Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:15 - ಕನ್ನಡ ಸತ್ಯವೇದವು J.V. (BSI)

15 ಅಂದರೆ ಆ ದುಷ್ಟನು ಒತ್ತೆಯನ್ನು ಬಿಗಿಹಿಡಿಯದೆ ದೋಚಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು ಜೀವಾಧಾರವಾದ ವಿಧಿಗಳನ್ನು ಅನುಸರಿಸಿ ಸಕಲ ದುಷ್ಕರ್ಮಗಳಿಗೂ ದೂರನಾಗಿರುವ ಪಕ್ಷದಲ್ಲಿ ಸಾಯನು, ಬಾಳೇಬಾಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ದುಷ್ಟನು ತನ್ನ ಒತ್ತೆಯನ್ನು ಬಿಗಿಹಿಡಿಯದೆ, ದೋಚಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು, ಅನ್ಯಾಯವನ್ನು ಮಾಡದೆ, ಜೀವಾಧಾರವಾದ ವಿಧಿಗಳನ್ನು ಅನುಸರಿಸಿ, ಸಕಲ ದುಷ್ಕರ್ಮಗಳಿಗೂ ದೂರನಾದರೆ ಸಾಯುವುದಿಲ್ಲ. ಖಂಡಿತವಾಗಿ ಬದುಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅಂದರೆ, ಆ ದುಷ್ಟನು ಒತ್ತೆಯನ್ನು ಬಿಗಿಹಿಡಿಯದೆ, ದೋಚಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು, ಜೀವಾಧಾರವಾದ ವಿಧಿಗಳನ್ನು ಅನುಸರಿಸಿ, ಸಕಲ ದುಷ್ಕರ್ಮಗಳಿಗೂ ದೂರವಾದರೆ ಅವನು ಸಾಯನು, ಬಾಳೇ ಬಾಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಒತ್ತೆ ತೆಗೆದುಕೊಂಡಿದ್ದ ವಸ್ತುಗಳನ್ನು ಹಿಂದಕ್ಕೆ ಕೊಟ್ಟು, ತಾನು ಕದ್ದುಕೊಂಡದ್ದನ್ನು ಹಿಂದಕ್ಕೆ ಕೊಟ್ಟು, ಜೀವಕರವಾದ ಕಟ್ಟಳೆಗಳನ್ನು ಅನುಸರಿಸಿದರೆ ಆ ಮನುಷ್ಯನು ಖಂಡಿತವಾಗಿ ಬದುಕುವನು. ಅವನನ್ನು ಸಾಯಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ದುಷ್ಟನು ತನ್ನ ಒತ್ತೆಯನ್ನು ಮತ್ತು ದೋಚಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು ಅನ್ಯಾಯವನ್ನು ಮಾಡದೆ ಜೀವನಾಧಾರವಾದ ನಿಯಮಗಳಲ್ಲಿ ನಡೆದರೆ ಅವನು ಸಾಯದೆ ಖಂಡಿತವಾಗಿ ಬದುಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:15
26 ತಿಳಿವುಗಳ ಹೋಲಿಕೆ  

ಕೈಕೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆನು.


ಆದರೆ ಜಕ್ಕಾಯನು ನಿಂತುಕೊಂಡು ಸ್ವಾವಿುಗೆ - ಸ್ವಾಮೀ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಎಳಕೊಂಡದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಎಂದು ಹೇಳಿದನು.


ಮುಟ್ಟಿನ ಹೆಂಗಸನ್ನು ಸೇರದೆ ಯಾರನ್ನೂ ಹಿಂಸಿಸದೆ ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ ಯಾರ ಸೊತ್ತನ್ನೂ ಅಪಹರಿಸದೆ ಹಸಿದವನಿಗೆ ಅನ್ನವಿಕ್ಕಿ ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ


ನಾನು ನಿನ್ನ ನೇಮಗಳನ್ನು ಎಂದಿಗೂ ಮರೆಯುವದಿಲ್ಲ; ಅವುಗಳಿಂದಲೇ ನನ್ನನ್ನು ಬದುಕಿಸಿದ್ದೀ.


ನನ್ನ ಆಜ್ಞಾವಿಧಿಗಳ ಪ್ರಕಾರ ನಡೆದುಕೊಳ್ಳುವವರು ಆ ಆಜ್ಞಾವಿಧಿಗಳ ಮೂಲಕ ಬದುಕುವರು. ಆದದರಿಂದ ನೀವು ಅವುಗಳನ್ನೇ ಅನುಸರಿಸಬೇಕು; ನಾನು ಯೆಹೋವನು.


ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.


ಒಂದೊಂದು ಯಜ್ಞವೇದಿಯ ಹತ್ತಿರದಲ್ಲಿಯೂ ಅಡವಾಗಿ ಇಟ್ಟುಕೊಂಡ ಬಟ್ಟೆಗಳ ಮೇಲೆ ಮಲಗಿಕೊಳ್ಳುತ್ತಾರೆ; ದಂಡಹಾಕಿಸಿಕೊಂಡವರ ದ್ರಾಕ್ಷಾರಸವನ್ನು ತಮ್ಮ ದೇವರ ಮಂದಿರದಲ್ಲಿಯೂ ಕುಡಿಯುತ್ತಾರೆ.


ಆ ಸಂತಾನದವರಾದರೋ ನನ್ನ ಮೇಲೆ ತಿರುಗಿಬಿದ್ದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಕೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಕೈಕೊಂಡು ನಡಿಸಲಿಲ್ಲ; ನಾನು ನೇವಿುಸಿದ ಸಬ್ಬತ್ ದಿನಗಳನ್ನು ಹೊಲೆಮಾಡಿದರು; ಆದದರಿಂದ ನಾನು ಅರಣ್ಯದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು ಅಂದುಕೊಂಡೆನು.


ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿಬಿದ್ದರು. ಕೈಕೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇವಿುಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಅವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು ಅಂದುಕೊಂಡೆನು.


ಯಾರನ್ನೂ ಹಿಂಸಿಸದೆ ಒತ್ತೆಯನ್ನು ಕೇಳದೆ ಯಾರ ಸೊತ್ತನ್ನೂ ಅಪಹರಿಸದೆ ಹಸಿದವನಿಗೆ ಅನ್ನವಿಕ್ಕಿ ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ


ದೀನದರಿದ್ರರನ್ನು ಹಿಂಸಿಸಿ ಜನರ ಸೊತ್ತನ್ನು ಅಪಹರಿಸಿ ಸಾಲಗಾರನ ಒತ್ತೆಯನ್ನು ಬಿಗಿಹಿಡಿದು ವಿಗ್ರಹಗಳ ಕಡೆಗೆ ಕಣ್ಣೆತ್ತಿ ಅಸಹ್ಯಕಾರ್ಯವನ್ನು ಮಾಡಿ


ತಂದೆಯಿಲ್ಲದ ಮಗುವನ್ನು ತಾಯಿಯ ಮೊಲೆಯಿಂದ ಕಿತ್ತು ಬಡವರಿಂದ ಒತ್ತೆತೆಗೆದುಕೊಳ್ಳುವವರಿದ್ದಾರೆ.


ಅನಾಥರ ಕತ್ತೆಯನ್ನು ಹೊಡೆದುಕೊಂಡು ಹೋಗುತ್ತಾರೆ, ವಿಧವೆಯ ಎತ್ತನ್ನು ಒತ್ತೆಯಾಗಿ ತೆಗೆದುಕೊಳ್ಳುತ್ತಾರೆ;


ನೋಡು, ನಿನ್ನ ಸಹೋದರನಿಂದ ಸುಮ್ಮನೆ ಒತ್ತೆಗಳನ್ನು ತೆಗೆದುಕೊಂಡಿದ್ದೀ, ಬೆತ್ತಲೆಯವರ ಬಟ್ಟೆಯನ್ನೂ ಸೆಳಕೊಂಡಿದ್ದೀ,


ನೀವು ಪರದೇಶಿಯ ಅಥವಾ ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವಾಗ ನ್ಯಾಯವನ್ನು ಬಿಟ್ಟು ತೀರ್ಪುಕೊಡಬಾರದು. ವಿಧವೆಯಿಂದ ಉಡುವ ಬಟ್ಟೆಯನ್ನು ಒತ್ತೆಯಿಡಿಸಿಕೊಳ್ಳಬಾರದು.


ಬೀಸುವಕಲ್ಲನ್ನು ಪೂರ್ತಿಯಾಗಲಿ ಅರ್ಧವಾಗಲಿ ಒತ್ತೆ ತೆಗೆದುಕೊಳ್ಳಬಾರದು; ಅದು ಜೀವನಾಧಾರವನ್ನೇ ಒತ್ತೆಯಾಗಿ ತೆಗೆದುಕೊಂಡ ಹಾಗಾಗುವದು.


ನನ್ನ ನಡತೆಯನ್ನು ಶೋಧಿಸಿದೆನು. ನಿನ್ನ ಕಟ್ಟಳೆಗಳ ಕಡೆಗೆ ತಿರುಗಿಕೊಂಡಿದ್ದೇನೆ.


ಹೊತ್ತಾರೆ ನಿನ್ನ ಕೃಪೆಯು ನನಗೆ ಪ್ರಕಟವಾಗಲಿ; ನಿನ್ನಲ್ಲಿ ಭರವಸವಿಟ್ಟಿದ್ದೇನಲ್ಲಾ. ನಾನು ನಡೆಯತಕ್ಕ ಮಾರ್ಗವನ್ನು ತಿಳಿಸು; ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ.


ಆ ಕುಣಿ ಅಗೆಸಿದವನು ಉಂಟಾದ ನಷ್ಟಕ್ಕೆ ಪ್ರತಿಯಾಗಿ ಈಡುಕೊಡಬೇಕು. ಆ ದನದ ಒಡೆಯನಿಗೆ ಅದರ ಕ್ರಯವನ್ನು ಕೊಡಬೇಕು. ಸತ್ತ ದನವನ್ನು ತಾನೇ ತೆಗೆದುಕೊಳ್ಳಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು