ಯೆಹೆಜ್ಕೇಲನು 31:8 - ಕನ್ನಡ ಸತ್ಯವೇದವು J.V. (BSI)8 ದೇವರ ಉದ್ಯಾನವನದಲ್ಲಿನ ದೇವದಾರುಗಳು ಅದನ್ನು ಮುಚ್ಚಲಾರದೆ ಹೋದವು; ತುರಾಯಿಮರಗಳು ಅದರ ರೆಂಬೆಗಳಷ್ಟು ಉದ್ದವಾಗಿರಲಿಲ್ಲ; ಅತ್ತಿಮರಗಳು ಅದರ ಕೊಂಬೆಗಳಷ್ಟು ದಪ್ಪವಾಗಿರಲಿಲ್ಲ; ದೇವರ ವನದಲ್ಲಿನ ಯಾವ ಮರವೂ ಅದರಷ್ಟು ರಮಣೀಯವಾಗಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ದೇವರ ಉದ್ಯಾನವನದಲ್ಲಿನ ದೇವದಾರುಗಳು ಅದನ್ನು ಮರೆಮಾಡಲಿಲ್ಲ; ತುರಾಯಿ ಮರಗಳು ಅದರ ಕೊಂಬೆಗಳಿಗೆ ಸಮವಾಗಲಿಲ್ಲ; ಆಲದ ಮರಗಳು ಅದರ ಕೊಂಬೆಗಳಷ್ಟು ದಪ್ಪವಾಗಿರಲಿಲ್ಲ; ದೇವರ ವನದಲ್ಲಿನ ಯಾವ ಮರವೂ ಅದರಷ್ಟು ರಮಣೀಯವಾಗಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ದೇವೋದ್ಯಾನದ ಇತರ ದೇವದಾರುಗಳಿಂದ ಅದನು ಮುಚ್ಚಲಾಗಲಿಲ್ಲ. ತುರಾಯಿ ಮರಗಳು ಅದರ ರೆಂಬೆಗಳಷ್ಟು ಉದ್ದವಾಗಿರಲಿಲ್ಲ. ಅತ್ತಿಮರಗಳು ಅದರ ಕೊಂಬೆಗಳಷ್ಟು ದಪ್ಪವಾಗಿರಲಿಲ್ಲ. ದೇವರವನದಲ್ಲಿನ ಯಾವ ಮರವೂ ಅದರಷ್ಟು ರಮಣೀಯವಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ದೇವರ ತೋಟದಲ್ಲಿರುವ ದೇವದಾರು ಮರಗಳೂ ಈ ಮರದಷ್ಟು ಎತ್ತರವಾಗಿರಲಿಲ್ಲ. ಈ ಮಹಾ ಮರಕ್ಕಿರುವಷ್ಟು ಕೊಂಬೆಗಳು ಸೈಪ್ರಸ್ ಮರಗಳಿಗೂ ಇಲ್ಲ. ದೇವರ ತೋಟದಲ್ಲಿದ್ದ ಯಾವ ಮರವಾದರೂ ಇದರಷ್ಟು ಅಂದವಾಗಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ದೇವರ ತೋಟದ ದೇವದಾರುಗಳು ಅದನ್ನು ಮರೆಮಾಡಲಿಲ್ಲ. ತುರಾಯಿ ಮರಗಳು ಅದರ ಕೊಂಬೆಗಳಿಗೆ ಸಮವಾಗಲಿಲ್ಲ. ಆಲದ ಮರಗಳು ಅದರ ರೆಂಬೆಗಳಷ್ಟೂ ಇಲ್ಲ. ಆ ದೇವರ ತೋಟದ ಯಾವುದೇ ಮರವು ಇದರ ಸೌಂದರ್ಯಕ್ಕೆ ಸಮವಾಗಿಲ್ಲ. ಅಧ್ಯಾಯವನ್ನು ನೋಡಿ |