Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 31:2 - ಕನ್ನಡ ಸತ್ಯವೇದವು J.V. (BSI)

2 ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನಿಗೂ ಅವನ ಅಸಂಖ್ಯಾತವಾದ ಪ್ರಜೆಗೂ ಹೀಗೆ ನುಡಿ - ದೊಡ್ಡಸ್ತಿಕೆಯಲ್ಲಿ ನಿನಗೆ ಸರಿಸಮಾನರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನಿಗೂ ಮತ್ತು ಅವನ ಅಸಂಖ್ಯಾತವಾದ ಪ್ರಜೆಗೂ ಹೀಗೆ ನುಡಿ, ನಿನ್ನ ದೊಡ್ಡಸ್ತಿಕೆಯಲ್ಲಿ ನಿನಗೆ ಸರಿಸಮಾನರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನರಪುತ್ರನೇ, ನೀನು ಈಜಿಪ್ಟಿನ ಅರಸ ಫರೋಹನಿಗೂ ಅವನ ಅಸಂಖ್ಯಾತ ಪ್ರಜೆಗೂ ಹೀಗೆ ನುಡಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನರಪುತ್ರನೇ, ಇದನ್ನು ಈಜಿಪ್ಟಿನ ರಾಜನಾದ ಫರೋಹನಿಗೂ ಅವನ ಜನರಿಗೂ ಹೇಳು: “‘ನೀನು ಅತ್ಯಂತ ಪ್ರಭಾವಶಾಲಿ, ನಿನ್ನನ್ನು ಯಾರಿಗೆ ಹೋಲಿಸಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಮನುಷ್ಯಪುತ್ರನೇ, ಈಜಿಪ್ಟಿನ ಅರಸನಾದ ಫರೋಹನೊಂದಿಗೂ ಮತ್ತು ಅವನ ಸಮೂಹದೊಂದಿಗೂ ಮಾತನಾಡಿ, “ ‘ನೀನು ನಿನ್ನ ದೊಡ್ಡಸ್ತಿಕೆಯಲ್ಲಿ ಯಾರಿಗೆ ಸಮಾನವಾಗಿರುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 31:2
9 ತಿಳಿವುಗಳ ಹೋಲಿಕೆ  

ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತದೇಶವನ್ನು ಕೊಡುವೆನು; ಅವನು ಅದರ ಜನ ಯಾವತ್ತನ್ನು ಒಯ್ದು ಆ ದೇಶವನ್ನು ಸೂರೆಮಾಡಿ ಕೊಳ್ಳೆಹೊಡೆಯುವನು; ಅದೇ ಅವನ ಸೈನ್ಯಕ್ಕೆ ಸಂಬಳ.


ಇಂಥಾ ವೈಭವದಿಂದಲೂ ಮಹಿಮೆಯಿಂದಲೂ ಕೂಡಿದ ನೀನು ಏದೆನಿನ ವೃಕ್ಷಗಳಲ್ಲಿ ಯಾವದಕ್ಕಿಂತ ಕಡಿಮೆ? ಆದರೂ ನೀನು ಏದೆನಿನ ವೃಕ್ಷಗಳೊಂದಿಗೆ ಅಧೋಲೋಕಕ್ಕೆ ತಳ್ಳಲ್ಪಟ್ಟು ಸುನ್ನತಿಹೀನರ ನಡುವೆ ಖಡ್ಗಹತರ ಸಂಗಡ ಒರಗಿಹೋಗುವಿ. ಫರೋಹನೂ ಅವನ ಎಲ್ಲಾ ಪ್ರಜೆಗಳೂ ಇದೇ ಗತಿಯನ್ನು ಹೊಂದುವರು ಎಂಬದು ಕರ್ತನಾದ ಯೆಹೋವನ ನುಡಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಿಂದ ಐಗುಪ್ತದ ಅಸಂಖ್ಯಾತಪ್ರಜೆಯನ್ನು ಕೊನೆಗಾಣಿಸುವೆನು.


ಆಮೇಲೆ - ಇನ್ನೂ ನೀನು ಅನೇಕವಾಗಿರುವ ಪ್ರಜೆ ಜನ ಭಾಷೆ ರಾಜ ಇವರ ವಿಷಯದಲ್ಲಿ ಪ್ರವಾದನೆ ಹೇಳಬೇಕೆಂದು ನನಗೆ ತಿಳಿಸಲ್ಪಟ್ಟಿತು.


ಹೀಗಿರಲು ನೀನು ಎದ್ದು ನಡುಕಟ್ಟಿಕೊಂಡು ನಾನು ಆಜ್ಞಾಪಿಸುವದನ್ನೆಲ್ಲಾ ಅವರಿಗೆ ಹೇಳು. ನೀನು ಅವರಿಗೆ ಕಂಗೆಡಬೇಡ; ಕಂಗೆಟ್ಟರೆ ನಾನೂ ನಿನ್ನನ್ನು ಅವರ ಮುಂದೆ ಕಂಗೆಡಿಸುವೆನು.


ನಾನು ನಿನ್ನನ್ನು ಗರ್ಭದಲ್ಲಿ ರೂಪಿಸುವದಕ್ಕೆ ಮುಂಚೆ ನಿನ್ನನ್ನು ತಿಳಿದಿದ್ದೆನು; ನೀನು ಉದರದಿಂದ ಬರುವದಕ್ಕೆ ಮೊದಲೇ ನಿನ್ನನ್ನು ಪ್ರತಿಷ್ಠಿಸಿದ್ದೆನು; ಜನಾಂಗಗಳಿಗೆ ಪ್ರವಾದಿಯನ್ನಾಗಿ ನಿನ್ನನ್ನು ನೇವಿುಸಿದ್ದೇನೆ.


ಆ ರಾಜ್ಯವು ಸಮಸ್ತರಾಜ್ಯಗಳಲ್ಲಿ ಕನಿಷ್ಠವೆನಿಸಿಕೊಳ್ಳುವದು; ವಿುಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ತಲೆಯೆತ್ತದು; ಅದು ಜನಾಂಗಗಳ ಮೇಲೆ ಇನ್ನು ದೊರೆತನ ಮಾಡಲಾರದಂತೆ ನಾನು ಅದನ್ನು ಕ್ಷೀಣ ಗತಿಗೆ ತರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು