Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 32:23 - ಕನ್ನಡ ಸತ್ಯವೇದವು J.V. (BSI)

23 ಅವರ ಗೋರಿಗಳು ಅಧೋಲೋಕದ ಅಗಾಧಸ್ಥಳಗಳಲ್ಲಿ ಹರಡಿಕೊಂಡಿವೆ; ಅಶ್ಶೂರದವರು ಅಶ್ಶೂರದ ಗೋರಿಯ ಸುತ್ತಲಿದ್ದಾರೆ; ಜೀವಲೋಕದಲ್ಲಿ ಭೀಕರರಾಗಿದ್ದ ಇವರೆಲ್ಲರೂ ಸಂಹೃತರು, ಖಡ್ಗಹತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವರ ಗೋರಿಗಳು ಅಧೋಲೋಕದ ಅಗಾಧ ಸ್ಥಳಗಳಲ್ಲಿ ಹರಡಿಕೊಂಡಿವೆ; ಸಂಹೃತರಾದವರು, ಖಡ್ಗದಿಂದ ಹತರಾದವರು ಗೋರಿಯ ಸುತ್ತಲಿದ್ದಾರೆ; ಜೀವಲೋಕದಲ್ಲಿ ಹತರಾದವರು ಜೀವಿತರ ದೇಶದಲ್ಲಿ ಭಯವನ್ನು ಉಂಟುಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವರ ಗೋರಿಗಳು ಅಧೋಲೋಕದ ಅಗಾಧ ಸ್ಥಳಗಳಲ್ಲಿ ಹರಡಿಕೊಂಡಿವೆ; ಅವರು ಅಸ್ಸೀರಿಯದ ಗೋರಿಯ ಸುತ್ತಲಿದ್ದಾರೆ; ಜೀವಲೋಕದಲ್ಲಿ ಭೀಕರವಾಗಿದ್ದ ಇವರೆಲ್ಲರೂ ಸಂಹೃತರು, ಖಡ್ಗಹತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವರ ಸಮಾಧಿಗಳು ಕುಳಿಯ ಕಡೆಗಳಲ್ಲಿ ಇಡಲಾಗಿವೆ. ಅವಳ ಸೇನೆಯು ಸಮಾಧಿಯ ಸುತ್ತಲೂ ಇವೆ. ಜೀವಿತರ ದೇಶದಲ್ಲಿ ಭಯವನ್ನು ಹರಡಿದವರೆಲ್ಲರೂ ಖಡ್ಗದಿಂದ ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 32:23
14 ತಿಳಿವುಗಳ ಹೋಲಿಕೆ  

ಪುರಾತನಕಾಲದಲ್ಲಿ ಹಾಳಾದ ಪಟ್ಟಣಗಳಂತೆ ನಿನ್ನನ್ನು ಅಧೋಲೋಕಕ್ಕೆ ತಳ್ಳಿ ಪಾತಾಳಕ್ಕೆ ಇಳಿದ ಪೂರ್ವಕಾಲದವರೊಂದಿಗೆ ವಾಸಿಸಮಾಡುವೆನು; ಹೌದು, ನೀನು ನಿನ್ನ ಮಹಿಮೆಯನ್ನು ಜೀವಲೋಕದಲ್ಲಿ ನೆಲೆಗೊಳಿಸದೆ ನಿರ್ನಿವಾಸಿಯಾಗುವಂತೆ ನಿನ್ನನ್ನು ಪಾತಾಳಕ್ಕೆ ಇಳಿದವರ ಸಹವಾಸದಲ್ಲಿ ಸೇರಿಸುವೆನು.


ಇವರು ನಿನ್ನ ವಿಷಯದಲ್ಲಿ - ನಾವಿಕರ ನಿವಾಸವೇ, ಹೆಸರುವಾಸಿಯ ಪುರಿಯೇ, ಸಮುದ್ರದಿಂದ ಬಲಗೊಂಡ ನಗರಿಯೇ, ನೀನು ಎಷ್ಟೋ ಹಾಳಾದಿ! ಸಮುದ್ರಸಂಚಾರಿಗಳಿಗೆಲ್ಲಾ ಭಯಾಸ್ಪದರಾಗಿದ್ದ ನಿನ್ನ ನಿವಾಸಿಗಳು ಎಷ್ಟೋ ಹಾಳಾದರು!


ಜೀವಲೋಕದಲ್ಲಿಯೇ ಯೆಹೋವನ ದಯೆಯನ್ನು ಅನುಭವಿಸುವೆನೆಂದು ದೃಢವಾಗಿ ನಂಬಿದ್ದೇನೆ.


ಇಗೋ, ಜೀವಲೋಕದಲ್ಲಿ ನಾನು ನನ್ನ ಭಯವನ್ನು ಹುಟ್ಟಿಸಿದ್ದೇನೆ; ಫರೋಹನೂ ಅವನ ಸಮಸ್ತ ಪ್ರಜೆಯೂ ಸುನ್ನತಿಹೀನರ ಮಧ್ಯೆ, ಖಡ್ಗಹತರ ನಡುವೆ, ಒರಗಿಹೋಗುವರು ಎಂಬದು ಕರ್ತನಾದ ಯೆಹೋವನ ನುಡಿ.


ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಗೆ ಸಮಾನನಾಗಿದ್ದೆನು; ಮರವನ್ನು ಫಲಸಹಿತವಾಗಿ ನಾಶಪಡಿಸೋಣ, ಇವನು ನಿರ್ನಾಮವಾಗುವಂತೆ ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ ಎಂದು ಅವರು ನನಗೆ ವಿರುದ್ಧವಾಗಿ ಕುಯುಕ್ತಿಗಳನ್ನು ಕಲ್ಪಿಸಿದ್ದು ನನಗೆ ತಿಳಿದಿರಲಿಲ್ಲ.


ನಾನು ಇನ್ನು ಜೀವಲೋಕದವನಾಗಿ ಯಾಹು ಯೆಹೋವನ ದರ್ಶನವನ್ನು ಹೊಂದೆನಲ್ಲಾ, ಇನ್ನು ಭೂಲೋಕ ನಿವಾಸಿಗಳಲ್ಲೊಬ್ಬನಾಗಿ ಮನುಷ್ಯರನ್ನು ದೃಷ್ಟಿಸಲಾರೆನಲ್ಲಾ.


ಯೆಹೋವನೇ, ನಾನು ನಿನಗೆ - ನೀನೇ ನನ್ನ ಶರಣನೂ ಜೀವಲೋಕದಲ್ಲಿ ನನ್ನ ಪಾಲೂ ಆಗಿದ್ದೀ ಎಂದು ಕೂಗಿ ಮೊರೆಯಿಟ್ಟಿದ್ದೇನೆ.


ನೀನು ನನ್ನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ ಕಣ್ಣೀರನ್ನು ನಿಲ್ಲಿಸಿ ನನ್ನ ಪಾದಗಳನ್ನು ಎಡವದಂತೆ ಕಾದಿದ್ದೀ.


ಅದರ ಕ್ರಯವು ಯಾರಿಗೂ ಗೊತ್ತಿಲ್ಲ, ಜೀವಲೋಕದಲ್ಲಿ ಅದನ್ನು ಯಾರೂ ಕಂಡುಕೊಳ್ಳಲಾರರು.


[ಅಶ್ಶೂರವೇ,] ನಿನ್ನ ಹೆಸರಿನ ಸಂತಾನ ಬೀಜವು ಇನ್ನು ಬಿತ್ತಲ್ಪಡಬಾರದೆಂದು ಯೆಹೋವನಾದ ನಾನು ಆಜ್ಞಾಪಿಸಿದ್ದೇನೆ; ನಿನ್ನ ದೇವರ ಮಂದಿರದೊಳಗಿಂದ ಕೆತ್ತಿದ ವಿಗ್ರಹವನ್ನೂ ಎರಕದ ಬೊಂಬೆಯನ್ನೂ ಕಡಿದುಬಿಡುವೆನು; ನಿನಗೆ ಗೋರಿಯನ್ನು ಸಿದ್ಧಮಾಡುವೆನು; ನೀನು ತುಚ್ಫ,


ಪಟ್ಟಣಗಳನ್ನು ಕೆಡವಿ ಲೋಕವನ್ನು ಕಾಡನ್ನಾಗಿ ಮಾಡಿ ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದವನು ಇವನೋ? ಅಂದುಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು