Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 31:5 - ಕನ್ನಡ ಸತ್ಯವೇದವು J.V. (BSI)

5 ಹೀಗಿರಲು ಆ ವೃಕ್ಷವು ಅಡವಿಯ ಎಲ್ಲಾ ಮರಗಳಿಗಿಂತಲೂ ಅತ್ಯುನ್ನತವಾಗಿತ್ತು; ಅದರ ಕೊಂಬೆಗಳು ನಿಬಿಡವಾಗಿದ್ದವು; ಅಲ್ಲಿ ನೀರಾವರಿಯಿದ್ದ ಕಾರಣ ಅದರ ರೆಂಬೆಗಳು ಉದ್ದವಾಗಿ ಚಾಚಿಕೊಂಡಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದುದರಿಂದ ಆ ವೃಕ್ಷವು ಅಡವಿಯ ಎಲ್ಲಾ ಮರಗಳಿಗಿಂತಲೂ ಎತ್ತರವಾಗಿತ್ತು; ಅದರ ಕೊಂಬೆಗಳು ಹಬ್ಬಿದ್ದುದರಿಂದ ಮತ್ತು ಹೆಚ್ಚಿನ ನೀರಾವರಿಯಿದ್ದ ಕಾರಣ ಅದರ ಕೊಂಬೆಗಳು ಅಧಿಕವಾದವು. ಕೊಂಬೆಗಳು ಉದ್ದವಾಗಿ ಚಾಚಿಕೊಂಡಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇಂತಿರಲು ವನವೃಕ್ಷಗಳಲೆಲ್ಲ ಆ ವೃಕ್ಷ ಅತ್ಯುನ್ನತವಾಗಿತ್ತು ಅದರ ರೆಂಬೆಗಳು ನಿಬಿಡವಾಗಿದ್ದವು, ಉದ್ದುದ್ದ ಚಾಚಿಕೊಂಡಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯಾಕೆಂದರೆ ಈ ಮರವು ಬೇರೆ ಮರಗಳಿಗಿಂತ ಉನ್ನತವಾಗಿ ಕಾಣಿಸಿಕೊಳ್ಳಲು, ಅದು ಅನೇಕ ಕೊಂಬೆಗಳನ್ನು ಬಿಟ್ಟಿತು. ಅಲ್ಲಿ ಬೇಕಾದಷ್ಟು ನೀರು ಇದ್ದುದರಿಂದ ಕೊಂಬೆಗಳು ಉದ್ದವಾಗಿಯೂ ವಿಶಾಲವಾಗಿಯೂ ಬೆಳೆದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದ್ದರಿಂದ ಅದರ ಎತ್ತರವು ಬಯಲಿನ ಎಲ್ಲಾ ಮರಗಳಿಗಿಂತ ಎತ್ತರವಾಗಿತ್ತು. ಅದು ಹಬ್ಬಿದ್ದುದರಿಂದ ಮತ್ತು ಹೆಚ್ಚು ನೀರಿನ ದೆಸೆಯಿಂದ ಅದರ ಕೊಂಬೆಗಳು ಅಧಿಕವಾದವು; ಅದರ ರೆಂಬೆಗಳು ಉದ್ದವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 31:5
9 ತಿಳಿವುಗಳ ಹೋಲಿಕೆ  

ಆ ವೃಕ್ಷವು ಬೆಳೆದು ಬಲಗೊಂಡಿತ್ತು. ಅದರ ತುದಿಯು ಆಕಾಶವನ್ನು ಮುಟ್ಟಿತ್ತು. ಅದು ಭೂಲೋಕದ ಕಟ್ಟಕಡೆಗೂ ಕಾಣಿಸುತ್ತಿತ್ತು.


ಆಮೇಲೆ - ಅದು ಆ [ದೇವದಾರು ಇದ್ದ] ದೇಶದ ಒಂದು ಬೀಜವನ್ನು ತೆಗೆದುಕೊಂಡು ಫಲವತ್ತಾದ ನೀರಾವರಿಯ ಭೂವಿುಯಲ್ಲಿ ನೆಟ್ಟು ನೀರವಂಜಿಯ ಹಾಗೆ ಬೆಳೆಯಿಸಿತು.


ರಬ್ಷಾಕೆಯು ಅವರಿಗೆ - ನೀವು ಹೋಗಿ ಮಹಾರಾಜನಾದ ಅಶ್ಶೂರದ ಅರಸನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿಸಿರಿ - ಈ ನಿನ್ನ ಭರವಸಕ್ಕೆ ಯಾವ ಆಧಾರವುಂಟು?


ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗಿರುವನು. ಅಂಥ ಮರವು ತಕ್ಕ ಕಾಲದಲ್ಲಿ ಫಲಕೊಡುತ್ತದಲ್ಲಾ; ಅದರ ಎಲೆ ಬಾಡುವದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವದು.


ಆಹಾ, ತಿಲಕವೋ ದೇವದಾರುವೋ ಒಂದು ವೃಕ್ಷವು ಲೆಬನೋನಿನಲ್ಲಿತ್ತು; ಅದರ ರೆಂಬೆಗಳು ಅಂದ, ಅದರ ನೆರಳು ದಟ್ಟ, ಅದರ ಎತ್ತರವು ಬಹಳ, ಅದರ ತುದಿಯು ಮೇಘಚುಂಬಿತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು