Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 30:16 - ಕನ್ನಡ ಸತ್ಯವೇದವು J.V. (BSI)

16 ನಾನು ಐಗುಪ್ತಕ್ಕೆ ಕಿಚ್ಚನ್ನು ಹತ್ತಿಸಲು ಸೀನು ಪ್ರಾಣಸಂಕಟಪಡುವದು; ನೋಪುರವು ಭಂಗಕ್ಕೆ ಈಡಾಗುವದು; ನೋಫಿನ ಮೇಲೆ ವೈರಿಗಳು ಮಧ್ಯಾಹ್ನದಲ್ಲೇ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ಐಗುಪ್ತಕ್ಕೆ ಕಿಚ್ಚನ್ನು ಹತ್ತಿಸಲು ಸೀನು ಪ್ರಾಣ ಸಂಕಟಪಡುವುದು; ನೋಪುರವು ಭಂಗಕ್ಕೆ ಈಡಾಗುವುದು; ನೋಫಿನ ಮೇಲೆ ವೈರಿಗಳು ಮಧ್ಯಾಹ್ನದಲ್ಲೇ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಾನು ಈಜಿಪ್ಟಿಗೆ ಕಿಚ್ಚನ್ನು ಹತ್ತಿಸಲು ಪೆಲೂಸಿಯಮ್ ಪ್ರಾಣಸಂಕಟ ಪಡುವುದು; ತೆಬೆಸ್ ಭಂಗಕ್ಕೆ ಈಡಾಗುವುದು; ಮೆಂಫೀಸ್ ಮೇಲೆ ವೈರಿಗಳು ಮಧ್ಯಾಹ್ನದಲ್ಲೇ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಈಜಿಪ್ಟಿನಲ್ಲಿ ಬೆಂಕಿಯನ್ನು ಬರಮಾಡುವೆನು. ಸೀನ್ ನಗರವು ಭಯದಿಂದ ಕಂಗೆಡುವದು. ಸೈನಿಕರು ತೆಬೆಸವನ್ನು ಧಾಳಿ ಮಾಡುವರು. ತೆಬೆಸದಲ್ಲಿ ಪ್ರತಿದಿವಸವೂ ಸಂಕಟವಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಾನು ಈಜಿಪ್ಟಿಗೆ ಕಿಚ್ಚನ್ನು ಹಚ್ಚಿಸಲು ಪೆಲೂಸಿಯಮ್ ಪ್ರಾಣಸಂಕಟ ಪಡುವುದು. ತೆಬೆಸವು ಬಿರುಗಾಳಿಯಿಂದ ತೆಗೆದುಕೊಳ್ಳಲಾಗುವುದು, ನೋಫಿನ ಮೇಲೆ ನಿರಂತರವಾಗಿ ಇಕ್ಕಟ್ಟು ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 30:16
9 ತಿಳಿವುಗಳ ಹೋಲಿಕೆ  

ನಿನ್ನ ಅಪಾರವಾದ ಅಪರಾಧಗಳಿಂದಲೂ ಅನ್ಯಾಯವಾದ ವ್ಯಾಪಾರದಿಂದಲೂ ನಿನ್ನಲ್ಲಿನ ಪವಿತ್ರಾಲಯಗಳನ್ನು ಹೊಲಸುಮಾಡಿದಿ; ಆದಕಾರಣ ನಾನು ನಿನ್ನೊಳಗಿಂದ ಬೆಂಕಿಯನ್ನು ಬರಮಾಡಿದೆನು, ಅದು ನಿನ್ನನ್ನು ನುಂಗಿತು, ನೋಡುವವರೆಲ್ಲರ ಕಣ್ಣೆದುರಿಗೆ ನಿನ್ನನ್ನು ಬೂದಿಮಾಡಿಬಿಟ್ಟೆನು;


ಐಗುಪ್ತದೇಶದ ವಿುಗ್ದೋಲ್, ತಹಪನೇಸ್, ನೋಫ್ ಎಂಬ ಪಟ್ಟಣಗಳಲ್ಲಿಯೂ ಪತ್ರೋಸ್ ಪ್ರಾಂತದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ -


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ನೋಫಿನ ಬೊಂಬೆಗಿಂಬೆಗಳನ್ನೆಲ್ಲ ಒಡೆದು ಕೊನೆಗಾಣಿಸುವೆನು; ಐಗುಪ್ತದೇಶದಲ್ಲಿ ಇನ್ನು ಯಾವ ಪ್ರಭುವೂ ಇರನು; ನಾನು ಆ ದೇಶಕ್ಕೆ ಭಯವನ್ನೊಡ್ಡುವೆನು.


ನಾನು ಪತ್ರೋಸನ್ನು ಹಾಳುಮಾಡಿ ಚೋವನಿಗೆ ಬೆಂಕಿಯಿಕ್ಕಿ ನೋಪುರವನ್ನು ದಂಡಿಸಿ


ಐಗುಪ್ತಕ್ಕೆ ರಕ್ಷಣೆಯ ಕೋಟೆಯಾದ ಸೀನಿನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ ನೋಪುರದ ನಿವಾಸಿಗಳನ್ನೆಲ್ಲಾ ಕತ್ತರಿಸಿಬಿಡುವೆನು.


ಓನಿನ ಮತ್ತು ಪೀಬೆಸೆತಿನ ಯುವಕರು ಖಡ್ಗದಿಂದ ಹತರಾಗುವರು; ಅಲ್ಲಿನ ನಿವಾಸಿಗಳು ಸೆರೆಯಾಗಿ ಹೋಗುವರು.


ನಾನು ಮಾಗೋಗ್ ದೇಶದ ಮೇಲೂ ಕರಾವಳಿಯ ಸೀಮೆಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೂ ಬೆಂಕಿಯನ್ನು ಕಳುಹಿಸುವೆನು; ಆಗ ನಾನೇ ಯೆಹೋವನು ಎಂದು ಅವರಿಗೆ ನಿಶ್ಚಿತವಾಗುವದು.


ಆಹಾ, ಅವರು ಹಾಳಾದ ದೇಶವನ್ನು ಬಿಟ್ಟುಹೋಗುವರು; ಐಗುಪ್ತವು ಅವರಿಗೆ ಶ್ಮಶಾನವಾಗುವದು, ಮೋಫ್ ಪಟ್ಟಣವು ಅವರನ್ನು ಹೂಣಿಡುವದು; ಅವರ ಇಷ್ಟದ ಬೆಳ್ಳಿಯ ಒಡವೆಗಳು ದಬ್ಬೆಗಳ್ಳಿಗಳ ಪಾಲಾಗುವವು; ಮುಳ್ಳುಗಿಡಗಳು ಅವರ ಗುಡಾರಗಳಲ್ಲಿ ಹುಟ್ಟಿಕೊಳ್ಳುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು