Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 30:9 - ಕನ್ನಡ ಸತ್ಯವೇದವು J.V. (BSI)

9 ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣಮಾಡಿ ನಿಶ್ಚಿಂತರಾದ ಕೂಷ್ಯರನ್ನು ಹೆದರಿಸುವರು; ಐಗುಪ್ತದ ನಾಶನದಿನದಲ್ಲಿ ಕೂಷ್ಯರಿಗೂ ಸಂಕಟವಾಗುವದು; ಇಗೋ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ‘ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣಮಾಡಿ, ನಿಶ್ಚಿಂತರಾದ ಕೂಷ್ಯರನ್ನು ಹೆದರಿಸುವರು; ಐಗುಪ್ತದ ನಾಶದ ದಿನದಲ್ಲಿ ಆದ ಹಾಗೆ ಕೂಷ್ಯರಿಗೂ ಸಂಕಟವು ಉಂಟಾಗುವುದು; ಇಗೋ, ಆ ದಿನ ಬಂತು!’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ಆ ದಿನಗಳಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು, ಹಡಗುಗಳಲ್ಲಿ ಪ್ರಯಾಣಮಾಡಿ, ನಿಶ್ಚಿಂತರಾದ ಸುಡಾನರನ್ನು ಹೆದರಿಸುವರು; ಈಜಿಪ್ಟಿನ ವಿನಾಶ ದಿನದಲ್ಲಿ ಸುಡಾನರಿಗೂ ಸಂಕಟವಾಗುವುದು; ಇಗೋ, ಆ ದಿನ ಬಂದಿತು!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “‘ಆ ಸಮಯದಲ್ಲಿ, ನಾನು ಸಂದೇಶವಾಹಕರನ್ನು ಕಳುಹಿಸುವೆನು. ಅವರು ಇಥಿಯೋಪ್ಯಕ್ಕೆ ಹಡಗಿನಲ್ಲಿ ಪ್ರಯಾಣ ಮಾಡಿ ಕೆಟ್ಟ ಸುದ್ದಿಯನ್ನು ಒಯ್ಯುವರು. ಇಥಿಯೋಪ್ಯ ಈಗ ಸುರಕ್ಷಿತವಾಗಿರುವುದು. ಆದರೆ ಈಜಿಪ್ಟ್ ಶಿಕ್ಷಿಸಲ್ಪಟ್ಟಾಗ ಇಥಿಯೋಪ್ಯದ ಜನರು ಭಯದಿಂದ ನಡುಗುವರು. ಆ ಸಮಯವು ಬರುವದು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ ‘ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣಮಾಡಿ ನಿಶ್ಚಿಂತರಾದ ಕೂಷ್ಯರನ್ನು ಹೆದರಿಸುವರು. ಈಜಿಪ್ಟಿನ ದಿನದಲ್ಲಿ ಆದ ಹಾಗೆ ಅವರ ಮೇಲೆ ದೊಡ್ಡ ದುಃಖ ಉಂಟಾಗುವುದು, ಏಕೆಂದರೆ ಇಗೋ, ಆ ದಿನ ಬರುವುದು ನಿಶ್ಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 30:9
24 ತಿಳಿವುಗಳ ಹೋಲಿಕೆ  

ತೂರಿನ ಸಮಾಚಾರವು ಐಗುಪ್ತ್ಯರಿಗೆ ಮುಟ್ಟಲು ಅದಕ್ಕಾಗಿ ಸಂಕಟಪಡುವರು.


ಈ ನಿನೆವೆಯು ಮೊದಲು ಉಲ್ಲಾಸದ ನಗರಿಯಾಗಿ ನೆಮ್ಮದಿಯಿಂದ ನೆಲೆಗೊಂಡಿದ್ದು ತನ್ನ ಹೃದಯದೊಳಗೆ - ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ ಅಂದುಕೊಳ್ಳುತ್ತಿತ್ತು; ಅಯ್ಯೋ, ಎಷ್ಟೋ ಹಾಳಾಗಿ ಹೋಗಿ ಮೃಗಗಳು ತಂಗುವ ಹಕ್ಕೆಯಾಗಿದೆ! ಹಾದುಹೋಗುವವರೆಲ್ಲರೂ ಸಿಳ್ಳುಹಾಕಿ ಕೈಯಾಡಿಸುತ್ತಾರೆ.


ಕೂಷಿನವರೇ, ನೀವು ಸಹ ನನ್ನ ಖಡ್ಗದಿಂದ ಹತರಾಗುವಿರಿ.


ಕರ್ತನಾದ ಯೆಹೋವನು ತನ್ನ ಪರಿಶುದ್ಧತ್ವದ ಮೇಲೆ ಆಣೆಯಿಟ್ಟು - ಇಗೋ, ನಿಮ್ಮನ್ನು ಕೊಂಡಿಗಳಿಂದಲೂ ನಿಮ್ಮಲ್ಲಿ ಉಳಿದವರನ್ನು ಮೀನುಗಾಳಗಳಿಂದಲೂ ಎಳೆದುಕೊಂಡು ಹೋಗುವ ದಿನಗಳು ನಿಮಗೆ ಬರುತ್ತವೆ ಎಂದು ಪ್ರಮಾಣ ಮಾಡಿದ್ದಾನೆ.


ನಾನು ಮಾಗೋಗ್ ದೇಶದ ಮೇಲೂ ಕರಾವಳಿಯ ಸೀಮೆಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೂ ಬೆಂಕಿಯನ್ನು ಕಳುಹಿಸುವೆನು; ಆಗ ನಾನೇ ಯೆಹೋವನು ಎಂದು ಅವರಿಗೆ ನಿಶ್ಚಿತವಾಗುವದು.


ನೀನು - ಆಹಾ, ನಾನು ಪೌಳಿಗೋಡೆಯಿಲ್ಲದ ಹಳ್ಳಿಪಳ್ಳಿಗಳು ತುಂಬಿದ ದೇಶವನ್ನು ನುಗ್ಗಿ ಅಗುಳಿ ಬಾಗಿಲು ಗೋಡೆಗಳಿಲ್ಲದೆ ನೆಮ್ಮದಿಯಿಂದ ನಿರ್ಭಯವಾಗಿರುವವರ ಮೇಲೆ ಬೀಳುವೆನು ಅಂದುಕೊಂಡು


ನೀನು ಮುಂತಿಳಿಸಿದ್ದು ಸಂಭವಿಸುವಾಗ [ಆಹಾ, ಸಂಭವಿಸಿತು] ತಮ್ಮ ಮಧ್ಯದಲ್ಲಿದ್ದವನು ಪ್ರವಾದಿಯೇ ಎಂದು ಅವರಿಗೆ ನಿಶ್ಚಿತವಾಗುವದು.


ಕರಾವಳಿಯ ಸಮಸ್ತನಿವಾಸಿಗಳು ನಿನ್ನ ಗತಿಗೆ ಬೆಚ್ಚಿಬಿದ್ದಿದ್ದಾರೆ; ರಾಜರು ಮೊಗಗೆಟ್ಟು ರೋಮಾಂಚಿತರಾಗಿದ್ದಾರೆ.


ಆಗ ಸಮುದ್ರದ ಸುತ್ತುಮುತ್ತಲಿನ ಸಕಲಪ್ರಭುಗಳು ತಮ್ಮ ಸಿಂಹಾಸನಗಳಿಂದಿಳಿದು ನಿಲುವಂಗಿಗಳನ್ನು ತೆಗೆದುಹಾಕಿ ಬೂಟೇದಾರಿಯ ವಸ್ತ್ರಗಳನ್ನು ಕಿತ್ತೆಸೆದು ತತ್ತರವನ್ನೇ ಹೊದ್ದುಕೊಂಡು ನೆಲದ ಮೇಲೆ ಕುಕ್ಕರಿಸಿ ಕ್ಷಣಕ್ಷಣವೂ ನಡುಗುತ್ತಾ ನಿನಗೆ ಬೆಚ್ಚಿ ಬೆರಗಾಗುವರು.


[ಬಾಬೆಲಿನವರೇ,] ಏಳಿರಿ. ಅಗುಳಿಯೂ ಬಾಗಿಲೂ ಬೇಕೆನ್ನದೆ ನೆಮ್ಮದಿಯಿಂದ ನಿರ್ಭಯವಾಗಿ ಪ್ರತ್ಯೇಕ ವಾಸಿಸುವ ಜನಾಂಗದ ಮೇಲೆ ಬೀಳಿರಿ!


ಎದೋಮ್ಯರು ಧಡಮ್ಮನೆ ಬೀಳಲು ಭೂವಿುಯು ಕಂಪಿಸುವದು; ಗೋಳು ಕೆಂಪುಸಮುದ್ರದವರೆಗೂ ಕೇಳಿಸುವದು!


ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ, ನಾನು ವಿಧವೆಯಾಗಿ ಕೂತುಕೊಳ್ಳುವದಿಲ್ಲ, ಪುತ್ರಶೋಕವನ್ನು ಅನುಭವಿಸುವದಿಲ್ಲ ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು -


ಆಗ [ನನ್ನ ಜನರು] ತಾವು ನಿರೀಕ್ಷಿಸಿಕೊಂಡಿದ್ದ ಕೂಷಿನ ನಿವಿುತ್ತವಾಗಿಯೂ ಕೊಚ್ಚಿಕೊಂಡಿದ್ದ ಐಗುಪ್ತದ ವಿಷಯವಾಗಿಯೂ ಬೆಚ್ಚಿಬೆರಗಾಗಿ ನಾಚಿಕೆಪಡುವರು.


ಆಗ ಯೆಹೋವನು ಹೀಗೆ ಹೇಳಿದನು - ನನ್ನ ಸೇವಕನಾದ ಯೆಶಾಯನು ಐಗುಪ್ತದ ಮತ್ತು ಕೂಷಿನ ನಾಶನಕ್ಕೆ ಸೋಜಿಗದ ಗುರುತಾಗಿ ಮೂರು ವರುಷ ಬಟ್ಟೆ ಕೆರಗಳಿಲ್ಲದೆ ನಡೆದ ಪ್ರಕಾರ


ಮತ್ತು ಐಗುಪ್ತವು ಬೆಚ್ಚಿ ಬೀಳುವದಕ್ಕೆ ಯೆಹೂದ ದೇಶವು ಕಾರಣವಾಗುವದು; ಈ ದೇಶದ ಹೆಸರನ್ನು ಕೇಳುವ ಪ್ರತಿಯೊಬ್ಬನೂ ಸೇನಾಧೀಶ್ವರನಾದ ಯೆಹೋವನು ಐಗುಪ್ತಕ್ಕೆ ಪ್ರತಿಕೂಲವಾಗಿ ಮಾಡಿಕೊಂಡಿರುವ ಸಂಕಲ್ಪವನ್ನು ತಿಳಿದು ಬೆರಗಾಗುವನು.


ಆ ಐದು ಮಂದಿ ಹೊರಟು ಲಯಿಷಿಗೆ ಬಂದು - ಅಲ್ಲಿನ ಜನರು ನಿರ್ಭೀತರಾಗಿ ಚೀದೋನ್ಯರಂತೆ ಸುಖ ಸಮಾಧಾನಗಳಿಂದ ಜೀವಿಸುತ್ತಾರೆ; ಅವರನ್ನು ತಗ್ಗಿಸುವ ಅಧಿಕಾರಿಗಳು ದೇಶದಲ್ಲಿಲ್ಲ; ಅವರು ಚೀದೋನ್ಯರಿಗೆ ದೂರವಾಗಿದ್ದು ಯಾರೊಡನೆಯೂ ಬಳಕೆಯಿಲ್ಲದವರು ಎಂಬದನ್ನು ತಿಳಿದುಕೊಂಡು


ರಾತ್ರಿಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.


ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ; ಇದು ಸಾಗುವದು, ನಾನು ನೆರವೇರಿಸುವೆನು; ಹಿಂದೆಗೆಯೆನು, ಕ್ಷವಿುಸೆನು, ಕರುಣಿಸೆನು; ನಿನ್ನ ದುರ್ಮಾರ್ಗ ದುಷ್ಕೃತ್ಯಗಳಿಗೆ ಸರಿಯಾಗಿ ನಿನಗೆ ನ್ಯಾಯತೀರ್ಪು ಆಗುವದು; ಇದು ಕರ್ತನಾದ ಯೇಹೋವನ ನುಡಿ.


ಅದು ಕ್ಲುಪ್ತಕಾಲದಲ್ಲಿ ನೆರವೇರತಕ್ಕದ್ದು, ಆದರೆ ಪರಿಣಾಮಕ್ಕೆ ತ್ವರೆಪಡುತ್ತದೆ, ಮೋಸಮಾಡದು; ತಡವಾದರೂ ಅದಕ್ಕೆ ಕಾದಿರು; ಅದು ಬಂದೇ ಬರುವದು, ತಾಮಸವಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು