ಯೆಹೆಜ್ಕೇಲನು 32:27 - ಕನ್ನಡ ಸತ್ಯವೇದವು J.V. (BSI)27 [ಪೂರ್ವದಲ್ಲಿ] ಯಾವ ಸುನ್ನತಿಹೀನ ಶೂರರು ಜೀವಲೋಕದೊಳಗೆ ಬಲಿಷ್ಠರಿಗೂ ಭೀಕರರಾಗಿದ್ದು ಹತರಾಗಿ ಆಯುಧಸಹಿತ ಪಾತಾಳಕ್ಕೆ ಇಳಿದು ಕತ್ತಿಗಳನ್ನು ತಲೆಗಿಂಬುಮಾಡಿಕೊಂಡು ತಮ್ಮ ಅಸ್ಥಿಗಳ ಮೇಲೆ ತಮ್ಮ ದುಷ್ಕೃತ್ಯಗಳ ಭಾರವನ್ನು ಹೊತ್ತುಕೊಂಡಿದ್ದಾರೋ ಅವರ ನಡುವೆ ಮೆಷೆಕಿನವರೂ ತೂಬಲಿನವರೂ ಒರಗದೆ ಹೋಗುವರೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಸುನ್ನತಿಯಿಲ್ಲದವರಲ್ಲಿ ಶೂರರು ಜೀವಲೋಕದೊಳಗೆ ಬಲಿಷ್ಠರಿಗೂ ಭೀಕರರಾಗಿದ್ದು ಹತರಾಗಿ, ಆಯುಧ ಸಹಿತ ಪಾತಾಳಕ್ಕೆ ಇಳಿದು, ಕತ್ತಿಗಳನ್ನು ತಲೆದಿಂಬು ಮಾಡಿಕೊಂಡು, ತಮ್ಮ ಎಲಬುಗಳ ಮೇಲೆ ತಮ್ಮ ದುಷ್ಕೃತ್ಯಗಳ ಭಾರವನ್ನು ಹೊತ್ತುಕೊಂಡಿದ್ದಾರೋ ಅವರ ನಡುವೆ ಮೆಷೆಕಿನವರೂ ತೂಬಲಿನವರೂ ಒರಗದೆ ಹೋಗುವರೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಪೂರ್ವದಲ್ಲಿ ಯಾವ ಸುನ್ನತಿಹೀನ ಶೂರರು, ಜೀವಲೋಕದೊಳಗೆ ಬಲಿಷ್ಠರಿಗೂ ಭೀಕರರಾಗಿದ್ದು, ಹತರಾಗಿ ಆಯುಧ ಸಹಿತ ಪಾತಾಳಕ್ಕೆ ಇಳಿದು, ಕತ್ತಿಗಳನ್ನು ತಲೆದಿಂಬು ಮಾಡಿಕೊಂಡು, ತಮ್ಮ ಅಸ್ಥಿಗಳ ಮೇಲೆ ತಮ್ಮ ದುಷ್ಕೃತ್ಯಗಳ ಭಾರವನ್ನು ಹೊತ್ತುಕೊಂಡಿದ್ದರೋ ಅವರ ನಡುವೆ ಮೆಷೆಕಿನವರೂ, ತೂಬಲಿನವರೂ ನೆಲಸದೆಹೋಗುವರೇ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಈಗ ಅವರು ಬಹಳ ಕಾಲದ ಹಿಂದೆ ಸತ್ತ ವೀರರೊಂದಿಗೆ ಬಿದ್ದುಕೊಂಡಿದ್ದಾರೆ. ಅವರು ತಮ್ಮ ಆಯುಧಗಳೊಂದಿಗೆ ಹೂಣಿಡಲ್ಪಟ್ಟರು. ಅವರ ತಲೆಯ ಕೆಳಗೆ ಅವರ ಕತ್ತಿಯು ಇಡಲ್ಪಟ್ಟಿತ್ತು. ಆದರೆ ಅವರ ಪಾಪವು ಅವರ ಎಲುಬುಗಳಲ್ಲಿವೆ. ಯಾಕೆಂದರೆ ಅವರು ಜೀವಿಸಿದ್ದಾಗ ಜನರನ್ನು ಭಯಪಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಸುನ್ನತಿಯಿಲ್ಲದವರಲ್ಲಿ ಬಿದ್ದಂತ ತಮ್ಮ ಯುದ್ಧದ ಆಯುಧಗಳ ಸಂಗಡ ಪಾತಾಳಕ್ಕೆ ಇಳಿದಂತಹ ಶೂರರ ಸಂಗಡ ಇವರು ಮಲಗಬೇಡವೇ? ಅವರು ತಮ್ಮ ಖಡ್ಗಗಳನ್ನು ತಮ್ಮ ತಲೆಗಳ ಕೆಳಗೆ ಇಟ್ಟುಕೊಂಡಿದ್ದಾರೆ. ಅವರ ಗುರಾಣಿಗಳು ಅವರ ಮೂಳೆಗಳ ಮೇಲೆ ಇಡಲಾದವು. ಅವರು ಜೀವಿತರ ದೇಶದಲ್ಲಿ ಶೂರರಿಗೆ ಭಯಂಕರರಾಗಿದ್ದರೂ ಅವರ ಅಕ್ರಮಗಳು ಅವರ ಎಲುಬುಗಳ ಮೇಲೆ ಇರುವುವು. ಅಧ್ಯಾಯವನ್ನು ನೋಡಿ |