Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 32:6 - ಕನ್ನಡ ಸತ್ಯವೇದವು J.V. (BSI)

6 ನಿನ್ನ ರಕ್ತ ಪ್ರವಾಹದಿಂದ ದೇಶವನ್ನು ಬೆಟ್ಟಗಳ ತನಕ ತೋಯಿಸುವೆನು; ಹಳ್ಳಗಳು ನಿನ್ನಿಂದ ತುಂಬುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಿನ್ನ ರಕ್ತಪ್ರವಾಹದಿಂದ ದೇಶವನ್ನು ಬೆಟ್ಟಗಳ ತನಕ ತೋಯಿಸುವೆನು; ಹಳ್ಳಗಳು ನಿನ್ನ ರಕ್ತದಿಂದ ತುಂಬುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ತೋಯಿಸುವೆನು ಸಮನಾಡನು ನಿನ್ನ ರಕ್ತಪ್ರವಾಹದಿಂದ, ಹಳ್ಳಕೊಳ್ಳಗಳು ತುಂಬಿ ತುಳುಕುವುವು ಅದರಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಿನ್ನ ರಕ್ತವನ್ನು ಪರ್ವತಗಳ ಮೇಲೆ ಚೆಲ್ಲುವೆನು, ಅದು ನೆಲವನ್ನು ಒದ್ದೆ ಮಾಡುವದು. ಹೊಳೆಗಳಲ್ಲಿ ನೀನು ತುಂಬಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ನಿನ್ನ ರಕ್ತ ಪ್ರವಾಹದಿಂದ ದೇಶವನ್ನು ಬೆಟ್ಟಗಳ ತನಕ ತೋಯಿಸುವೆನು. ಹಳ್ಳಗಳು ನಿನ್ನ ಮಾಂಸದಿಂದ ತುಂಬುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 32:6
7 ತಿಳಿವುಗಳ ಹೋಲಿಕೆ  

ಅವರಲ್ಲಿ ಹತರಾದವರು ಬಿಸಾಡಲ್ಪಡುವರು, ಅವರ ಶವಗಳ ದುರ್ವಾಸನೆಯು ಮೇಲಕ್ಕೆ ಬಡಿಯುವದು; ಅವರ ರಕ್ತಪ್ರವಾಹದಿಂದ ಗುಡ್ಡಗಳು ಕರಗುವವು.


ಅದನ್ನು ಪಟ್ಟಣದ ಹೊರಗೆ ಆ ತೊಟ್ಟಿಯಲ್ಲಿ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಆಳವಾಗಿ ಇನ್ನೂರು ಮೈಲಿ ದೂರ ಹರಿಯಿತು.


ಈ ಯಜ್ಞಪಶುಗಳೊಂದಿಗೆ ಕಾಡುಕೋಣಗಳೂ ಹೋರಿಗೂಳಿಗಳೂ ಬರುವವು; ಆ ದೇಶವು ರಕ್ತದಿಂದ ನೆನೆಯುವದು, ಅಲ್ಲಿನ ದೂಳು ಕೊಬ್ಬಿನಿಂದ ಜಿಡ್ಡಾಗುವದು.


ಆದದರಿಂದ ಯೆಹೋವನು ಮತ್ತೆ ಹೇಳುವದೇನಂದರೆ - ನೀನು ನನ್ನನ್ನು ಯೆಹೋವನೆಂದು ತಿಳಿದುಕೊಳ್ಳುವದಕ್ಕಾಗಿ ನನ್ನ [ಸೇವಕನ] ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡಿಸುವೆನು; ಆಗ ಅದು ರಕ್ತವಾಗುವದು.


ಅವರು ದೇವಜನರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ; ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ಕೇಳಿದೆನು.


ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯಮಾಡುವೆನು, ರಕ್ತದ ಕೋಡಿಯು ನಿನ್ನನ್ನು ಹಿಂದಟ್ಟುವದು; ನೀನು ರಕ್ತಸುರಿಸುವದಕ್ಕೆ ಹೇಸದೆ ಹೋದಕಾರಣ ರಕ್ತಪ್ರವಾಹವೇ ನಿನ್ನ ಬೆನ್ನಹತ್ತುವದು; ಇದು ಕರ್ತನಾದ ಯೆಹೋವನ ನುಡಿ.


ನಿನ್ನ ಪರ್ವತಗಳನ್ನು ನಿನ್ನವರ ಶವಗಳಿಂದ ತುಂಬಿಸುವೆನು; ಖಡ್ಗಹತರು ನಿನ್ನ ಗುಡ್ಡ ತಗ್ಗು ತೊರೆಗಳಲ್ಲಿ ಬಿದ್ದುಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು