವು.


ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ಪಶ್ಚಾತ್ತಾಪಪಡಲಿಲ್ಲ, ಸಂಹರಿಸಿದರೂ ಶಿಕ್ಷಣಕ್ಕೆ ಒಪ್ಪಲಿಲ್ಲ; ತಮ್ಮ ಮುಖವನ್ನು ಕಲ್ಲಿಗಿಂತ ಕಠಿಣಮಾಡಿಕೊಂಡು ತಿರುಗಿಕೊಳ್ಳಲೊಲ್ಲದೆ ಹೋಗಿದ್ದಾರೆ.


ಆದಕಾರಣ ಹದಮಳೆಗೆ ಅಡ್ಡಿಯಾಯಿತು, ಹಿಂಗಾರೂ ಆಗಲಿಲ್ಲ; ಆದರೂ ನೀನು ಸೂಳೆಯ ಮುಖವುಳ್ಳವಳಾಗಿ ನಾಚಿಕೆಗೆಟ್ಟಿದ್ದೀ.


ಅವರ ಮುಖಭಾವವೇ ಅವರಿಗೆ ವಿರುದ್ಧ ಸಾಕ್ಷಿಯಾಗಿದೆ; ತಮ್ಮ ಪಾಪವನ್ನು ಮರೆಮಾಜದೆ ಸೊದೋವಿುನವರಂತೆ ಮೆರೆಯಿಸುತ್ತಾರೆ. ಅಯ್ಯೋ, ಅವರ ಆತ್ಮದ ಗತಿಯೇ! ತಮಗೆ ತಾವೇ ಕೇಡು ಮಾಡಿಕೊಂಡಿದ್ದಾರೆ.


ನೀನು ಹಟಗಾರ, ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು;


ಹೌದು, ನಿನಗೆ ತಿಳಿಯಲಾಗದ ಕಷ್ಟಕರವಾದ ಅನ್ಯಭಾಷೆಯನ್ನಾಡುವ ನಾನಾ ಜನಾಂಗಗಳ ಕಡೆಗೆ ನೀನು ಕಳುಹಿಸಲ್ಪಟ್ಟವನಲ್ಲ. ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ ಪಕ್ಷದಲ್ಲಿ ಅವರಾದರೂ ನಿಶ್ಚಯವಾಗಿ ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು.


ಇಗೋ, ಅವರ ಕಠಿನ ಮುಖಕ್ಕೆ ವಿರುದ್ಧವಾಗಿ ನಿನ್ನ ಮುಖವನ್ನು ಕಠಿನಪಡಿಸಿದ್ದೇನೆ; ಅವರ ಹಣೆಗೆ ಪ್ರತಿಯಾಗಿ ನಿನ್ನ ಹಣೆಯನ್ನು ಗಟ್ಟಿಮಾಡಿದ್ದೇನೆ.


ಧರ್ಮೋಪದೇಶವನ್ನೂ ಸೇನಾಧೀಶ್ವರ ಯೆಹೋವನು ಪೂರ್ವಕಾಲದ ಪ್ರವಾದಿಗಳ ಮೂಲಕ ತನ್ನ ಆತ್ಮನಿಂದ ಹೇಳಿಸಿದ ಮಾತುಗಳನ್ನೂ ಕೇಳಬಾರದೆಂದು ತಮ್ಮ ಹೃದಯಗಳನ್ನು ವಜ್ರದಷ್ಟು ಕಠಿನಪಡಿಸಿಕೊಂಡರು; ಆದಕಾರಣ ಸೇನಾಧೀಶ್ವರ ಯೆಹೋವನಿಂದ ಅತಿರೌದ್ರವು ಅವರ ಮೇಲೆ ಬಿತ್ತು.


[ಅದಕ್ಕೆ ನಾನು] - ಯಾರ ಸಂಗಡ ಮಾತಾಡಿ ಅವರು ಗಮನಿಸುವಂತೆ ಸಾಕ್ಷಿಕೊಡಲಿ? ಇಗೋ, ಅವರು ಕರ್ಣಶುದ್ಧಿಯಿಲ್ಲದವರು, ಕೇಳಲಾರರು; ಅಯ್ಯೋ, ಯೆಹೋವನ ಮಾತು ಅವರಿಗೆ ತಿರಸ್ಕಾರ, ಅದರಲ್ಲಿ ಅವರಿಗೆ ಆನಂದವೇ ಇಲ್ಲ.


ತುತೂರಿಯ ಶಬ್ದವನ್ನು ಕೇಳಿರಿ ಎಂದು ನಾನು ಅವರ ಮೇಲೆ ಕಾವಲುಗಾರರನ್ನು ನೇವಿುಸಲು ನಾವು ಕೇಳಲೊಲ್ಲೆವು ಎಂದು ಹೇಳಿದರು.


ನೀನು ಈ ಮಾತುಗಳನ್ನೆಲ್ಲಾ ಹೇಳುವಾಗ ಅವರು ಕಿವಿಗೊಡುವದಿಲ್ಲ, ಕರೆಯುವಾಗ ಉತ್ತರಕೊಡುವದಿಲ್ಲ.


ನಿಮ್ಮ ಪಿತೃಗಳಾದರೋ ಗಮನಿಸಲೊಲ್ಲದೆ ಹೆಗಲುಕೊಡದೆ ಹೋದರು. ಕೇಳಬಾರದೆಂದು ಕಿವಿಮಂದ ಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು