ಯೆಹೆಜ್ಕೇಲನು 31:6 - ಕನ್ನಡ ಸತ್ಯವೇದವು J.V. (BSI)6 ಎಲ್ಲಾ ಆಕಾಶಪಕ್ಷಿಗಳು ಅದರ ರೆಂಬೆಗಳಲ್ಲಿ ಗೂಡುಮಾಡಿಕೊಂಡಿದ್ದವು; ಸಮಸ್ತಭೂಜಂತುಗಳು ಅದರ ಕೊಂಬೆಗಳ ಕೆಳಗೆ ಇದ್ದುಕೊಂಡು ಮರಿಗಳನ್ನು ಈಯುತ್ತಿದ್ದವು; ಮಹಾಜನಾಂಗಗಳೆಲ್ಲಾ ಅದರ ನೆರಳನ್ನು ಆಶ್ರಯಿಸಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು; ಸಮಸ್ತ ಭೂಜಂತುಗಳು ಅದರ ಕೊಂಬೆಗಳ ಕೆಳಗೆ ಇದ್ದುಕೊಂಡು ಮರಿಗಳಿಗೆ ಜನ್ಮ ಕೊಟ್ಟವು. ಮಹಾಜನಾಂಗಗಳೆಲ್ಲಾ ಅದರ ನೆರಳಿನಲ್ಲಿ ವಾಸಮಾಡಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆ ರೆಂಬೆಗಳಲ್ಲಿ ಗೂಡುಮಾಡಿದ್ದವು ಆಕಾಶದ ಪಕ್ಷಿಗಳೆಲ್ಲವು ಅದರಡಿಯಲಿ ಮರಿಗಳನೀಯುತ್ತಿದ್ದವು ಭೂಜಂತುಗಳೆಲ್ಲವು ಅದರ ನೆರಳನಾಶ್ರಯಿಸುತ್ತಿದ್ದವು ಮಹಾಜನಾಂಗಗಳೆಲ್ಲವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅದರ ಕೊಂಬೆಗಳಲ್ಲಿ ಆಕಾಶದ ಪಕ್ಷಿಗಳು ಗೂಡುಗಳನ್ನು ಕಟ್ಟಿದವು. ಆ ಮರದ ಅಡಿಯಲ್ಲಿ ಪ್ರಾಣಿಗಳು ಮರಿಗಳನ್ನು ಈದವು. ಆ ಮರದ ನೆರಳಿನಲ್ಲಿ ಎಲ್ಲಾ ದೊಡ್ಡ ಜನಾಂಗಗಳು ವಾಸಿಸಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು. ಅದರ ರೆಂಬೆಗಳ ಕೆಳಗೆ ಬಯಲಿನ ಎಲ್ಲಾ ಮೃಗಗಳು ಮರಿಗಳಿಗೆ ಜನ್ಮ ಕೊಟ್ಟವು. ಅದರ ಕೆಳಗೆ ನೆರಳಿನಲ್ಲಿ ಎಲ್ಲಾ ಮಹಾಜನಾಂಗಗಳು ವಾಸಮಾಡಿದವು. ಅಧ್ಯಾಯವನ್ನು ನೋಡಿ |