ಯೆಹೆಜ್ಕೇಲನು 32:32 - ಕನ್ನಡ ಸತ್ಯವೇದವು J.V. (BSI)32 ಇಗೋ, ಜೀವಲೋಕದಲ್ಲಿ ನಾನು ನನ್ನ ಭಯವನ್ನು ಹುಟ್ಟಿಸಿದ್ದೇನೆ; ಫರೋಹನೂ ಅವನ ಸಮಸ್ತ ಪ್ರಜೆಯೂ ಸುನ್ನತಿಹೀನರ ಮಧ್ಯೆ, ಖಡ್ಗಹತರ ನಡುವೆ, ಒರಗಿಹೋಗುವರು ಎಂಬದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 “ಇಗೋ, ಜೀವಲೋಕದಲ್ಲಿ ನಾನು ನನ್ನ ಭಯವನ್ನು ಹುಟ್ಟಿಸಿದ್ದೇನೆ; ಫರೋಹನೂ ಮತ್ತು ಅವನ ಸಮಸ್ತ ಪ್ರಜೆಯೂ ಸುನ್ನತಿಹೀನರ ಮಧ್ಯೆ, ಖಡ್ಗದಿಂದ ಹತರಾದವರ ನಡುವೆ ಮಲಗುವರು” ಎಂಬುದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 “ಇಗೋ, ಜೀವಲೋಕದಲ್ಲಿ ನಾನು ನನ್ನ ಭಯವನ್ನು ಹುಟ್ಟಿಸಿದ್ದೇನೆ; ಫರೋಹನೂ ಅವನ ಸಮಸ್ತ ಪ್ರಜೆಯೂ ಸುನ್ನತಿಹೀನರ ಮಧ್ಯೆ ಖಡ್ಗಹತರ ನಡುವೆ ಸೇರಿಹೋಗುವರು,” ಎಂಬುದು ಸರ್ವೇಶ್ವರನಾದ ದೇವರ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 “ಫರೋಹನು ತನ್ನ ಕಾಲದಲ್ಲಿ ಜನರನ್ನು ಭಯಗೊಳಿಸಿದ್ದನು. ಈಗಲಾದರೋ, ಫರೋಹನೂ ಅವನ ಸೈನಿಕರೂ ಪರದೇಶದವರೊಂದಿಗೆ ಮತ್ತು ಯುದ್ಧದಲ್ಲಿ ಹತರಾದವರೊಂದಿಗೆ ಬಿದ್ದುಕೊಳ್ಳುವರು.” ನನ್ನ ಒಡೆಯನಾದ ಯೆಹೋವನ ನುಡಿಗಳಿವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಏಕೆಂದರೆ ನಾನು ಜೀವಿತರ ದೇಶದಲ್ಲಿ ಭಯವನ್ನು ಉಂಟುಮಾಡಿದ್ದೇ. ಆ ಫರೋಹನೂ ಅವನ ಎಲ್ಲಾ ಸಮೂಹದ ಸಹಿತವಾಗಿ ಖಡ್ಗದಿಂದ ಹತರಾದವರ ಸಂಗಡ, ಸುನ್ನತಿಯಿಲ್ಲದವರ ನಡುವೆ ಸೇರಿಹೋಗುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.” ಅಧ್ಯಾಯವನ್ನು ನೋಡಿ |