Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 30:10 - ಕನ್ನಡ ಸತ್ಯವೇದವು J.V. (BSI)

10 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಿಂದ ಐಗುಪ್ತದ ಅಸಂಖ್ಯಾತಪ್ರಜೆಯನ್ನು ಕೊನೆಗಾಣಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಿಂದ ಐಗುಪ್ತದ ಅಸಂಖ್ಯಾತ ಪ್ರಜೆಯನ್ನು ಕೊನೆಗಾಣಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನಾನು ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಕೈಯಿಂದ ಈಜಿಪ್ಟಿನ ಅಸಂಖ್ಯಾತ ಪ್ರಜೆಯನ್ನು ಕೊನೆಗಾಣಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ; “ಈಜಿಪ್ಟಿನ ಜನರನ್ನು ನಾಶಮಾಡುವುದಕ್ಕಾಗಿ ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಉಪಯೋಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ : “ ‘ನಾನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಿಂದ ಈಜಿಪ್ಟಿನ ಜನಸಮೂಹವನ್ನು ಕೊನೆಗಾಣಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 30:10
8 ತಿಳಿವುಗಳ ಹೋಲಿಕೆ  

ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತದೇಶವನ್ನು ಕೊಡುವೆನು; ಅವನು ಅದರ ಜನ ಯಾವತ್ತನ್ನು ಒಯ್ದು ಆ ದೇಶವನ್ನು ಸೂರೆಮಾಡಿ ಕೊಳ್ಳೆಹೊಡೆಯುವನು; ಅದೇ ಅವನ ಸೈನ್ಯಕ್ಕೆ ಸಂಬಳ.


ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನಿಗೂ ಅವನ ಅಸಂಖ್ಯಾತವಾದ ಪ್ರಜೆಗೂ ಹೀಗೆ ನುಡಿ - ದೊಡ್ಡಸ್ತಿಕೆಯಲ್ಲಿ ನಿನಗೆ ಸರಿಸಮಾನರು ಯಾರು?


ನಾನು ಅದನ್ನು ಜನಾಂಗಗಳಲ್ಲಿ ಮಹಾಬಲಿಷ್ಠನಾದವನ ಕೈಗೆ ಕೊಟ್ಟುಬಿಟ್ಟಿದ್ದೇನೆ. ಅವನು ಅದರ ಕೆಟ್ಟತನಕ್ಕೆ ತಕ್ಕಂತೆ ಅದನ್ನು ದಂಡಿಸೇ ದಂಡಿಸುವನು; ನಾನು ಅದನ್ನು ತಳ್ಳಿಹಾಕಿದೆನು.


ಅವನು ಬಂದು ಐಗುಪ್ತದೇಶವನ್ನು ಹೊಡೆಯುವನು; ಮರಣಕ್ಕೆ ಗೊತ್ತಾದವರು ಮರಣಕ್ಕೆ, ಸೆರೆಗೆ ಗೊತ್ತಾದವರು ಸೆರೆಗೆ, ಖಡ್ಗಕ್ಕೆ ಗೊತ್ತಾದವರು ಖಡ್ಗಕ್ಕೆ ಗುರಿಯಾಗುವರು.


ನಾನು ನಿನ್ನ ಮೇಲೆ ಅತಿ ಭಯಂಕರ ಜನಾಂಗದವರಾದ ಮ್ಲೇಚ್ಫರನ್ನು ಬೀಳಮಾಡುವೆನು; ಅವರು ನಿನ್ನ ಜ್ಞಾನದ ಸೊಬಗಿನ ಮೇಲೆ ಕತ್ತಿಹಿರಿದು ನಿನ್ನ ಹೊಳಪನ್ನು ಹೊಲಸುಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು