Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 30:3 - ಕನ್ನಡ ಸತ್ಯವೇದವು J.V. (BSI)

3 ದಿನವು ಹತ್ತಿರವಾಯಿತು; ಹೌದು, ಯೆಹೋವನ ದಿನ, ಕಾರ್ಮುಗಿಲಿನ ದಿನ ಸಮೀಪಿಸಿತು; ಅದು ಜನಾಂಗಗಳಿಗೆ ನ್ಯಾಯ ತೀರಿಸತಕ್ಕ ಕಾಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದಿನವು ಹತ್ತಿರವಾಯಿತು! ಹೌದು, ಯೆಹೋವನ ದಿನವು, ಕಾರ್ಮುಗಿಲಿನ ದಿನವು ಸಮೀಪಿಸಿತು; ಅದು ಜನಾಂಗಗಳಿಗೆ ನ್ಯಾಯತೀರಿಸುವ ಕಾಲವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಹೌದು, ಸಮೀಪಿಸಿತು ಸರ್ವೇಶ್ವರನ ದಿನ, ಕಾರ್ಮುಗಿಲ ದಿನ ಅದು ರಾಷ್ಟ್ರಗಳಿಗೆ ನ್ಯಾಯತೀರಿಸತಕ್ಕ ಕಾಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆ ದಿನವು ಹತ್ತಿರ ಬಂತು! ಹೌದು, ದೇವರು ನ್ಯಾಯತೀರಿಸುವ ದಿನ ಹತ್ತಿರ ಬಂತು. ಅದು ಮೋಡ ಕವಿದ ದಿನವಾಗಿರುವುದು. ಅದು ಜನಾಂಗಗಳಿಗೆ ನ್ಯಾಯತೀರಿಸುವ ಸಮಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ ಆ ದಿನವು ಸಮೀಪವಾಯಿತು, ಯೆಹೋವ ದೇವರ ದಿನವು, ಆ ಕಾರ್ಮುಗಿಲಿನ ದಿನವು ಸಮೀಪವಾಯಿತು. ಅದೇ ಜನಾಂಗಗಳಿಗೆ ನ್ಯಾಯತೀರಿಸುವ ಕಾಲವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 30:3
35 ತಿಳಿವುಗಳ ಹೋಲಿಕೆ  

ಯೆಹೋವನ ದಿನವು ಸಮಸ್ತ ಜನಾಂಗಗಳಿಗೆ ಸಮೀಪಿಸಿದೆ; ನೀನು ಮಾಡಿದ್ದೇ ನಿನಗಾಗುವದು; ನಿನ್ನ ಕೃತ್ಯವೇ ನಿನ್ನ ತಲೆಗೆ ಬರುವದು.


ಮಂದೆಯ ಕುರುಬನು ಸುತ್ತುಮುತ್ತಲು ಚದರಿಹೋದ ತನ್ನ ಕುರಿಗಳನ್ನು ಹುಡುಕುವ ಹಾಗೆ ನಾನು ನನ್ನ ಕುರಿಗಳನ್ನು ಹುಡುಕುವೆನು; ಕಾರ್ಮುಗಿಲಿನ ದುರ್ದಿನದಲ್ಲಿ ಚೆಲ್ಲಾಪಿಲ್ಲಿಯಾದ ಎಲ್ಲಾ ಸ್ಥಳಗಳಿಂದ ಅವುಗಳನ್ನು ಬಿಡಿಸಿ


ಐಗುಪ್ತವು ಹೊರಿಸಿದ ನೊಗಗಳನ್ನು ನಾನು ತಹಪನೇಸಿನಲ್ಲಿ ಮುರಿಯುವಾಗ ಅಲ್ಲಿ ಹೊತ್ತು ಮೂಡದು, ಅದರ ಶಕ್ತಿಮದವು ಅಡಗಿಹೋಗುವದು, ಕಾರ್ಮುಗಿಲು ಅದನ್ನು ಆವರಿಸುವದು, ಅದರ ಯುವತಿಯರು ಸೆರೆಗೆ ಒಯ್ಯಲ್ಪಡುವರು.


ಸಮಯ ಬಂತು, ದಿನ ಹತ್ತರಿಸಿತು; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.


ದೇಶನಿವಾಸಿಯೇ, ನಿನ್ನ ಗತಿ ಆಯಿತು. ಸಮಯ ಬಂತು, ದಿನ ಹತ್ತರಿಸಿತು; ಬೆಟ್ಟಗಳ ಮೇಲೆ ಕೇಳಿಸುವ ಧ್ವನಿಯು ಉತ್ಸಾಹ ಧ್ವನಿಯಲ್ಲ, ಕಳಕಳವೇ.


ಯೆಹೋವನ ಮಹಾದಿನವು ಹತ್ತಿರವಾಯಿತು, ಸಮೀಪಿಸಿತು, ಬಹು ತ್ವರೆಯಾಗಿ ಬರುತ್ತಿದೆ; ಆಹಾ, ಕಿವಿಗೊಡಿರಿ, ಯೆಹೋವನ ದಿನವೇ ಬಂದಿತು; ಇಗೋ, ಅಲ್ಲಿ ಒಬ್ಬ ಶೂರನು ಘೋರವಾಗಿ ಗೋಳಾಡುತ್ತಿದ್ದಾನೆ!


ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ; ಯೆಹೋವನ ದಿನವು ಸಮೀಪಿಸಿತು; ಯೆಹೋವನು ಯಜ್ಞದ ಔತಣವನ್ನು ಸಿದ್ಧಪಡಿಸಿದ್ದಾನೆ, ಕರೆದವರನ್ನು ಮಡಿಮಾಡಿದ್ದಾನೆ.


ಯೆಹೋವನ ದಿನವು ಸಮೀಪಿಸಿತು; ಅಯ್ಯೋ, ದಿನವೇ! ಅದು ಸರ್ವಶಕ್ತನಿಂದ ನಾಶನದಿನವಾಗಿಯೇ ಬರುವದು.


[ಫರೋಹನೇ,] ನಾನು ನಿನ್ನ ಬೆಳಕನ್ನು ನಂದಿಸುವಾಗ ಆಕಾಶಕ್ಕೆ ಮುಸುಕುಹಾಕಿ ಅಲ್ಲಿನ ನಕ್ಷತ್ರಗಳನ್ನು ಮಂಕುಮಾಡಿ ಸೂರ್ಯನನ್ನು ಮೋಡದಿಂದ ಮುಚ್ಚಿಬಿಡುವೆನು, ಚಂದ್ರನೂ ಪ್ರಕಾಶಿಸನು.


ಅವರ ಕೋಪವು ಕಾಣಿಸುವ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.


ಸಹೋದರರೇ, ನೀವು ಒಬ್ಬರಮೇಲೊಬ್ಬರು ಗುಣಗುಟ್ಟಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಹತ್ತಿರದಲ್ಲೇ ನಿಂತಿದ್ದಾನೆ.


ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ; ಕರ್ತನು ಹತ್ತಿರವಾಗಿದ್ದಾನೆ.


ಹಾಗೆಯೇ ನೀವು ಸಹ ಇದನ್ನೆಲ್ಲಾ ನೋಡುವಾಗ ಆ ದಿನವು ಹತ್ತರವದೆ, ಬಾಗಿಲಲ್ಲೇ ಅದೆ ಎಂದು ತಿಳುಕೊಳ್ಳಿರಿ.


ಹಾಳುಬಿದ್ದಿರುವ ದೇಶಗಳೊಳಗೆ ಐಗುಪ್ತದೇಶವನ್ನೂ ಹಾಳುಬೀಳಿಸುವೆನು; ಪಾಳುಬಿದ್ದಿರುವ ಪಟ್ಟಣಗಳೊಳಗೆ ಅದರ ಪಟ್ಟಣಗಳನ್ನೂ ಪಾಳುಬೀಳಿಸುವೆನು; ನಾಲ್ವತ್ತು ವರುಷ ಹಾಗೆಯೇ ಇರುವವು; ನಾನು ಐಗುಪ್ತ್ಯರನ್ನು ಜನಾಂಗಗಳಲ್ಲಿ ಚದರಿಸಿ ದೇಶದೇಶಗಳಿಗೆ ತೂರಿಬಿಡುವೆನು.


ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧಪದಾರ್ಥದಂತಿರುವದು; ಯೆಹೋವನು ತನ್ನ ರೋಷವನ್ನು ತೀರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರವು ಅವರನ್ನು ರಕ್ಷಿಸಲಾರದು; ಅವರ ಇಷ್ಟಾರ್ಥ ನೆರವೇರದು, ಅವರ ಹೊಟ್ಟೆ ತುಂಬದು; ಏಕಂದರೆ ಅವರ ಆಸ್ತಿಯು ಅವರಿಗೆ ಪಾಪಕಾರಿವಿಘ್ನವಾಗಿತ್ತು.


ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗಮೇಘವಾಹನನಾಗಿ ಐಗುಪ್ತಕ್ಕೆ ಬರುವನು; ಆತನು ಸಮ್ಮುಖನಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತ್ಯರ ಹೃದಯವು ತಮ್ಮೊಳಗೆ ಕರಗಿ ನೀರಾಗುವದು.


ಆತನು ಜನಾಂಗಗಳಲ್ಲಿ ನ್ಯಾಯಸ್ಥಾಪಿಸುವಾಗ ವಿಸ್ತಾರವಾದ ರಣರಂಗದಲ್ಲಿ ಶತ್ರುಗಳ ಶಿರಸ್ಸನ್ನು ಛೇದಿಸಿ ಹೆಣಗಳಿಂದ ಅದನ್ನು ತುಂಬಿಸುವನು.


ಆದರೆ ಕರ್ತನು ಅವನಿಗೆ ಶಿಕ್ಷಾಕಾಲ ಬರುತ್ತದೆಂದು ನಗುತ್ತಾನೆ.


ಬೆಳಗಿನ ಜಾವದಲ್ಲಿ ಯೆಹೋವನು ಆ ಅಗ್ನಿಮೇಘಸ್ತಂಭದೊಳಗಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅದನ್ನು ಗಲಿಬಿಲಿ ಮಾಡಿದನು.


ಆ ಮೇಘಸ್ತಂಭವು ಐಗುಪ್ತ್ಯರ ಪಾಳೆಯಕ್ಕೂ ಇಸ್ರಾಯೇಲ್ಯರ ಪಾಳೆಯಕ್ಕೂ ನಡುವೆ ಬಂದು [ಐಗುಪ್ತ್ಯರಿಗೆ] ಕತ್ತಲನ್ನು ಉಂಟುಮಾಡಿದರೂ [ಇಸ್ರಾಯೇಲ್ಯರಿಗೋಸ್ಕರ] ರಾತ್ರಿಯನ್ನು ಬೆಳಕುಮಾಡಿತು; ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರಕ್ಕೆ ಒಬ್ಬರು ಬರಲಿಲ್ಲ.


ಅರಚಿಕೊಳ್ಳಿರಿ, ಯೆಹೋವನ ದಿನವು ಸಮೀಪವಾಯಿತು; ಅದು ಸರ್ವಶಕ್ತನಿಂದ ನಾಶರೂಪವಾಗಿ ಬರುವದು.


ಯೆಹೋವನ ದಿನದಲ್ಲಿ ಯುದ್ಧಕ್ಕೆ ನಿಲ್ಲಬೇಕೆಂದು ನೀವು ಪೌಳಿಯ ಒಡಕುಗಳನ್ನೇರಲಿಲ್ಲ, ಇಸ್ರಾಯೇಲ್‍ವಂಶದ ರಕ್ಷಣೆಗಾಗಿ ಗೋಡೆಯನ್ನು ಗಟ್ಟಿಮಾಡಲೂ ಇಲ್ಲ.


ಇಗೋ, ಯೆಹೋವನ ದಿನವು ಬರುತ್ತಿದೆ; ಅದು ಭೂವಿುಯನ್ನು ಹಾಳುಮಾಡಿ ಪಾಪಿಗಳನ್ನು ನಿರ್ಮೂಲಪಡಿಸುವದಕ್ಕೆ [ಆತನ] ಕೋಪೋದ್ರೇಕದಿಂದಲೂ ತೀಕ್ಷ್ಣರೋಷದಿಂದಲೂ ಕ್ರೂರವಾಗಿರುವದು.


ಶಬ್ದವು ಭೂವಿುಯ ಕಟ್ಟ ಕಡೆಯವರೆಗೆ ವ್ಯಾಪಿಸುವದು; ಯೆಹೋವನಿಗೂ ಜನಾಂಗಗಳಿಗೂ ವ್ಯಾಜ್ಯವುಂಟಷ್ಟೆ; ನರಜನ್ಮದವರೆಲ್ಲರ ಸಂಗಡ ನ್ಯಾಯಕ್ಕೆ ನಿಲ್ಲುವನು; ದುಷ್ಟರನ್ನು ಖಡ್ಗಕ್ಕೆ ಗುರಿಮಾಡುವನು. ಇದು ಯೆಹೋವನ ನುಡಿ.


ಆಹಾ, [ದಂಡನೆಯ] ದಿನವು, ಇಗೋ ಬಂತು! ನಿನಗೆ ದುರ್ಗತಿಯು ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆಯು ಚಿಗುರಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು