Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 32:25 - ಕನ್ನಡ ಸತ್ಯವೇದವು J.V. (BSI)

25 ಏಲಾಮು ಮಲಗುವದಕ್ಕೆ ಹತರಾದ ಅದರ ಪ್ರಜೆಗಳೆಲ್ಲರ ನಡುವೆ ಸ್ಥಳವನ್ನು ಏರ್ಪಡಿಸಿದ್ದಾರೆ, ಅವರ ಗೋರಿಗಳು ಅದರ ಸುತ್ತುಮುತ್ತಲಿವೆ; ಅವರೆಲ್ಲರೂ ಸುನ್ನತಿಹೀನರು, ಖಡ್ಗಹತರು; ಅವರು ಜೀವಲೋಕದಲ್ಲಿ ಭೀಕರರಾಗಿದ್ದು ಪ್ರೇತಗಳ ಜೊತೆಗೆ ಸೇರಿ ಅವಮಾನಪಟ್ಟವರಾಗಿದ್ದಾರೆ; ಸಂಹೃತರ ಮಧ್ಯದಲ್ಲೇ ಏಲಾವಿುಗೆ ಸ್ಥಳವು ಏರ್ಪಾಟಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಏಲಾಮು ಮಲಗುವುದಕ್ಕೆ ಹತರಾದ ಅದರ ಸಮೂಹಕ್ಕೆ ಸ್ಥಳವನ್ನು ಏರ್ಪಡಿಸಿದ್ದಾರೆ, ಅವರ ಗೋರಿಗಳು ಅದರ ಸುತ್ತುಮುತ್ತಲಿವೆ; ಅವರೆಲ್ಲರೂ ಸುನ್ನತಿಹೀನರು, ಖಡ್ಗದಿಂದ ಹತರಾದವರು; ಅವರು ಜೀವಲೋಕದಲ್ಲಿ ಭೀಕರರಾಗಿದ್ದು, ಪ್ರೇತಗಳ ಜೊತೆಗೆ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ. ಸಂಹೃತರ ಮಧ್ಯದಲ್ಲೇ ಏಲಾಮಿಗೆ ಸ್ಥಳವು ಏರ್ಪಾಡಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಏಲಾಮು ಮಲಗುವುದಕ್ಕೆ, ಹತರಾದ ಅದರ ಪ್ರಜೆಗಳೆಲ್ಲರ ನಡುವೆ ಸ್ಥಳವನ್ನು ಏರ್ಪಡಿಸಿದ್ದಾರೆ, ಅವರ ಗೋರಿಗಳು ಅದರ ಸುತ್ತಮುತ್ತಲಿವೆ. ಅವರೆಲ್ಲರೂ ಸುನ್ನತಿಹೀನರು, ಖಡ್ಗಹತರು; ಅವರು ಜೀವಲೋಕದಲ್ಲಿ ಭೀಕರರಾಗಿದ್ದು ಪ್ರೇತಗಳ ಜೊತೆಗೆ ಸೇರಿ ಅವಮಾನಪಟ್ಟವರಾಗಿದ್ದಾರೆ. ಸಂಹೃತರ ಮಧ್ಯದಲ್ಲೇ ಏಲಾಮಿಗೆ ಸ್ಥಳ ಏರ್ಪಾಡಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಏಲಾಮ್ ಮತ್ತು ಯುದ್ಧದಲ್ಲಿ ಮಡಿದ ಅದರ ಎಲ್ಲಾ ಸೈನಿಕರಿಗೂ ಅಲ್ಲಿ ಅವರು ಹಾಸಿಗೆಯನ್ನು ಸಿದ್ಧಮಾಡಿದರು. ಏಲಾಮಿನ ಸೈನ್ಯವು ಅದರ ಸಮಾಧಿಯ ಸುತ್ತಲೂ ಇವೆ. ಅವರೆಲ್ಲಾ ರಣರಂಗದಲ್ಲಿ ಸತ್ತವರು. ಅವರು ಜೀವದಿಂದಿರುವಾಗ ಜನರನ್ನು ಹೆದರಿಸಿದ್ದರು. ಆದರೆ ಅವರೀಗ ತಮ್ಮ ನಾಚಿಕೆಯೊಂದಿಗೆ ಪಾತಾಳ ಸೇರಿದ್ದಾರೆ. ಅವರು ಸತ್ತವರೊಂದಿಗೆ ಸೇರಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅವರು ಅವರ ಎಲ್ಲಾ ಸಮೂಹಕ್ಕೂ ಹತರಾದವರ ಮಧ್ಯದಲ್ಲಿ ಹಾಸಿಗೆ ಹಾಕಿದ್ದಾರೆ. ಅದರ ಸುತ್ತಲೂ ಅವರ ಸಮಾಧಿಗಳಿವೆ. ಅವರೆಲ್ಲರೂ ಸುನ್ನತಿಯಿಲ್ಲದವರಾಗಿ ಮತ್ತು ಖಡ್ಗದಿಂದ ಹತರಾಗಿದ್ದಾರೆ. ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದರೂ ಕುಳಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡು ಹತರಾದವರ ಮಧ್ಯದಲ್ಲಿ ಇಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 32:25
11 ತಿಳಿವುಗಳ ಹೋಲಿಕೆ  

ಮೇಲಣ ಲೋಕಕ್ಕೆ ಏರಿಹೋದರೆ ಅಲ್ಲಿ ನೀನಿರುತ್ತೀ; ಪಾತಾಳಕ್ಕೆ ಹೋಗಿ ಮಲಗಿಕೊಂಡೇನಂದರೆ ಅಲ್ಲಿಯೂ ನೀನಿರುವಿ.


ಇಗೋ, ಅವಳು ಹಾಸಿಗೆಯ ಮೇಲೆ ಬಿದ್ದುಕೊಂಡಿರುವಂತೆ ಮಾಡುವೆನು, ಮತ್ತು ಅವಳೊಂದಿಗೆ ವ್ಯಭಿಚಾರ ಮಾಡುವವರು ತಮ್ಮ ಮನಸ್ಸನ್ನು ದೇವರ ಕಡಗೆ ತಿರುಗಿಸಿಕೊಂಡು ಅವಳ ಕೃತ್ಯಗಳನ್ನು ಬಿಟ್ಟುಬಿಡದೆ ಹೋದರೆ ಮಹಾ ಸಂಕಟದಲ್ಲಿ ಬೀಳುವಂತೆ ಮಾಡುವೆನು.


ಚಂಡಿಗಳೇ, ಮನಶ್ಶುದ್ಧಿಯೂ ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ಯರಲ್ಲಿ ಸೇರಿಕೊಂಡಿರುವ ಮ್ಲೇಚ್ಫರೊಳಗೆ ತನುಮನಗಳಲ್ಲಿ ಸುನ್ನತಿಹೀನನಾದ ಯಾವನೂ ನನ್ನ ಪವಿತ್ರಾಲಯವನ್ನು ಪ್ರವೇಶಿಸಕೂಡದು.


ಇಸ್ರಾಯೇಲ್ ವಂಶದವರೇ, ನೀವು ನನ್ನ ಆಹಾರವಾದ ರಕ್ತಮೇದಸ್ಸುಗಳನ್ನು ಅರ್ಪಿಸುವಾಗ ತನುಮನಗಳಲ್ಲಿ ಸುನ್ನತಿಹೀನರಾದ ಮ್ಲೇಚ್ಫರನ್ನು ನನ್ನ ಪವಿತ್ರಾಲಯದೊಳಗೆ ಬರಮಾಡಿ ನನ್ನ ಮಂದಿರವನ್ನು ಹೊಲೆಗೆಡಿಸಿ ನನ್ನ ಒಡಂಬಡಿಕೆಯನ್ನು ಭಂಗಪಡಿಸಿ ನಿಮ್ಮ ಅವಿುತದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ;


ಪಾತಾಳದೊಳಗಿನ ಬಲಿಷ್ಠಶೂರರು ಅದನ್ನೂ ಅದರ ಸಹಾಯಕರನ್ನೂ ನೋಡಿ ಓಹೋ, ಇವರು ಸುನ್ನತಿಹೀನರು, ಖಡ್ಗಹತರು, ಇಳಿದುಬಂದು ಒರಗಿಬಿದ್ದರು ಅಂದುಕೊಳ್ಳುವರು.


[ಐಗುಪ್ತವೇ,] ನೀನು ಸೌಂದರ್ಯದಲ್ಲಿ ಯಾರಿಗೆ ಕಡಿಮೆ? ಇಳಿದು ಹೋಗಿ ಸುನ್ನತಿಹೀನರ ನಡುವೆ ಒರಗು.


ಆದದರಿಂದ ಸೌಲನು ಭೀತನಾಗಿ ತನ್ನ ಆಯುಧವಾಹಕನಿಗೆ - ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು; ಇಲ್ಲವಾದರೆ ಸುನ್ನತಿಯಿಲ್ಲದ ಈ ಜನರು ಬಂದು ನನಗೆ ಅಪಕೀರ್ತಿಯನ್ನುಂಟು ಮಾಡಾರು ಎಂದು ಹೇಳಲು ಅವನು ಹೆದರಿ ಒಲ್ಲೆನು ಅಂದನು. ಆದದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು ಅದರ ಮೇಲೆ ಬಿದ್ದನು.


ಈ ಸಂಗತಿಯನ್ನು ಗತ್ ಊರಿನಲ್ಲಿ ತಿಳಿಸಬೇಡಿರಿ; ಅಷ್ಕೆಲೋನಿನ ಬೀದಿಗಳಲ್ಲಿ ಸಾರಬೇಡಿರಿ. ಫಿಲಿಷ್ಟಿಯರ ಹೆಂಗಸರು ಸಂತೋಷಿಸಾರು; ಸುನ್ನತಿಯಿಲ್ಲದವರ ಸ್ತ್ರೀಯರು ಉಲ್ಲಾಸಿಸಾರು.


ಏಲಾಮು ಅಲ್ಲಿದೆ; ಅದರ ಪ್ರಜೆಯೆಲ್ಲಾ ಅದರ ಗೋರಿಯನ್ನು ಸುತ್ತಿಕೊಂಡಿದೆ; ಅವರೆಲ್ಲರೂ ಸಂಹೃತರು, ಖಡ್ಗಹತರು; ಜೀವಲೋಕದಲ್ಲಿ ಭೀಕರರಾಗಿದ್ದ ಆ ಸುನ್ನತಿಹೀನರು ಅಧೋಲೋಕಕ್ಕೆ ಇಳಿದು ಪ್ರೇತಗಳ ನಡುವೆ ಅವಮಾನಪಟ್ಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು