ಯೆಹೆಜ್ಕೇಲನು 33:27 - ಕನ್ನಡ ಸತ್ಯವೇದವು J.V. (BSI)27 ಮತ್ತು ಅವರಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ಹಾಳು ಪ್ರದೇಶಗಳಲ್ಲಿರುವವರನ್ನು ಖಡ್ಗವು ಹತಿಸುವದು; ಬೈಲಿನಲ್ಲಿರುವವರನ್ನು ನಾನು ಮೃಗಗಳಿಗೆ ತುತ್ತುಮಾಡುವೆನು; ಗುಹೆ ದುರ್ಗಗಳಲ್ಲಿರುವವರನ್ನು ವ್ಯಾಧಿಯು ಸಾಯಿಸುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಹಾಳು ಪ್ರದೇಶಗಳಲ್ಲಿರುವವರನ್ನು ಖಡ್ಗವು ಹತಿಸುವುದು; ಬಯಲಿನಲ್ಲಿರುವವರನ್ನು ನಾನು ಮೃಗಗಳಿಗೆ ತುತ್ತುಮಾಡುವೆನು; ಗುಹೆ ದುರ್ಗಗಳಲ್ಲಿರುವವರನ್ನು ವ್ಯಾಧಿಯು ಸಾಯಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 “ಮತ್ತು ಅವರಿಗೆ ಹೀಗೆ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ಹಾಳು ಪ್ರದೇಶಗಳಲ್ಲಿ ಇರುವವರನ್ನು ಖಡ್ಗವು ಹತಿಸುವುದು; ಬಯಲಿನಲ್ಲಿ ಇರುವವರನ್ನು ನಾನು ಮೃಗಗಳಿಗೆ ತುತ್ತು ಮಾಡುವೆನು; ಗುಹೆದುರ್ಗಗಳಲ್ಲಿ ಇರುವವರನ್ನು ವ್ಯಾಧಿಯು ಸಾಯಿಸುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 “‘ನೀನು ಅವರಿಗೆ ನಿಮ್ಮ ಒಡೆಯನಾದ ಯೆಹೋವನು ಹೀಗೆ ಹೇಳಿದನೆಂದು ತಿಳಿಸಬೇಕು, “ನನ್ನ ಜೀವದಾಣೆ, ಕೆಡವಲ್ಪಟ್ಟ ಪಟ್ಟಣಗಳಲ್ಲಿ ವಾಸಿಸುವ ಜನರು ಕೊಲ್ಲಲ್ಪಡುವರು. ಯಾರಾದರೂ ಪಟ್ಟಣದ ಹೊರಗೆ ಹೋಗಿದ್ದಲ್ಲಿ ಅವರನ್ನು ಕಾಡುಪ್ರಾಣಿಗಳು ತಿನ್ನುವಂತೆ ಮಾಡುವೆನು. ಯಾರಾದರೂ ಕೋಟೆಯೊಳಗಾಗಲಿ ಗುಹೆಯೊಳಗಾಗಲಿ ಸೇರಿಕೊಂಡರೆ ಅವರು ರೋಗದಿಂದ ಸಾಯುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 “ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜೀವದಾಣೆ, ನಿಶ್ಚಯವಾಗಿ ಹಾಳು ಸ್ಥಳಗಳಲ್ಲಿರುವವರು ಖಡ್ಗದಿಂದ ಬೀಳುವರು. ಬಯಲಿನಲ್ಲಿರುವವರನ್ನು ಕಾಡುಮೃಗಗಳಿಗೆ ಆಹಾರವನ್ನಾಗಿ ಕೊಡುತ್ತೇನೆ. ಕೋಟೆಗಳಲ್ಲಿಯೂ ಗುಹೆಗಳಲ್ಲಿಯೂ ಇರುವವರು ವ್ಯಾಧಿಗಳಿಂದ ಸಾಯುವರು. ಅಧ್ಯಾಯವನ್ನು ನೋಡಿ |