Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:8 - ಕನ್ನಡ ಸತ್ಯವೇದವು J.V. (BSI)

8 ಇಗೋ, ಅವರ ಕಠಿನ ಮುಖಕ್ಕೆ ವಿರುದ್ಧವಾಗಿ ನಿನ್ನ ಮುಖವನ್ನು ಕಠಿನಪಡಿಸಿದ್ದೇನೆ; ಅವರ ಹಣೆಗೆ ಪ್ರತಿಯಾಗಿ ನಿನ್ನ ಹಣೆಯನ್ನು ಗಟ್ಟಿಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇಗೋ, ನಾನು ಅವರ ಕಠಿಣ ಹೃದಯಕ್ಕೆ ವಿರುದ್ಧವಾಗಿ ನಿನ್ನ ಹೃದಯವನ್ನು ಕಠಿಣಪಡಿಸಿದ್ದೇನೆ; ಅವರ ಹಣೆಗೆ ಪ್ರತಿಯಾಗಿ ನಿನ್ನ ಹಣೆಯನ್ನು ಗಟ್ಟಿಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇಗೋ, ಅವರ ಕಠಿಣ ಹೃದಯಕ್ಕೆ ವಿರುದ್ಧ ನಿನ್ನ ಹೃದಯವನ್ನು ಕಠಿಣಪಡಿಸಿದ್ದೇನೆ; ಅವರ ಹಟಮಾರಿತನಕ್ಕೆ ಪ್ರತಿಯಾಗಿ ನಿನ್ನನ್ನು ಹಟವಾದಿಯನ್ನಾಗಿ ಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವರು ಕಠಿಣರಾಗಿರುವಂತೆಯೇ ನಾನು ನಿನ್ನನ್ನೂ ಕಠಿಣಗೊಳಿಸುತ್ತೇನೆ. ನಿನಗೂ ಅವರಂತೆ ಮೊಂಡತನವನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ನಾನು ನಿನ್ನ ಮುಖವನ್ನು ಅವರ ಮುಖಗಳ ಎದುರಿಗೆ ಕಠಿಣ ಮಾಡಿದ್ದೇನೆ. ಅವರ ಹಟಮಾರಿತನಕ್ಕೆ ಪ್ರತಿಯಾಗಿ, ನಿನ್ನನ್ನು ಹಟವಾದಿಯನ್ನಾಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:8
13 ತಿಳಿವುಗಳ ಹೋಲಿಕೆ  

ಇಗೋ, ನಾನು ಈ ಹೊತ್ತು ನಿನ್ನನ್ನು ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಸಾಧಾರಣ ಜನರು, ಅಂತು ದೇಶದವರೆಲ್ಲರನ್ನೂ ಎದುರಿಸತಕ್ಕ ಕೋಟೆಕೊತ್ತಲದ ಪಟ್ಟಣವನ್ನಾಗಿಯೂ ಕಬ್ಬಿಣದ ಕಂಬವನ್ನಾಗಿಯೂ ತಾಮ್ರದ ಪೌಳಿಗೋಡೆಯನ್ನಾಗಿಯೂ ಸ್ಥಾಪಿಸಿದ್ದೇನೆ.


ಅವನು ಅರಸನ ರೌದ್ರಕ್ಕೆ ಭಯಪಡದೆ ಐಗುಪ್ತದೇಶವನ್ನು ಬಿಟ್ಟುಹೋದದ್ದು ನಂಬಿಕೆಯಿಂದಲೇ. ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನೋ ಎಂಬಂತೆ ದೃಢಚಿತ್ತನಾಗಿದ್ದನು.


ನಾನಾದರೋ ಯೆಹೋವನ ಆತ್ಮಾವೇಶದಿಂದ ಬಲಪರಾಕ್ರಮನ್ಯಾಯಭರಿತನಾಗಿ ಯಾಕೋಬಿಗೆ ಅದರ ದ್ರೋಹವನ್ನು ಇಸ್ರಾಯೇಲಿಗೆ ಅದರ ಪಾಪವನ್ನು ಸಾರಲು ಶಕ್ತನಾಗಿದ್ದೇನೆ.


ನಾನು ನಿನ್ನನ್ನು ಈ ಜನರಿಗೆ ದುರ್ಗಮವಾದ ತಾಮ್ರದ ಪೌಳಿಗೋಡೆಯನ್ನಾಗಿ ಮಾಡುವೆನು; ಅವರು ನಿನಗೆ ವಿರುದ್ಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಸೋಲಿಸಲಾಗುವದಿಲ್ಲ. ನಿನ್ನನ್ನು ಉದ್ಧರಿಸಿ ರಕ್ಷಿಸಲು ನಾನೇ ನಿನ್ನೊಂದಿಗಿರುವೆನು. ಇದು ಯೆಹೋವನಾದ ನನ್ನ ಮಾತು.


ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು; ಆದಕಾರಣ ನಾನು ನಾಚಿಕೆಯಿಂದ ಕೊರಗಲಿಲ್ಲ; ನನ್ನ ಮುಖವನ್ನು ಕಗ್ಗಲ್ಲಿನಂತೆ ಗಟ್ಟಿಮಾಡಿಕೊಂಡಿದ್ದೇನೆ; ಆಶಾಭಂಗಪಡಲಾರೆನೆಂದು ನನಗೆ ಗೊತ್ತು.


ಅಹಾಬನು ಎಲೀಯನನ್ನು ಕಂಡು ಅವನನ್ನು - ನನ್ನ ವೈರಿಯೇ, ನೀನು ನನ್ನನ್ನು ಕಂಡುಕೊಂಡಿಯಾ ಎಂದು ಕೇಳಲು ಅವನು - ಹೌದು, ಕಂಡುಕೊಂಡೆನು; ನೀನು ನಿನ್ನನ್ನು ಪಾಪಕ್ಕೆ ಮಾರಿಬಿಟ್ಟು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದಿಯಲ್ಲಾ.


ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ಪಶ್ಚಾತ್ತಾಪಪಡಲಿಲ್ಲ, ಸಂಹರಿಸಿದರೂ ಶಿಕ್ಷಣಕ್ಕೆ ಒಪ್ಪಲಿಲ್ಲ; ತಮ್ಮ ಮುಖವನ್ನು ಕಲ್ಲಿಗಿಂತ ಕಠಿಣಮಾಡಿಕೊಂಡು ತಿರುಗಿಕೊಳ್ಳಲೊಲ್ಲದೆ ಹೋಗಿದ್ದಾರೆ.


ಇಸ್ರಾಯೇಲ್ ವಂಶದವರೋ ನಿನಗೆ ಕಿವಿಗೊಡಲೊಲ್ಲರು; ನನಗೂ ಕಿವಿಗೊಡಲೊಲ್ಲರು; ಅವರೆಲ್ಲರೂ ನಾಚಿಕೆಗೆಟ್ಟವರೂ ಹಟಗಾರರೂ ಆಗಿದ್ದಾರಲ್ಲಾ.


ನಿನ್ನ ಹಣೆಯನ್ನು ಕಗ್ಗಲ್ಲಿಗಿಂತ ಕಠಿನವಾದ ವಜ್ರದಷ್ಟು ಕಠಿನಪಡಿಸಿದ್ದೇನೆ; ಅವರು ದ್ರೋಹಿವಂಶದವರು, ಅವರಿಗೆ ಭಯಪಡಬೇಡ; ಅವರ ಬಿರುನೋಟಕ್ಕೆ ಬೆಚ್ಚದಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು