Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 30:6 - ಕನ್ನಡ ಸತ್ಯವೇದವು J.V. (BSI)

6 ಯೆಹೋವನು ಇಂತೆನ್ನುತ್ತಾನೆ - ಐಗುಪ್ತಕ್ಕೆ ಆಧಾರವಾದವರು ಬೀಳುವರು, ಅದರ ಶಕ್ತಿಮದವು ಇಳಿದುಹೋಗುವದು; ಅಲ್ಲಿನ ಜನರು ವಿುಗ್ದೋಲಿನಿಂದ ಸೆವೇನೆಯವರೆಗೆ ಖಡ್ಗದಿಂದ ಹತರಾಗುವರು; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನು ಇಂತೆನ್ನುತ್ತಾನೆ, “ಐಗುಪ್ತಕ್ಕೆ ಆಧಾರವಾದವರು ಬೀಳುವರು, ಅದರ ಶಕ್ತಿಯ ಅಹಂಕಾರವು ಇಳಿದು ಹೋಗುವುದು; ಅಲ್ಲಿನ ಜನರು ಮಿಗ್ದೋಲಿನಿಂದ ಸೆವೇನೆಯವರೆಗೆ ಖಡ್ಗದಿಂದ ಹತರಾಗುವರು” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರ ಇಂತೆನ್ನುತ್ತಾರೆ - “ಈಜಿಪ್ಟಿಗೆ ಆಧಾರವಾದವರು ಬೀಳುವರು, ಅದರ ಶಕ್ತಿ ಮದವು ಇಳಿದುಹೋಗುವುದು; ಅಲ್ಲಿನ ಜನರು ಮಿಗ್ದೋಲಿನಿಂದ ಸೆವೇನೆಯವರೆಗೆ ಖಡ್ಗದಿಂದ ಹತರಾಗುವರು. ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “‘ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು: ಈಜಿಪ್ಟಿಗೆ ಸಹಾಯ ಮಾಡುವವನು ಬೀಳುವನು. ಅವಳು ಹೆಮ್ಮೆಪಡುವ ಸಾಮರ್ಥ್ಯ ಅಂತ್ಯವಾಗುವದು. ಈಜಿಪ್ಟಿನಲ್ಲಿರುವ ಜನರು ರಣರಂಗದಲ್ಲಿ ಮಿಗ್ದೋಲ್‌ನಿಂದ ಹಿಡಿದು ಅಸ್ವಾನ್ ತನಕ ಸಾಯುವರು. ಇದು ನನ್ನ ಒಡೆಯನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ ‘ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಈಜಿಪ್ಟಿನ ಸಹಾಯಕರು ಬೀಳುವರು. ಅದರ ಶಕ್ತಿಯ ಮದವು ಇಳಿದುಹೋಗುವುದು. ಅಲ್ಲಿಯ ಜನರು ಮಿಗ್ದೋಲಿನಿಂದ ಸೆವೇನೆಯ ಗೋಪುರದವರೆಗೆ ಖಡ್ಗದಿಂದ ಹತರಾಗುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 30:6
8 ತಿಳಿವುಗಳ ಹೋಲಿಕೆ  

ಇಗೋ, ನಾನು ನಿನಗೂ ನಿನ್ನ ನದಿಗೂ ವಿರುದ್ಧನಾಗಿ ಐಗುಪ್ತದೇಶವನ್ನು ವಿುಗ್ದೋಲಿನಿಂದ ಸೆವೇನೆಯ ತನಕ, ಹೌದು ಕೂಷಿನ ಎಲ್ಲೆಯವರೆಗೂ ತೀರಾ ಹಾಳುಪಾಳು ಮಾಡುವೆನು.


ಕೂಷ್ ಮತ್ತು ಐಗುಪ್ತವು ಅದರ ಅಪಾರಬಲ; ಪೂಟರೂ ಲೂಬ್ಯರೂ ಅದಕ್ಕೆ ಸಹಾಯಕರು.


ಐಗುಪ್ತ್ಯರು ಮನುಷ್ಯ ಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಮಾಂಸಮಯವೇ, ಆತ್ಮವಲ್ಲ; ಯೆಹೋವನು ಕೈಚಾಚುವಾಗ ಸಹಾಯ ಮಾಡಿದವನು ಮುಗ್ಗರಿಸುವನು, ಸಹಾಯಪಡೆದವನು ಬಿದ್ದು ಹೋಗುವನು, ಅಂತು ಎಲ್ಲರೂ ಒಟ್ಟಿಗೆ ಲಯವಾಗುವರು.


ದೇವರು ತನ್ನ ಸಿಟ್ಟನ್ನು ತೊಲಗಿಸಿಬಿಡುವದಿಲ್ಲ; ಘಟಸರ್ಪದ ಸಹಾಯಕರು ಆತನಿಗೆ ಪಾದಾಕ್ರಾಂತರಾದರಲ್ಲಾ.


ಇಗೋ, ಇವರು ದೂರದಿಂದ ಬರುತ್ತಾರೆ, ಇಗೋ, ಇವರು ಬಡಗಲಿಂದ ಮತ್ತು ಪಡುವಲಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.


ನಾನು ದೇಶವನ್ನು ಹಾಳುಪಾಳುಮಾಡುವೆನು, ಅದರ ಶಕ್ತಿಯ ಮದವು ಇಳಿದುಹೋಗುವದು; ಇಸ್ರಾಯೇಲಿನ ಮಲೆನಾಡು ಬೀಡುಬೀಳುವದು; ಯಾರೂ ಅಲ್ಲಿ ಹಾದುಹೋಗರು.


ನಾವು ಶೂರರು, ಯುದ್ಧಪ್ರವೀಣರಾದ ಪರಾಕ್ರಮಶಾಲಿಗಳು ಎಂದು ನೀವು ಅಂದುಕೊಳ್ಳುವದು ಹೇಗೆ? ಮೋವಾಬು ಹಾಳಾಗಿದೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು