Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 31:18 - ಕನ್ನಡ ಸತ್ಯವೇದವು J.V. (BSI)

18 ಇಂಥಾ ವೈಭವದಿಂದಲೂ ಮಹಿಮೆಯಿಂದಲೂ ಕೂಡಿದ ನೀನು ಏದೆನಿನ ವೃಕ್ಷಗಳಲ್ಲಿ ಯಾವದಕ್ಕಿಂತ ಕಡಿಮೆ? ಆದರೂ ನೀನು ಏದೆನಿನ ವೃಕ್ಷಗಳೊಂದಿಗೆ ಅಧೋಲೋಕಕ್ಕೆ ತಳ್ಳಲ್ಪಟ್ಟು ಸುನ್ನತಿಹೀನರ ನಡುವೆ ಖಡ್ಗಹತರ ಸಂಗಡ ಒರಗಿಹೋಗುವಿ. ಫರೋಹನೂ ಅವನ ಎಲ್ಲಾ ಪ್ರಜೆಗಳೂ ಇದೇ ಗತಿಯನ್ನು ಹೊಂದುವರು ಎಂಬದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ಇಂಥಾ ವೈಭವದಿಂದಲೂ, ಮಹಿಮೆಯಿಂದಲೂ ಕೂಡಿದ ನೀನು ಏದೆನಿನ ವೃಕ್ಷಗಳಲ್ಲಿ ಯಾವುದಕ್ಕಿಂತ ಕಡಿಮೆಯಾಗಿರುವೆ? ಆದರೂ ನೀನು ಏದೆನಿನ ವೃಕ್ಷಗಳೊಂದಿಗೆ ಅಧೋಲೋಕಕ್ಕೆ ತಳ್ಳಲ್ಪಟ್ಟು, ಸುನ್ನತಿಹೀನರ ನಡುವೆ ಖಡ್ಗದಿಂದ ಹತರಾದವರ ಸಂಗಡ ಮಲಗುವಿ. ಫರೋಹನೂ, ಅವನ ಎಲ್ಲಾ ಪ್ರಜೆಗಳೂ ಇದೇ ಗತಿಯನ್ನು ಹೊಂದುವರು ಎಂಬುದು ಕರ್ತನಾದ ಯೆಹೋವನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇಂಥಾ ವೈಭವದಿಂದ ಹಾಗೂ ಮಹಿಮೆಯಿಂದ ಕೂಡಿದ ನೀನು, ಏದೆನಿನ ವೃಕ್ಷಗಳಲ್ಲಿ ಯಾವುದಕ್ಕಿಂತ ಕಡಿಮೆ? ಆದರೂ ನೀನು ಏದೆನಿನ ವೃಕ್ಷಗಳೊಂದಿಗೆ ಅಧೋಲೋಕಕ್ಕೆ ದೂಡಿದವನಾಗಿ ಸುನ್ನತಿಹೀನರ ನಡುವೆ ಖಡ್ಗಹತರ ಸಂಗಡ ಒರಗಿಹೋಗುವೆ. ಫರೋಹನೂ ಅವನ ಎಲ್ಲಾ ಪ್ರಜೆಗಳೂ ಇದೇ ಗತಿಯನ್ನು ಹೊಂದುವರು. ಇದು ಸರ್ವೇಶ್ವರನಾದ ದೇವರ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಈಜಿಪ್ಟೇ, ಏದೆನಿನಲ್ಲಿ ಎಷ್ಟೋ ದೊಡ್ಡ, ಬಲಶಾಲಿಯಾಗಿರುವ ಮರಗಳಿವೆ. ಅದರ ಯಾವ ಮರಕ್ಕೆ ನಿನ್ನನ್ನು ಹೋಲಿಸಲಿ? ಅವೆಲ್ಲವೂ ಭೂಮಿಯ ಕೆಳಗೆ ಪಾತಾಳವನ್ನು ಸೇರಿದವು. ನೀನು ಕೂಡಾ ಆ ಪರದೇಶಸ್ಥರೊಂದಿಗೆ ಆ ಸ್ಥಳಕ್ಕೆ ಸೇರುವೆ. ರಣರಂಗದಲ್ಲಿ ಸತ್ತವರೊಂದಿಗೆ ನೀನು ಬಿದ್ದುಕೊಳ್ಳುವೆ. “ಹೌದು, ಈ ರೀತಿಯಾಗಿ ಫರೋಹನಿಗೂ ಅವನೊಂದಿಗಿರುವ ಜನರ ಗುಂಪಿಗೂ ಆಗುವದು.” ಇದು ಒಡೆಯನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ ‘ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆಯಿಂದಲೂ ಏದೆನಿನ ಯಾವ ಮರಗಳಿಗೆ ಸಮನಾಗಿರುವೆ? ಆದರೂ ನೀನು ಏದೆನಿನ ಮರಗಳ ಸಂಗಡ ಭೂಮಿಯ ಕೆಳಭಾಗಗಳಿಗೆ ದೂಡಿದವನಾಗುವೆ. ಸುನ್ನತಿಯಿಲ್ಲದವರ ಮಧ್ಯದಲ್ಲಿ ಖಡ್ಗದಿಂದ ಹತರಾದವರ ಸಂಗಡ ಮಲಗುವೆ. “ ‘ಇದೇ ಫರೋಹನನೂ ಅವನ ಎಲ್ಲಾ ಜನಸಮೂಹವೂ ಆಗಿವೆ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 31:18
19 ತಿಳಿವುಗಳ ಹೋಲಿಕೆ  

[ಐಗುಪ್ತವೇ,] ನೀನು ಸೌಂದರ್ಯದಲ್ಲಿ ಯಾರಿಗೆ ಕಡಿಮೆ? ಇಳಿದು ಹೋಗಿ ಸುನ್ನತಿಹೀನರ ನಡುವೆ ಒರಗು.


ಪಾತಾಳದೊಳಗಿನ ಬಲಿಷ್ಠಶೂರರು ಅದನ್ನೂ ಅದರ ಸಹಾಯಕರನ್ನೂ ನೋಡಿ ಓಹೋ, ಇವರು ಸುನ್ನತಿಹೀನರು, ಖಡ್ಗಹತರು, ಇಳಿದುಬಂದು ಒರಗಿಬಿದ್ದರು ಅಂದುಕೊಳ್ಳುವರು.


ನೀನು ಅನ್ಯರ ಕೈಯಿಂದ ಸುನ್ನತಿಹೀನರ ಮರಣಕ್ಕೆ ಗುರಿಯಾಗುವಿ; ನಾನೇ ನುಡಿದಿದ್ದೇನೆ, ಇದು ಕರ್ತನಾದ ಯೆಹೋವನ ಸಂಕಲ್ಪ.


ನಾನು ಅದನ್ನು ಪ್ರೇತಗಳ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ ಅದು ಬಿದ್ದ ಶಬ್ದಕ್ಕೆ ಸಕಲಜನಾಂಗಗಳು ನಡುಗಿದವು; ಮತ್ತು [ಪೂರ್ವಕಾಲದಲ್ಲಿ] ಅಧೋಲೋಕದ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮ ವೃಕ್ಷಗಳು, ಅಂತು ನೀರಾವರಿಯ ಸಕಲ ವನಸ್ಪತಿಗಳೂ ಅಲ್ಲಿ ಸಂತೈಸಿಕೊಂಡವು.


ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನಿಗೂ ಅವನ ಅಸಂಖ್ಯಾತವಾದ ಪ್ರಜೆಗೂ ಹೀಗೆ ನುಡಿ - ದೊಡ್ಡಸ್ತಿಕೆಯಲ್ಲಿ ನಿನಗೆ ಸರಿಸಮಾನರು ಯಾರು?


ನೋಡಿರಿ, ದೇವರನ್ನು ಆಶ್ರಯಿಸಿಕೊಳ್ಳದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ದುಷ್ಟತ್ವವೇ ತನಗೆ ಬಲವೆಂದು ನಂಬಿಕೊಂಡ ಮೂಢನು ಇವನೇ ಎಂದು ಹೇಳುವರು.


ಆದದರಿಂದ ಪ್ರಿಯ ಸಹೋದರರೇ, ವಿಗ್ರಹಾರಾಧನೆಯ ಗೊಡವೆಯನ್ನು ಸಂಪೂರ್ಣವಾಗಿ ತೊರೆದುಬಿಡಿರಿ.


ಹೌದು, ಬಹುಜನಾಂಗಗಳು ನಿನ್ನ ಗತಿಗೆ ಬೆಚ್ಚಿಬೆರಗಾಗುವಂತೆ ಮಾಡುವೆನು; ನಾನು ನನ್ನ ಖಡ್ಗವನ್ನು ಅವುಗಳ ಅರಸರ ಕಣ್ಣೆದುರಿಗೆ ಬೀಸುವಾಗ ಅವರು ನಿನ್ನ ದುರ್ಗತಿಯನ್ನು ನೆನಸಿ ಭಯಭ್ರಾಂತರಾಗುವರು; ನಿನ್ನ ಪತನದಿನದಲ್ಲಿ ಪ್ರತಿಯೊಬ್ಬನು ತನ್ನ ತನ್ನ ಪ್ರಾಣಾಪಾಯಕ್ಕೆ ಕ್ಷಣಕ್ಷಣವೂ ನಡುಗುವನು.


ನಾನು ಅದನ್ನು ಬಹು ಶಾಖೋಪಶಾಖೆಗಳಿಂದ ಅಂದಗೊಳಿಸಿದೆನು; ದೇವರ ಉದ್ಯಾನವಾದ ಏದೆನಿನ ಸಕಲವೃಕ್ಷಗಳೂ ಅದಕ್ಕೆ ಅಸೂಯೆಪಡುತ್ತಿದ್ದವು.


ಕಷ್ಟ ಬಂದಾಗ ಅರಸನಾದ ಆಹಾಜನು ಯೆಹೋವನಿಗೆ ಮತ್ತಷ್ಟು ದ್ರೋಹಿಯಾದನು.


ಈ ಸಂಗತಿಯನ್ನು ಗತ್ ಊರಿನಲ್ಲಿ ತಿಳಿಸಬೇಡಿರಿ; ಅಷ್ಕೆಲೋನಿನ ಬೀದಿಗಳಲ್ಲಿ ಸಾರಬೇಡಿರಿ. ಫಿಲಿಷ್ಟಿಯರ ಹೆಂಗಸರು ಸಂತೋಷಿಸಾರು; ಸುನ್ನತಿಯಿಲ್ಲದವರ ಸ್ತ್ರೀಯರು ಉಲ್ಲಾಸಿಸಾರು.


ನಿನ್ನ ಸೇವಕನಿಂದ ಕೊಲ್ಲಲ್ಪಟ್ಟ ಸಿಂಹಕ್ಕೂ ಕರಡಿಗೂ ಆದ ಗತಿಯೇ ಜೀವಸ್ವರೂಪನಾದ ದೇವರ ಸೈನ್ಯವನ್ನು ನಿಂದಿಸುವಂಥ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು.


ದಾವೀದನು - ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸುವದಕ್ಕೆ ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಾಯೇಲ್ಯರಿಗೆ ಬಂದಿರುವ ನಿಂದೆಯನ್ನು ತೆಗೆದುಹಾಕುವವನಿಗೆ ಸಿಕ್ಕುವದೇನೆಂದು ಹೇಳಿದಿರಿ ಎಂದು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರನ್ನು ಕೇಳಲು


ದೇವರ ಉದ್ಯಾನವನದಲ್ಲಿನ ದೇವದಾರುಗಳು ಅದನ್ನು ಮುಚ್ಚಲಾರದೆ ಹೋದವು; ತುರಾಯಿಮರಗಳು ಅದರ ರೆಂಬೆಗಳಷ್ಟು ಉದ್ದವಾಗಿರಲಿಲ್ಲ; ಅತ್ತಿಮರಗಳು ಅದರ ಕೊಂಬೆಗಳಷ್ಟು ದಪ್ಪವಾಗಿರಲಿಲ್ಲ; ದೇವರ ವನದಲ್ಲಿನ ಯಾವ ಮರವೂ ಅದರಷ್ಟು ರಮಣೀಯವಾಗಿರಲಿಲ್ಲ.


ನೀರಾವರಿಯ ಯಾವ ಮರಗಳೂ ತಮ್ಮ ನೀಳವನ್ನು ಹೆಚ್ಚಿಸಿಕೊಂಡು ತಮ್ಮ ತುದಿಯನ್ನು ಮೋಡಗಳಿಗೆ ತಗಲಿಸದಿರಲೆಂದೂ ನೀರನ್ನು ಹೀರುತ್ತಲೇ ಇರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ನಿಗುರಿಕೊಳ್ಳದಿರಲೆಂದೂ ಹೀಗಾಯಿತು; ಅವೆಲ್ಲಾ ಮರಣದ ಪಾಲಾಗುವವು, ಅಧೋಲೋಕವೇ ಅವುಗಳ ಗತಿ; ಪಾತಾಳಕ್ಕೆ ಇಳಿದುಹೋದವರ ಬಳಿಗೆ ನರಜನ್ಮದವರೊಂದಿಗೆ ಒಂದೇ ಗುಂಪಾಗಿ ಸೇರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು