Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 30:25 - ಕನ್ನಡ ಸತ್ಯವೇದವು J.V. (BSI)

25 ನಾನು ಬಾಬೆಲಿನ ಅರಸನ ಕೈಗಳನ್ನು ಬಲಪಡಿಸುವೆನು; ಫರೋಹನ ಕೈಗಳಾದರೋ ಜೋಲುಬೀಳುವವು; ನಾನು ನನ್ನ ಖಡ್ಗವನ್ನು ಬಾಬೆಲಿನ ಅರಸನಿಗೆ ಕೊಡಲು ಅವನು ಅದನ್ನು ಐಗುಪ್ತದೇಶದ ಮೇಲೆ ಎತ್ತುವನು. ಆಗ ನಾನೇ ಯೆಹೋವನು ಎಂದು ಎಲ್ಲರಿಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಾನು ಬಾಬೆಲಿನ ಅರಸನ ಕೈಗಳನ್ನು ಬಲಪಡಿಸುವೆನು; ಫರೋಹನ ಕೈಗಳಾದರೋ ಜೋಲುಬೀಳುವವು; ನಾನು ನನ್ನ ಖಡ್ಗವನ್ನು ಬಾಬೆಲಿನ ಅರಸನಿಗೆ ಕೊಡಲು ಅವನು ಅದನ್ನು ಐಗುಪ್ತ ದೇಶದ ಮೇಲೆ ಎತ್ತುವನು. ಆಗ ನಾನೇ ಯೆಹೋವನು” ಎಂದು ಎಲ್ಲರಿಗೂ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನಾನು ಬಾಬಿಲೋನಿನ ಅರಸನ ಕೈಗಳನ್ನು ಬಲಪಡಿಸುವೆನು; ಫರೋಹನ ಕೈಗಳಾದರೋ ಜೋಲುಬೀಳುವುವು; ನಾನು ನನ್ನ ಖಡ್ಗವನ್ನು ಬಾಬಿಲೋನಿನ ಅರಸನಿಗೆ ಎತ್ತುವೆನು. ಅವನು ಅದನ್ನು ಈಜಿಪ್ಟ್ ದೇಶದ ಮೇಲೆ ಎತ್ತುವನು. ಆಗ ನಾನೇ ಸರ್ವೇಶ್ವರ ಎಂದು ಎಲ್ಲರಿಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಾನು ಬಾಬಿಲೋನಿನ ರಾಜನ ಕೈಗಳನ್ನು ಬಲಪಡಿಸುವೆನು. ಫರೋಹನ ಕೈಗಳು ಜೋಲುಬೀಳುವವು. ಆಗ ಅವರು ನಾನೇ ಯೆಹೋವನೆಂದು ತಿಳಿಯುವರು. “ನನ್ನ ಖಡ್ಗವನ್ನು ನಾನು ಬಾಬಿಲೋನ್ ರಾಜನ ಕೈಗಳಲ್ಲಿ ಇಡುವೆನು. ಆಗ ಅವನು ಈಜಿಪ್ಟಿನ ಕಡೆಗೆ ಅದನ್ನು ಚಾಚುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನಾನು ಬಾಬಿಲೋನಿನ ಅರಸನ ಕೈಗಳನ್ನು ಬಲಪಡಿಸುತ್ತೇನೆ, ಆದರೆ ಫರೋಹನ ಕೈಗಳು ಬಲಹೀನವಾಗುವುವು. ನಾನು ನನ್ನ ಖಡ್ಗವನ್ನು ಬಾಬಿಲೋನಿನ ಅರಸನ ಕೈಗೆ ಕೊಡುವೆನು. ಅವನು ಅದನ್ನು ಈಜಿಪ್ಟಿನ ವಿರೋಧವಾಗಿ ಪ್ರಯೋಗಿಸುವನು. ಆಗ ಅವರು ನಾನೇ ಯೆಹೋವ ದೇವರು ಎಂದು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 30:25
13 ತಿಳಿವುಗಳ ಹೋಲಿಕೆ  

ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ ನನ್ನ ಗೌರವವನ್ನು ಕಾಪಾಡಿಕೊಂಡು ಬಹುಜನಾಂಗಳು ನಾನೇ ಯೆಹೋವನು ಎಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತನಾಗುವೆನು.


ನನ್ನ ಜನರಾದ ಇಸ್ರಾಯೇಲ್ಯರ ಮೇಲೆ ಬಿದ್ದು ಕಾರ್ಮುಗಿಲಿನೋಪಾದಿಯಲ್ಲಿ ದೇಶವನ್ನು ಮುಚ್ಚಿಬಿಡುವಿ; ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶನದಿಂದ ನನ್ನ ಗೌರವವನ್ನು ಕಾಪಾಡಿಕೊಂಡು ನಾನೇ ಯೆಹೋವನೆಂದು ಜನಾಂಗಗಳಿಗೆ ಗೋಚರನಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ದೇಶದ ಮೇಲೆ ಬೀಳಮಾಡುವೆನು.


ಐಗುಪ್ತದಲ್ಲಿ ತುಂಬಿದ್ದ ಸೊತ್ತನ್ನೆಲ್ಲಾ ನಾನು ನೀಗಿಸಿ ಆ ದೇಶವನ್ನು ಹಾಳುಪಾಳುಮಾಡಿ ಅಲ್ಲಿನ ಸಕಲ ನಿವಾಸಿಗಳನ್ನು ಸಂಹರಿಸಿದಾಗ ನಾನೇ ಯೆಹೋವನು ಎಂದು ಗೊತ್ತಾಗುವದು.


ನಾನು ಐಗುಪ್ತ್ಯರನ್ನು ಜನಾಂಗಗಳಲ್ಲಿ ಚದರಿಸಿ ದೇಶದೇಶಗಳಿಗೆ ತೂರಿಬಿಡುವಾಗ ನಾನೇ ಯೆಹೋವನು ಎಂದು ಅವರಿಗೆ ತಿಳಿದುಬರುವದು.


ಹೀಗೆ ನಾನು ಐಗುಪ್ತ್ಯರಿಗೆ ದಂಡನೆಗಳನ್ನು ವಿಧಿಸಿ ತೀರಿಸುವಾಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.


ಆ ದಿನದಲ್ಲಿ ನಾನು ಇಸ್ರಾಯೇಲ್‍ವಂಶಕ್ಕೆ ಕೊಂಬನ್ನು ಮೊಳೆಯಿಸಿ ಆ ವಂಶದವರ ಮಧ್ಯದಲ್ಲಿ ನಿನ್ನ ಬಾಯನ್ನು ಬಿಚ್ಚುವೆನು; ನಾನೇ ಯೆಹೋವನು ಎಂದು ಅವರಿಗೆ ನಿಶ್ಚಯವಾಗುವದು.


ಐಗುಪ್ತವು ಇನ್ನು ಇಸ್ರಾಯೇಲ್ ವಂಶದವರ ಭರವಸವಾಗದು; ಮತ್ತು ಅದರ ಕಡೆಗೆ ಕಣ್ಣೆತ್ತುವ ದೇವದ್ರೋಹದ ನೆನಪು ಇಸ್ರಾಯೇಲ್ಯರಲ್ಲಿ ಐಗುಪ್ತದಿಂದ ಇನ್ನು ಹುಟ್ಟದು. ನಾನೇ ಯೆಹೋವನು ಎಂದು ಅವರಿಗೆ ಮನದಟ್ಟಾಗುವದು.


ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ.


ಯೆಹೋವನು ಯೆಹೋಶುವನಿಗೆ - ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿ ಎಂಬ ಊರಿನ ಕಡೆಗೆ ಚಾಚು; ಆ ಪಟ್ಟಣವನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ ಎನ್ನಲು ಅವನು ಅದನ್ನು ಚಾಚಿದನು.


ದಾವೀದನು ಕಣ್ಣೆತ್ತಿ ನೋಡಿ ಯೆಹೋವನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವದನ್ನೂ ಚಾಚಿದ ಕೈಯಲ್ಲಿ ಯೆರೂಸಲೇವಿುಗೆ ವಿರೋಧವಾಗಿ ಹಿರಿದ ಕತ್ತಿಯಿರುವದನ್ನೂ ಕಂಡಾಗ ಅವನೂ ಹಿರಿಯರೂ ಗೋಣೀತಟ್ಟನ್ನು ಹೊದ್ದುಕೊಂಡವರಾಗಿ ಬೋರ್ಲಬಿದ್ದರು;


ಹೀಗಿರಲು ಯೆಹೋವನು ತನ್ನ ಜನರಲ್ಲಿ ಉರಿಗೊಂಡು ಅವರ ಮೇಲೆ ಕೈಯೆತ್ತಿ ಅವರನ್ನು ಹೊಡೆದು ಬಿಡುವನು; ಆಗ ಬೆಟ್ಟಗಳು ನಡಗುವವು, ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈಯೆತ್ತಿಯೇ ಇರುವದು.


ನಾನು ಬಾಬೆಲಿನ ಅರಸನ ಕೈಗಳನ್ನು ಬಲಪಡಿಸಿ ನನ್ನ ಖಡ್ಗವನ್ನು ಅವನ ಕೈಗೆ ಕೊಟ್ಟು ಫರೋಹನ ಕೈಗಳನ್ನು ಮುರಿಸಲು ಗಾಯದಿಂದ ಪ್ರಾಣಸಂಕಟಪಡುವವನಂತೆ ಫರೋಹನು ಆ ಅರಸನ ಮುಂದೆ ನರಳಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು