Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 31:4 - ಕನ್ನಡ ಸತ್ಯವೇದವು J.V. (BSI)

4 ಅದನ್ನು ಜಲಪ್ರವಾಹಗಳು ಬೆಳೆಯಿಸಿದವು, ಮಹಾನದಿಯು ವೃದ್ಧಿಗೊಳಿಸಿತು, ನದೀಶಾಖೆಗಳು ಅಲ್ಲಿನ ಉದ್ಯಾನವನ್ನು ಸುತ್ತಿಕೊಂಡಿದ್ದವು, ಭೂವಿುಯ ಎಲ್ಲಾ ಮರಗಳಿಗೂ ನದಿಯು ತನ್ನ ಕಾಲುವೆಗಳನ್ನು ಕೊಟ್ಟಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅದನ್ನು ಜಲಪ್ರವಾಹಗಳು ಬೆಳೆಯಿಸಿದವು, ಮಹಾನದಿಯು ವೃದ್ಧಿಗೊಳಿಸಿತು, ನದಿಗಳು ಅಲ್ಲಿನ ಉದ್ಯಾನವನ್ನು ಸುತ್ತಿಕೊಂಡಿದ್ದವು, ಭೂಮಿಯ ಎಲ್ಲಾ ಮರಗಳಿಗೂ ನದಿಯು ತನ್ನ ಕಾಲುವೆಗಳನ್ನು ನೀಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅದನ್ನು ಬೆಳೆಸಿದವು ಜಲಪ್ರವಾಹಗಳು ವೃದ್ಧಿಗೊಳಿಸಿತದನು ಮಹಾನದಿಯೊಂದು ಸುತ್ತಿಕೊಂಡಿದ್ದವು ಅಲ್ಲಿನ ಉದ್ಯಾನವನವನ್ನು ನದಿ ಶಾಖೆಗಳು ಮರಗಿಡಗಳಿಗೆ ನದಿ ನೀಡಿತ್ತು ತನ್ನ ಕಾಲುವೆಗಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀರು ಆ ಮರವನ್ನು ಬೆಳೆಯುವಂತೆ ಮಾಡಿತು. ನದಿಯು ಅದನ್ನು ಎತ್ತರವಾಗುವಂತೆ ಮಾಡಿತು. ಆ ಮರವು ನೆಡಲ್ಪಟ್ಟ ಸ್ಥಳದ ಸುತ್ತಲೂ ಹೊಳೆಯು ಹರಿಯುತ್ತಿದೆ. ಆ ಮರದಿಂದ ಬೇರೆ ಮರಗಳಿಗೆ ಸಣ್ಣ ಕಾಲುವೆಗಳು ಹೊರಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅದನ್ನು ಜಲಪ್ರವಾಹಗಳು ಬೆಳೆಸಿದವು, ಆಳವಾದ ಬುಗ್ಗೆಗಳು ಅದನ್ನು ಎತ್ತರಕ್ಕೆ ಬೆಳೆಸಿದವು. ಅವುಗಳ ತೊರೆಗಳು ಅದರ ಬುಡದ ಸುತ್ತಲೂ ಹರಿದು ತಮ್ಮ ಕಾಲುವೆಗಳನ್ನು ಹೊಲದ ಎಲ್ಲಾ ಮರಗಳಿಗೆ ಕಳುಹಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 31:4
7 ತಿಳಿವುಗಳ ಹೋಲಿಕೆ  

ಇನ್ನೂ ಆ ದೇವದೂತನು ನನಗೆ ಹೇಳಿದ್ದು - ಆ ಜಾರಸ್ತ್ರೀಯು ವಾಸಿಸಿರುವ ನೀರುಗಳನ್ನು ಕಂಡಿಯಲ್ಲ? ಅವು ಪ್ರಜೆ ಸಮೂಹ ಜನ ಭಾಷೆಗಳನ್ನು ಸೂಚಿಸುತ್ತವೆ.


ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತಾಡಿ - ಬಾ, ಬಹಳ ನೀರುಗಳ ಮೇಲೆ ವಾಸಿಸಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಿನಗೆ ತೋರಿಸುತ್ತೇನೆ;


ಅದು ಸೊಂಪಾದ ಲತೆಯಾಗಿ ರೆಂಬೆಗಳನ್ನು ಹರಡಿಸಿ ಫಲಕೊಡುವದಕ್ಕೆ ಅನುಕೂಲವಾದ ಒಳ್ಳೆಯ ನೀರಾವರಿಯ ನೆಲದಲ್ಲಿ ನಾಟಿಕೊಂಡಿತ್ತು.


ಆಮೇಲೆ - ಅದು ಆ [ದೇವದಾರು ಇದ್ದ] ದೇಶದ ಒಂದು ಬೀಜವನ್ನು ತೆಗೆದುಕೊಂಡು ಫಲವತ್ತಾದ ನೀರಾವರಿಯ ಭೂವಿುಯಲ್ಲಿ ನೆಟ್ಟು ನೀರವಂಜಿಯ ಹಾಗೆ ಬೆಳೆಯಿಸಿತು.


ಪ್ರಜೆಗಳ ವೃದ್ಧಿ ರಾಜನ ಮಹಿಮೆ; ಪ್ರಜೆಗಳ ಕ್ಷಯ ಪ್ರಭುವಿಗೆ ಭಯ.


ಆದದರಿಂದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನಿನ್ನ ಪಕ್ಷವಾಗಿ ವ್ಯಾಜ್ಯವಾಡಿ ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು; ಅದರ ಸರೋವರವು ಬತ್ತುವಂತೆಯೂ ಅದರ ಪ್ರವಾಹವು ಒಣಗುವಂತೆಯೂ ಮಾಡುವೆನು.


ಅಗಲವಾದ ರೆಕ್ಕೆಗಳುಳ್ಳ ತುಪ್ಪಳತುಂಬಿದ ಮತ್ತೊಂದು ದೊಡ್ಡ ಹದ್ದು ಇತ್ತು; ಇಗೋ, ಆ ದ್ರಾಕ್ಷಾಲತೆಯು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅದರ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ ತನ್ನ ರೆಂಬೆಗಳನ್ನು ಚಾಚಿ ಅದರಿಂದ ನೀರನ್ನು ಹಾರೈಸುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು