Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 30:22 - ಕನ್ನಡ ಸತ್ಯವೇದವು J.V. (BSI)

22 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಐಗುಪ್ತದ ಅರಸನಾದ ಫರೋಹನಿಗೆ ವಿರುದ್ಧನಾಗಿ ಅವನ ಕೈಗಳನ್ನು, ಅಂದರೆ ಸರಿಯಾಗಿರುವದನ್ನೂ, ಮುರಿದದನ್ನೂ ತೀರಾ ಮುರಿದುಬಿಟ್ಟು ಖಡ್ಗವು ಅವನ ಕೈಯೊಳಗಿಂದ ಬೀಳುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದುದರಿಂದ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಐಗುಪ್ತದ ಅರಸನಾದ ಫರೋಹನಿಗೆ ವಿರುದ್ಧವಾಗಿ ಅವನ ಕೈಗಳನ್ನು, ಅಂದರೆ ಸರಿಯಾಗಿರುವುದನ್ನೂ, ಮುರಿದದ್ದನ್ನೂ ತೀರಾ ಮುರಿದು ಬಿಟ್ಟು, ಖಡ್ಗವು ಅವನ ಕೈಯೊಳಗಿಂದ ಬೀಳುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾನು ಈಜಿಪ್ಟಿನ ಅರಸ ಫರೋಹನಿಗೆ ವಿರುದ್ಧನಾಗಿ ಅವನ ಕೈಗಳನ್ನು, ಅಂದರೆ ಸರಿಯಾಗಿ ಇರುವುದನ್ನೂ, ಮುರಿದದ್ದನ್ನೂ ಪೂರ್ತಿಯಾಗಿ ಮುರಿದುಬಿಟ್ಟು, ಖಡ್ಗವು ಅವನ ಕೈಯೊಳಗಿನಿಂದ ಬೀಳುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ, “ನಾನು ಈಜಿಪ್ಟಿನ ರಾಜನಾದ ಫರೋಹನಿಗೆ ವಿರುದ್ಧವಾಗಿದ್ದೇನೆ. ಅವನ ಎರಡು ಕೈಗಳನ್ನೂ ಮುರಿಯುವೆನು. ಒಂದು ಕೈ ಮುರಿಯಲ್ಪಟ್ಟಿತ್ತು. ಇನ್ನೊಂದು ಸರಿಯಾಗಿದ್ದ ಕೈಯೂ ಮುರಿಯಲ್ಪಡುವದು. ಅವನ ಕೈಯಿಂದ ಖಡ್ಗವು ಬೀಳುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಇಗೋ, ನಾನು ಈಜಿಪ್ಟ್ ದೇಶದ ಅರಸನಾದ ಫರೋಹನಿಗೆ ವಿರುದ್ಧವಾಗಿದ್ದೇನೆ. ಬಲವುಳ್ಳದ್ದೂ ಮುರಿದದ್ದೂ ಆಗಿರುವ ಅವನ ತೋಳುಗಳನ್ನು ಮುರಿಯುತ್ತೇನೆ. ಅವನ ಕೈಯಿಂದ ಖಡ್ಗವನ್ನು ಬೀಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 30:22
8 ತಿಳಿವುಗಳ ಹೋಲಿಕೆ  

ದುಷ್ಟರ ತೋಳುಗಳು ಮುರಿದುಹೋಗುವವು; ನೀತಿವಂತರನ್ನು ಯೆಹೋವನೇ ಉದ್ಧರಿಸುವನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಐಗುಪ್ತದ ಅರಸನಾದ ಫರೋಹನೇ, ನಿನ್ನ ನದೀ ಶಾಖೆಗಳ ನಡುವೆ ಒರಗಿಕೊಂಡು - ಈ ನದಿಯು ನನ್ನದೇ, ನನಗಾಗಿಯೇ ಮಾಡಿಕೊಂಡದು ಅಂದುಕೊಳ್ಳುವ ಪೇರ್ಮೊಸಳೆಯೇ, ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ.


ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ನನ್ನನ್ನು ವಿಚಾರಿಸುವದಕ್ಕೆ ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದ ಯೆಹೂದದ ಅರಸನಿಗೆ ಹೀಗೆ ಹೇಳಿರಿ - ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶವಾದ ಐಗುಪ್ತಕ್ಕೆ ಹಿಂದಿರುಗುವದು.


ಬಾಬೆಲಿನ ಅರಸನು ಐಗುಪ್ತದ ಹಳ್ಳಕ್ಕೂ ಯೂಫ್ರೇಟೀಸ್ ನದಿಗೂ ಮಧ್ಯದಲಿದ್ದ ಐಗುಪ್ತ ರಾಜನ ಎಲ್ಲಾ ದೇಶವನ್ನು ಸ್ವಾಧೀನಮಾಡಿಕೊಂಡನು. ಅಂದಿನಿಂದ ಐಗುಪ್ತದ ಅರಸನು ತನ್ನ ದೇಶದಿಂದ ಈಚೆಗೆ ಬರಲೇ ಇಲ್ಲ.


ತಪ್ಪಿಸಿಕೊಂಡದ್ದನ್ನು ಹುಡುಕುವೆನು, ಓಡಿಸಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದದ್ದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿದ ಕುರಿಗಳನ್ನೋ ಧ್ವಂಸಮಾಡುವೆನು; ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.


ಮಂದೆಯನ್ನು ಕಾಯದೆ ಬಿಟ್ಟುಬಿಟ್ಟ ತರವಲ್ಲದ ಕುರುಬನ ಗತಿಯನ್ನು ಏನುಹೇಳಲಿ! ಖಡ್ಗವು ಅವನ ತೋಳಿಗೂ ಬಲಗಣ್ಣಿಗೂ ತಾಕುವದು; ಅವನ ತೋಳು ತೀರಾ ಒಣಗಿಹೋಗುವದು, ಅವನ ಬಲಗಣ್ಣು ಪೂರಾ ಮೊಬ್ಬಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು