ಯೆಹೆಜ್ಕೇಲನು 33:11 - ಕನ್ನಡ ಸತ್ಯವೇದವು J.V. (BSI)11 ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲೇಶವಾದರೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವದೇ ನನಗೆ ಸಂತೋಷ. ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿರಿ, ಬಿಟ್ಟುಬಿಡಿರಿ; ನೀವು ಸಾಯಲೇಕೆ? ಇದು ಕರ್ತನಾದ ಯೇಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟುಬಿಡಲಿ; ಇಸ್ರಾಯೇಲಿನ ಮನೆತನದವರೇ ನೀವು ಏಕೆ ಸಾಯಬೇಕು?’” ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲವಲೇಶವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿ, ಬಿಟ್ಟುಬಿಡಿ; ನೀವು ಏಕೆ ಸಾಯಬೇಕು?” ಇದು ಸರ್ವೇಶ್ವರನಾದ ದೇವರ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ಆಗ ನೀನು ಅವರಿಗೆ ಹೀಗೆ ಹೇಳಬೇಕು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನನ್ನ ಜೀವದಾಣೆ, ನಾನು ಜನರು ಸಾಯುವುದನ್ನು ನೋಡಲು ಇಷ್ಟಪಡುವದಿಲ್ಲ; ದುಷ್ಟರು ಸಾಯುವದರಲ್ಲಿಯೂ ನನಗೆ ಇಷ್ಟವಿಲ್ಲ. ಆ ದುಷ್ಟರು ನನ್ನ ಕಡೆಗೆ ತಿರುಗಬೇಕೆಂದು ನಾನು ಇಷ್ಟಪಡುತ್ತೇನೆ. ಅವರು ತಮ್ಮ ದುರ್ನಡತೆಯನ್ನು ಬಿಟ್ಟು ನಿಜವಾದ ಜೀವನವನ್ನು ನಡೆಸಬೇಕು. ಆದ್ದರಿಂದ ನನ್ನ ಬಳಿಗೆ ಹಿಂದಿರುಗಿ ಬನ್ನಿರಿ. ದುಷ್ಟತನವನ್ನು ಬಿಟ್ಟುಬಿಡಿರಿ. ಇಸ್ರೇಲ್ ಜನರೇ, ನೀವು ಯಾಕೆ ಸಾಯುತ್ತೀರಿ?’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವರಿಗೆ ಹೇಳು, ‘ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷವಾಗುವುದಿಲ್ಲ. ಆದರೆ ಆ ದುಷ್ಟನು ದುರ್ಮಾರ್ಗದಿಂದ ತಿರುಗಿಕೊಂಡು ಜೀವಿಸುವುದಾದರೆ ಅದರಲ್ಲಿಯೇ ನನಗೆ ಸಂತೋಷ ಸಿಗುವುದು; ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿಕೊಳ್ಳಿರಿ. ನೀವು ಸಾಯುವುದು ಏಕೆ? ಇದು ಸಾರ್ವಭೌಮ ಯೆಹೋವ ದೇವರ ವಾಕ್ಯ.’ ಅಧ್ಯಾಯವನ್ನು ನೋಡಿ |
ಇಸ್ರಾಯೇಲ್ಯರ ದೇವರಾದ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಹೀಗಿರಲು, ನನ್ನ ಜೀವದಾಣೆ, ಸೊದೋವಿುನ ಗತಿಯೇ ಮೋವಾಬಿಗೂ ಆಗುವದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವದು; ಆ ಪ್ರಾಂತಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವವು; ನನ್ನ ಪ್ರಜೆಯಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು, ಅವು ನನ್ನ ಜನಶೇಷದವರಿಗೆ ಸ್ವಾಸ್ತ್ಯವಾಗುವವು.