ಯೆಹೆಜ್ಕೇಲನು 33:13 - ಕನ್ನಡ ಸತ್ಯವೇದವು J.V. (BSI)13 ನಾನು ಶಿಷ್ಟನಿಗೆ - ನೀನು ಬಾಳೇ ಬಾಳುವಿ ಎಂದು ಹೇಳಲು ಅವನು ತನ್ನ ಪುಣ್ಯದ ಮೇಲೆ ಭರವಸವಿಟ್ಟು ಪಾಪ ಮಾಡಿದರೆ ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು; ಅವನು ಮಾಡುವ ಪಾಪದಿಂದಲೇ ಅವನು ಸಾಯುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಾನು ನೀತಿವಂತನಿಗೆ, ‘ನೀನು ಖಂಡಿತವಾಗಿ ಬದುಕುವಿ’ ಎಂದು ಹೇಳುವಾಗ, ಅವನು ತನ್ನ ನೀತಿಯ ಮೇಲೆ ಭರವಸವಿಟ್ಟು ಪಾಪ ಮಾಡಿದರೆ, ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ; ಅವನು ಮಾಡುವ ಪಾಪದಿಂದಲೇ ಅವನು ಸಾಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಾನು ಶಿಷ್ಟನಿಗೆ, ನೀನು ಬಾಳೇ ಬಾಳುವೆ ಎಂದು ಹೇಳಲು, ಅವನು ತನ್ನ ಪುಣ್ಯದ ಮೇಲೆ ಭರವಸೆಯಿಟ್ಟು ಪಾಪಮಾಡಿದರೆ, ಅವನು ಮಾಡಿದ ಯಾವ ಸುಕೃತ್ಯವು ಅವನ ಲೆಕ್ಕಕ್ಕೆ ಸೇರದು; ಅವನು ಮಾಡುವ ಪಾಪದಿಂದಲೇ ಅವನು ಸಾಯುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ಒಂದುವೇಳೆ ‘ನೀನು ಜೀವಿಸುವಿ’ ಎಂದು ಒಬ್ಬ ಒಳ್ಳೆಯ ಮನುಷ್ಯನಿಗೆ ನಾನು ಹೇಳಬಹುದು. ಅವನು ತಾನು ಮಾಡಿದ ಒಳ್ಳೆಯ ಕಾರ್ಯಗಳ ನಿಮಿತ್ತ ತಾನು ರಕ್ಷಿಸಲ್ಪಟ್ಟಿದ್ದೇನೆ ಎಂದು ನೆನಸಬಹುದು. ಆ ಬಳಿಕ ಅವನು ದುಷ್ಕೃತ್ಯಗಳನ್ನು ಮಾಡಲು, ನಾನು ಅವನ ಪುಣ್ಯಕಾರ್ಯಗಳನ್ನು ನೋಡದೆ ಅವನ ದುಷ್ಕೃತ್ಯಗಳ ನಿಮಿತ್ತ ಅವನನ್ನು ಸಾಯಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಾನು ನೀತಿವಂತನಿಗೆ, ನೀನು ನಿಶ್ಚಯವಾಗಿ ಬದುಕುವೆ ಎಂದು ಹೇಳುವಾಗ, ಅವನು ಒಂದು ವೇಳೆ ಅವನ ಸ್ವಂತ ನೀತಿಯನ್ನು ನಂಬಿ ಅನ್ಯಾಯವನ್ನು ಮಾಡಿದರೆ ಅವನು ಮಾಡಿರುವ ಎಲ್ಲಾ ಸುಕೃತ್ಯಗಳು ಅವನ ಲೆಕ್ಕಕ್ಕೆ ಸೇರುವುದಿಲ್ಲ. ಅವನು ಮಾಡಿರುವ ಅಕ್ರಮಗಳಿಂದಲೇ ಅವನು ಸಾಯುವನು. ಅಧ್ಯಾಯವನ್ನು ನೋಡಿ |