Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 30:11 - ಕನ್ನಡ ಸತ್ಯವೇದವು J.V. (BSI)

11 ಆ ದೇಶವನ್ನು ನಾಶಪಡಿಸಲಿಕ್ಕೆ ಅವನನ್ನು ಅತಿಭಯಂಕರ ಜನಾಂಗದವರಾದ ಅವನ ಸೈನಿಕರೊಡನೆ ಬರಮಾಡುವೆನು; ಅವರು ಐಗುಪ್ತದ ಮೇಲೆ ಕತ್ತಿಹಿರಿದು ದೇಶವನ್ನು ಹತರಾದವರಿಂದ ತುಂಬಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ದೇಶವನ್ನು ನಾಶಪಡಿಸಲಿಕ್ಕೆ ಅವನನ್ನು ಅತಿಭಯಂಕರ ಜನಾಂಗದವರಾದ ಅವನ ಸೈನಿಕರೊಡನೆ ಬರಮಾಡುವೆನು; ಅವರು ಐಗುಪ್ತದ ಮೇಲೆ ಕತ್ತಿ ಹಿರಿದು ದೇಶವನ್ನು ಹತರಾದವರಿಂದ ತುಂಬಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆ ದೇಶವನ್ನು ನಾಶಪಡಿಸಲು ಅವನನ್ನು ಅತಿಭಯಂಕರ ಜನಾಂಗದವರಾದ ಅವನ ಸೈನಿಕರೊಡನೆ ಬರಮಾಡುವೆನು; ಅವರು ಈಜಿಪ್ಟಿನ ಮೇಲೆ ಕತ್ತಿ ಹಿರಿದು ದೇಶವನ್ನು ಹತರಾದವರಿಂದ ತುಂಬಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಎಲ್ಲಾ ಜನಾಂಗಗಳಿಗಿಂತ ನೆಬೂಕದ್ನೆಚ್ಚರನು ಮತ್ತು ಅವನ ಸಿಪಾಯಿಗಳು ಅತ್ಯಂತ ಕ್ರೂರಿಗಳು. ಈಜಿಪ್ಟನ್ನು ನಾಶಮಾಡಲು ಅವರನ್ನು ಕರೆಹಿಸುವೆನು. ಅವರು ತಮ್ಮ ಖಡ್ಗಗಳನ್ನು ಒರೆಯಿಂದ ತೆಗೆದು ಈಜಿಪ್ಟಿಗೆ ವಿರುದ್ಧವಾಗಿ ಉಪಯೋಗಿಸುವರು ಮತ್ತು ದೇಶವನ್ನು ಸತ್ತ ಹೆಣಗಳಿಂದ ತುಂಬಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆ ದೇಶವನ್ನು ನಾಶಪಡಿಸುವುದಕ್ಕೆ ಅವನನ್ನು ಅತಿಭಯಂಕರ ಜನಾಂಗದವರಾದ ಅವನ ಸೈನಿಕರೊಡನೆ ಬರಮಾಡುವೆನು. ಅವರು ಈಜಿಪ್ಟಿಗೆ ವಿರೋಧವಾಗಿ ಖಡ್ಗ ಹಿರಿದು ದೇಶವನ್ನು ಹತರಾದವರಿಂದ ತುಂಬಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 30:11
14 ತಿಳಿವುಗಳ ಹೋಲಿಕೆ  

ನಾನು ನಿನ್ನ ಮೇಲೆ ಅತಿ ಭಯಂಕರ ಜನಾಂಗದವರಾದ ಮ್ಲೇಚ್ಫರನ್ನು ಬೀಳಮಾಡುವೆನು; ಅವರು ನಿನ್ನ ಜ್ಞಾನದ ಸೊಬಗಿನ ಮೇಲೆ ಕತ್ತಿಹಿರಿದು ನಿನ್ನ ಹೊಳಪನ್ನು ಹೊಲಸುಮಾಡುವರು.


ನೀನೂ ನಿನ್ನ ಎಲ್ಲಾ ಗುವ್ಮಿುಗಳೂ ನಿನ್ನೊಂದಿಗಿರುವ ಜನಾಂಗಗಳೂ ಇಸ್ರಾಯೇಲಿನ ಪರ್ವತಗಳಲ್ಲಿ ಬಿದ್ದುಬಿಡುವಿರಿ; ನಾನು ನಿಮ್ಮನ್ನು ಮಾಂಸತಿನ್ನುವ ಬಗೆಬಗೆಯ ಹಕ್ಕಿಗಳಿಗೂ ಭೂಜಂತುಗಳಿಗೂ ಆಹಾರ ಮಾಡುವೆನು;


ನಿನ್ನ ಪರ್ವತಗಳನ್ನು ನಿನ್ನವರ ಶವಗಳಿಂದ ತುಂಬಿಸುವೆನು; ಖಡ್ಗಹತರು ನಿನ್ನ ಗುಡ್ಡ ತಗ್ಗು ತೊರೆಗಳಲ್ಲಿ ಬಿದ್ದುಹೋಗುವರು.


ನಾನು ನಿನ್ನ ಬಹುಪ್ರಜೆಯನ್ನು ಅತಿಭಯಂಕರ ಜನಾಂಗದವರಾದ ಬಲಿಷ್ಠರ ಕತ್ತಿಗಳಿಂದ ಸಂಹರಿಸುವೆನು; ಐಗುಪ್ತವು ಹೆಚ್ಚಳಪಡುವ ವಸ್ತುಗಳನ್ನು ಅವರು ಸೂರೆಮಾಡುವರು; ಅದರ ಜನ ಯಾವತ್ತೂ ನಿರ್ನಾಮವಾಗುವದು.


ಅತಿಭಯಂಕರ ಜನಾಂಗದವರಾದ ಮ್ಲೇಚ್ಫರು ಅದನ್ನು ಕಡಿದುಹಾಕಿ ಹೋಗಿಬಿಟ್ಟಿದ್ದಾರೆ; ಅದರ ರೆಂಬೆಗಳು ಗುಡ್ಡಗಳಲ್ಲಿಯೂ ಎಲ್ಲಾ ಹಳ್ಳಕೊಳ್ಳಗಳಲ್ಲಿಯೂ ಬಿದ್ದಿವೆ; ಅದರ ಕೊಂಬೆಗಳು ದೇಶದ ಎಲ್ಲಾ ತೊರೆಗಳ ಹತ್ತಿರ ಮುರಿದುಹಾಕಲ್ಪಟ್ಟಿವೆ; ಲೋಕದ ಸಮಸ್ತಜನಾಂಗಗಳು ಅದರ ನೆರಳಿನಿಂದ ತೊಲಗಿ ಅದನ್ನು ಬಿಟ್ಟುಹೋಗಿವೆ.


ಆ ಜನಾಂಗದವರು ಕ್ರೂರಮುಖವುಳ್ಳವರಾಗಿ ನಿಮ್ಮನ್ನು ವೃದ್ಧರೆಂದು ಮರ್ಯಾದೆ ತೋರಿಸುವದಿಲ್ಲ, ಚಿಕ್ಕವರೆಂದು ಕನಿಕರಿಸುವದಿಲ್ಲ.


ನಾನು ಬಾಬೆಲಿನ ಅರಸನ ಕೈಗಳನ್ನು ಬಲಪಡಿಸಿ ನನ್ನ ಖಡ್ಗವನ್ನು ಅವನ ಕೈಗೆ ಕೊಟ್ಟು ಫರೋಹನ ಕೈಗಳನ್ನು ಮುರಿಸಲು ಗಾಯದಿಂದ ಪ್ರಾಣಸಂಕಟಪಡುವವನಂತೆ ಫರೋಹನು ಆ ಅರಸನ ಮುಂದೆ ನರಳಾಡುವನು.


ನಾನು ಅದನ್ನು ಜನಾಂಗಗಳಲ್ಲಿ ಮಹಾಬಲಿಷ್ಠನಾದವನ ಕೈಗೆ ಕೊಟ್ಟುಬಿಟ್ಟಿದ್ದೇನೆ. ಅವನು ಅದರ ಕೆಟ್ಟತನಕ್ಕೆ ತಕ್ಕಂತೆ ಅದನ್ನು ದಂಡಿಸೇ ದಂಡಿಸುವನು; ನಾನು ಅದನ್ನು ತಳ್ಳಿಹಾಕಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು