Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 32:10 - ಕನ್ನಡ ಸತ್ಯವೇದವು J.V. (BSI)

10 ಹೌದು, ಬಹುಜನಾಂಗಗಳು ನಿನ್ನ ಗತಿಗೆ ಬೆಚ್ಚಿಬೆರಗಾಗುವಂತೆ ಮಾಡುವೆನು; ನಾನು ನನ್ನ ಖಡ್ಗವನ್ನು ಅವುಗಳ ಅರಸರ ಕಣ್ಣೆದುರಿಗೆ ಬೀಸುವಾಗ ಅವರು ನಿನ್ನ ದುರ್ಗತಿಯನ್ನು ನೆನಸಿ ಭಯಭ್ರಾಂತರಾಗುವರು; ನಿನ್ನ ಪತನದಿನದಲ್ಲಿ ಪ್ರತಿಯೊಬ್ಬನು ತನ್ನ ತನ್ನ ಪ್ರಾಣಾಪಾಯಕ್ಕೆ ಕ್ಷಣಕ್ಷಣವೂ ನಡುಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಹೌದು, ಅನೇಕ ಜನಾಂಗಗಳು ನಿನ್ನ ವಿಷಯದಲ್ಲಿ ಬೆಚ್ಚಿಬೆರಗಾಗುವಂತೆ ಮಾಡುವೆನು, ನಾನು ನನ್ನ ಖಡ್ಗವನ್ನು ಅವುಗಳ ಅರಸರ ಕಣ್ಣೆದುರಿಗೆ ಬೀಸುವಾಗ, ಅವರು ನಿನ್ನ ದುರ್ಗತಿಯನ್ನು ನೆನಸಿ ಭಯಭ್ರಾಂತರಾಗುವರು; ನಿನ್ನ ಸೋಲಿನ ದಿನದಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣದ ಬಗ್ಗೆ ಕ್ಷಣಕ್ಷಣವೂ ನಡುಗುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹೌದು, ಬಹುರಾಷ್ಟ್ರಗಳು ನಿನ್ನ ಗತಿಗೆ ಬೆಚ್ಚಿಬೆರಗಾಗುವಂತೆ ಮಾಡುವೆನು; ನಾನು ನನ್ನ ಖಡ್ಗವನ್ನು ಅವುಗಳ ಅರಸರ ಕಣ್ಣೆದುರಿಗೆ ಬೀಳಿಸುವಾಗ ಅವರು ನಿನ್ನ ದುರ್ಗತಿಯನ್ನು ನೆನೆಸಿ ಭಯಭ್ರಾಂತರಾಗುವರು; ನಿನ್ನ ಪತನದಿಂದ ಪ್ರತಿಯೊಬ್ಬನು ತನ್ನ ಪ್ರಾಣಾಪಾಯಕ್ಕೆ ಕ್ಷಣಕ್ಷಣವು ನಡುಗುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅನೇಕ ಮಂದಿ ನಿನಗೆ ಸಂಭವಿಸಿದ್ದನ್ನು ನೋಡಿ ಚಕಿತರಾಗುವರು. ನಾನು ನಿನ್ನ ಕಡೆಗೆ ಖಡ್ಗ ಬೀಸುವಾಗ ಅವರ ಅರಸರು ಬಹಳ ಭಯಗ್ರಸ್ತರಾಗುವರು; ನೀನು ಬೀಳುವ ದಿವಸದಲ್ಲಿ ಅರಸರು ಹೆದರಿ ನಡುಗುವರು. ಪ್ರತಿಯೊಬ್ಬ ರಾಜನು ತನ್ನ ಜೀವವನ್ನು ಉಳಿಸಿಕೊಳ್ಳಲು ಆತುರಪಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾನು ಅನೇಕ ಜನರನ್ನು ನಿನ್ನ ವಿಷಯದಲ್ಲಿ ಭಯಭೀತಿಗೊಳ್ಳುವಂತೆ ಮಾಡುವೆನು, ನಾನು ಅವರ ಮುಂದೆ ನನ್ನ ಖಡ್ಗವನ್ನು ಬೀಸುವಾಗ ಅವರ ಅರಸರು ನಿನ್ನ ವಿಷಯದಲ್ಲಿ ಭಯಭ್ರಾಂತಿಗೊಳ್ಳುವರು. ನೀನು ಬೀಳುವ ಆ ದಿನದಲ್ಲಿ ಅವರು ಕ್ಷಣಕ್ಷಣಕ್ಕೆ ತಮ್ಮ ತಮ್ಮ ಪ್ರಾಣದ ಬಗ್ಗೆ ನಡುಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 32:10
11 ತಿಳಿವುಗಳ ಹೋಲಿಕೆ  

ಕರಾವಳಿಯ ಸಮಸ್ತನಿವಾಸಿಗಳು ನಿನ್ನ ಗತಿಗೆ ಬೆಚ್ಚಿಬಿದ್ದಿದ್ದಾರೆ; ರಾಜರು ಮೊಗಗೆಟ್ಟು ರೋಮಾಂಚಿತರಾಗಿದ್ದಾರೆ.


ಆಗ ಸಮುದ್ರದ ಸುತ್ತುಮುತ್ತಲಿನ ಸಕಲಪ್ರಭುಗಳು ತಮ್ಮ ಸಿಂಹಾಸನಗಳಿಂದಿಳಿದು ನಿಲುವಂಗಿಗಳನ್ನು ತೆಗೆದುಹಾಕಿ ಬೂಟೇದಾರಿಯ ವಸ್ತ್ರಗಳನ್ನು ಕಿತ್ತೆಸೆದು ತತ್ತರವನ್ನೇ ಹೊದ್ದುಕೊಂಡು ನೆಲದ ಮೇಲೆ ಕುಕ್ಕರಿಸಿ ಕ್ಷಣಕ್ಷಣವೂ ನಡುಗುತ್ತಾ ನಿನಗೆ ಬೆಚ್ಚಿ ಬೆರಗಾಗುವರು.


ಅಯ್ಯೋ, ಅಯ್ಯೋ, ಮಹಾಪಟ್ಟಣವೇ, ಬಾಬೆಲೇ, ಬಲಿಷ್ಠವಾದ ನಗರಿಯೇ, ನಿನಗೆ ವಿಧಿಸಲ್ಪಟ್ಟ ದಂಡನೆಯು ಒಂದೇ ಗಳಿಗೆಯಲ್ಲಿ ಬಂತಲ್ಲಾ ಎಂದು ಹೇಳುವರು.


ತುರಾಯಿ ಮರವೇ, ಗೋಳಾಡು! ದೇವದಾರು ಬಿದ್ದಿದೆ, ಶ್ರೇಷ್ಠವೃಕ್ಷಗಳು ನಾಶವಾಗಿವೆ. ಬಾಷಾನಿನ ಅಲ್ಲೋನ್ ಮರಗಳೇ, ಕಿರಚಿರಿ! ನುಗ್ಗಲಾಗದ ವನವು ಉರುಳಿದೆ.


ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣಮಾಡಿ ನಿಶ್ಚಿಂತರಾದ ಕೂಷ್ಯರನ್ನು ಹೆದರಿಸುವರು; ಐಗುಪ್ತದ ನಾಶನದಿನದಲ್ಲಿ ಕೂಷ್ಯರಿಗೂ ಸಂಕಟವಾಗುವದು; ಇಗೋ ಬಂತು.


ಬಾಬೆಲನ್ನು ಸ್ವಸ್ಥಮಾಡುವದಕ್ಕೆ ನಾವು ಪ್ರಯತ್ನಪಟ್ಟರೂ ಅದು ಸ್ವಸ್ಥವಾಗಲಿಲ್ಲ; ಬಾಬೆಲನ್ನು ಬಿಟ್ಟು ನಾವೆಲ್ಲರೂ ನಮ್ಮ ನಮ್ಮ ದೇಶಗಳಿಗೆ ಹೋಗೋಣ; ಅದು ಹೊಂದಬೇಕಾದ ದಂಡನೆಯು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿದೆ, ಹೌದು, ಗಗನದವರೆಗೂ ಬೆಳೆದಿದೆ.


ಉನ್ನತವಾದ ಈ ಮಂದಿರದ ಮಾರ್ಗವಾಗಿ ಹಾದುಹೋಗುವವರು ಅದನ್ನು ನೋಡಿ ವಿಸ್ಮಿತರಾಗಿ - ಅಬ್ಬಬ್ಬಾ, ಇದೇನು! ಯೆಹೋವನು ಈ ದೇಶವನ್ನೂ ಈ ಆಲಯವನ್ನೂ ಹೀಗೇಕೆ ಮಾಡಿದನು ಎಂದು ಕೇಳುವರು.


ಥಳಥಳಿಸುವ ನನ್ನ ಕತ್ತಿಯನ್ನು ನಾನು ಹದಮಾಡಿ ನ್ಯಾಯವನ್ನು ಸ್ಥಾಪಿಸುವದಕ್ಕೆ ಮುಂಗೊಂಡಾಗ ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು, ನನ್ನನ್ನು ದ್ವೇಷಿಸಿದವರಿಗೆ ಪ್ರತಿದಂಡನೆ ಮಾಡುವೆನು;


ಯೆಹೋವನು ಈ ದೇಶಕ್ಕೆ ಹೀಗೆ ಮಾಡಿದ್ದೇಕೆ? ಇಂಥ ಕೋಪಾಗ್ನಿಗೆ ಕಾರಣವೇನಿದ್ದೀತು? ಎಂಬದಾಗಿ ವಿಚಾರಿಸುವರು.


ಮತ್ತು ಯೆಹೋವನು ಸಂಕಲ್ಪಿಸಿದ ದಂಡದ ಪ್ರತಿಯೊಂದು ಪೆಟ್ಟೂ ದಮ್ಮಡಿ ಕಿನ್ನರಿಗಳ ನಾದದೊಡನೆ ಅವರ ಮೇಲೆ ಬೀಳುವದು. ಆತನು ಅವರೊಂದಿಗೆ ಹೋರಾಡುತ್ತಾ ಕೈಬೀಸಿ ಯುದ್ಧಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು