ಯೆಹೆಜ್ಕೇಲನು 30:13 - ಕನ್ನಡ ಸತ್ಯವೇದವು J.V. (BSI)13 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ನೋಫಿನ ಬೊಂಬೆಗಿಂಬೆಗಳನ್ನೆಲ್ಲ ಒಡೆದು ಕೊನೆಗಾಣಿಸುವೆನು; ಐಗುಪ್ತದೇಶದಲ್ಲಿ ಇನ್ನು ಯಾವ ಪ್ರಭುವೂ ಇರನು; ನಾನು ಆ ದೇಶಕ್ಕೆ ಭಯವನ್ನೊಡ್ಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನೋಫಿನ ವಿಗ್ರಹಗಳನ್ನೆಲ್ಲ ಒಡೆದು ಕೊನೆಗಾಣಿಸುವೆನು; ಐಗುಪ್ತ ದೇಶದಲ್ಲಿ ಇನ್ನು ಯಾವ ಅರಸನೂ ಇರಲಾರನು; ನಾನು ಆ ದೇಶಕ್ಕೆ ಭಯವನ್ನು ಉಂಟುಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನಾನು ಮೆಂಫೀಸ್‍ನ ವಿಗ್ರಹಗಳನ್ನೆಲ್ಲ ಒಡೆದು, ಕೊನೆಗಾಣಿಸುವೆನು; ಈಜಿಪ್ಟ್ ದೇಶದಲ್ಲಿ ಇನ್ನು ಯಾವ ಪ್ರಭುವೂ ಇರನು; ನಾನು ಆ ದೇಶಕ್ಕೆ ಭಯವನ್ನೊಡ್ಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಈಜಿಪ್ಟಿನಲ್ಲಿರುವ ವಿಗ್ರಹಗಳನ್ನು ನಾನು ನಾಶಮಾಡುವೆನು. ಮೆಂಫೀಸಿನ ವಿಗ್ರಹಗಳನ್ನು ತೆಗೆದುಬಿಡುವೆನು. ಈಜಿಪ್ಟಿನಲ್ಲಿ ಇನ್ನು ಮುಂದೆ ರಾಜನಿರನು. ಅವರಲ್ಲಿ ಭಯವನ್ನು ಹುಟ್ಟಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನಾನು ಮೂರ್ತಿಗಳನ್ನು ನಾಶಮಾಡುವೆನು. ಮತ್ತು ನೋಫಿನ ವಿಗ್ರಹಗಳನ್ನು ಕೊನೆಗೊಳಿಸುವೆನು. ಈಜಿಪ್ಟ್ ದೇಶದ ರಾಜಕುಮಾರ ಇನ್ನು ಮುಂದೆ ಇರುವುದಿಲ್ಲ, ನಾನು ಈಜಿಪ್ಟ್ ದೇಶದಲ್ಲಿ ಭಯವನ್ನು ಉಂಟುಮಾಡುವೆನು. ಅಧ್ಯಾಯವನ್ನು ನೋಡಿ |