Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:32 - ಕನ್ನಡ ಸತ್ಯವೇದವು J.V. (BSI)

32 ಇಗೋ, ನಿನ್ನ ಮಾತು ಅವರ ಎಣಿಕೆಯಲ್ಲಿ ಒಬ್ಬ ಸಂಗೀತಗಾರನು ವಾದ್ಯವನ್ನು ಜಾಣತನದಿಂದ ಬಾರಿಸಿ ಮಧುರಸ್ವರದಿಂದ ಹಾಡುವ ಪ್ರೇಮಗೀತಕ್ಕೆ ಸಮಾನವಾಗಿದೆ; ನಿನ್ನ ಮಾತುಗಳನ್ನು ಕೇಳುತ್ತಾರೆ ಆದರೆ ಕೈಕೊಳ್ಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಇಗೋ, ನಿನ್ನ ಮಾತು ಅವರ ಎಣಿಕೆಯಲ್ಲಿ ಒಬ್ಬ ಸಂಗೀತಗಾರನು ವಾದ್ಯವನ್ನು ಜಾಣತನದಿಂದ ಬಾರಿಸಿ, ಮಧುರ ಸ್ವರದಿಂದ ಹಾಡುವ ಪ್ರೇಮಗೀತೆಗೆ ಸಮಾನವಾಗಿದೆ; ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಇಗೋ, ನಿನ್ನ ಮಾತು ಅವರ ಎಣಿಕೆಯಲ್ಲಿ ಒಬ್ಬ ಸಂಗೀತಗಾರನು ವಾದ್ಯವನ್ನು ಜಾಣತನದಿಂದ ಬಾರಿಸಿ ಮಧುರಸ್ವರದಿಂದ ಹಾಡುವ ಪ್ರೇಮಗೀತೆಗೆ ಸಮಾನವಾಗಿದೆ; ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 “‘ನೀನು ಅವರಿಗೆ ಏನೂ ಅಲ್ಲ. ಒಬ್ಬ ಪ್ರೇಮಗೀತೆಯನ್ನು ಹಾಡುವ ಹಾಡುಗಾರ. ನಿನಗೆ ಮಧುರವಾದ ಕಂಠವಿದೆ. ನೀನು ವಾದ್ಯವನ್ನು ಚೆನ್ನಾಗಿ ಬಾರಿಸುವಿ. ಅವರು ನಿನ್ನ ಮಾತುಗಳನ್ನು ಕೇಳಿದರೂ ನೀನು ಹೇಳಿದಂತೆ ಮಾಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಇಗೋ, ನಿನ್ನ ಮಾತು ಅವರ ಎಣಿಕೆಯಲ್ಲಿ ಒಬ್ಬ ಸಂಗೀತಗಾರನು ವಾದ್ಯವನ್ನು ಜಾಣತನದಿಂದ ಬಾರಿಸಿ ಮಧುರಸ್ವರದಿಂದ ಹಾಡುವ ಪ್ರೇಮಗೀತೆಗೆ ಸಮಾನವಾಗಿದೆ; ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:32
6 ತಿಳಿವುಗಳ ಹೋಲಿಕೆ  

ಹೆರೋದನು ಯೋಹಾನನನ್ನು ನೀತಿವಂತನೆಂದೂ ದೇವಭಕ್ತನೆಂದೂ ತಿಳಿದು ಅಂಜಿಕೊಂಡು ಅವನಿಗೆ ಯಾವ ಅಪಾಯವೂ ಬಾರದಂತೆ ಇಟ್ಟಿದ್ದನು. ಇದಲ್ಲದೆ ಯೋಹಾನನು ಹೇಳಿದ್ದನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಬಹು ಗಲಿಬಿಲಿ ಹುಟ್ಟಿದರೂ ಅವನ ಮಾತನ್ನು ಸಂತೋಷದಿಂದ ಕೇಳುತ್ತಿದ್ದನು.


ಯೋಹಾನನು ಉರಿಯುವ ದೀಪದೋಪಾದಿಯಲ್ಲಿ ಪ್ರಕಾಶಿಸಿದನು. ಅವನು ಕೊಡುವ ಬೆಳಕಿನಲ್ಲಿ ಸ್ವಲ್ಪಕಾಲ ವಿನೋದಗೊಳ್ಳುವದಕ್ಕೆ ಮನಸ್ಸುಮಾಡಿದಿರಿ.


ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಬಂದು ನನ್ನ ಮುಂದೆ ಕೂತುಕೊಂಡಿರುವಾಗ


ನೀನು ಬಹು ವಿಷಯಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ; ಇವನ ಕಿವಿ ತೆರೆದಿದ್ದರೂ ಕೇಳನು.


ನಾನು ಯೆಹೋವನ ಅಪ್ಪಣೆಯನ್ನು ಈ ದಿವಸ ನಿಮಗೆ ತಿಳಿಸಿದ್ದೇನೆ; ನೀವಾದರೆ ನಿಮ್ಮ ದೇವರಾದ ಯೆಹೋವನು ನನ್ನ ಮೂಲಕ ನಿಮಗೆ ಹೇಳಿಕಳುಹಿಸಿದ ಯಾವ ಮಾತನ್ನೂ ಕೇಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು