Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:5 - ಕನ್ನಡ ಸತ್ಯವೇದವು J.V. (BSI)

5 ಅವನು ಕೊಂಬಿನ ಕೂಗನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲವಷ್ಟೆ; ತನ್ನ ಮರಣಕ್ಕೆ ತಾನೇ ಕಾರಣನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಏಕೆಂದರೆ ಅವನು ಕೊಂಬಿನ ಧ್ವನಿಯನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲ; ತನ್ನ ಮರಣಕ್ಕೆ ತಾನೇ ಕಾರಣನಾಗುವನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಏಕೆಂದರೆ ಅವನು ಕೊಂಬಿನ ಕೂಗನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲ. ತನ್ನ ಮರಣಕ್ಕೆ ತಾನೇ ಕಾರಣನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅವನು ತುತ್ತೂರಿಯ ಶಬ್ದ ಕೇಳಿದನು. ಆದರೆ ಅದನ್ನು ಅಲಕ್ಷಿಸಿದನು. ಆದ್ದರಿಂದ ಅವನ ಮರಣಕ್ಕೆ ಅವನೇ ಕಾರಣನು. ಅವನು ಆ ಎಚ್ಚರಿಕೆಯ ಶಬ್ದಕ್ಕೆ ಗಮನವನ್ನು ಕೊಟ್ಟಿದ್ದರೆ ಅವನು ಬದುಕುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಏಕೆಂದರೆ ಅವನು ಕೊಂಬಿನ ಧ್ವನಿಯನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲ. ತನ್ನ ಸಾವಿಗೆ ತಾನೇ ಕಾರಣನಾಗುವನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:5
10 ತಿಳಿವುಗಳ ಹೋಲಿಕೆ  

ನಂಬಿಕೆಯಿಂದಲೇ ನೋಹನು ಅದುವರೆಗೆ ಕಾಣದಿದ್ದ ಸಂಗತಿಗಳ ವಿಷಯವಾಗಿ ದೈವೋಕ್ತಿಯನ್ನು ಹೊಂದಿ ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ಅದರಿಂದ ಅವನು ಲೋಕದವರನ್ನು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡು ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.


ಅದಕ್ಕವರು - ನಮ್ಮ ತಂದೆಯು ಅಬ್ರಹಾಮನೇ ಅಂದಾಗ ಯೇಸು ಅವರಿಗೆ - ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನು ಮಾಡಿದಂಥ ಕೃತ್ಯಗಳನ್ನು ಮಾಡುತ್ತಿದ್ದಿರಿ.


ನಿಮ್ಮ ಪಿತೃವಾದ ಅಬ್ರಹಾಮನನ್ನೂ ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ; ಅಬ್ರಹಾಮನು ಒಬ್ಬನೇ ಇದ್ದಾಗ ನಾನು ಅವನನ್ನು ಕರೆದು ಆಶೀರ್ವದಿಸಿ ಸಂತಾನದಿಂದ ಹೆಚ್ಚಿಸಿದೆನಲ್ಲವೆ.


ದೇವರ ಮನುಷ್ಯನು ಸೂಚಿಸುವ ಎಲ್ಲಾ ಸ್ಥಳಗಳಿಗೂ ಇಸ್ರಾಯೇಲ್ಯರ ಅರಸನು ಹೇಳಿಕಳುಹಿಸುತ್ತಿದ್ದನು. ಹೀಗೆ ಅವನು ಹಲವು ಸಾರಿ ಅರಾಮ್ಯರ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡನು.


ಆತನು ನಮ್ಮ ದೇವರು; ನಾವೋ ಆತನು ಪಾಲಿಸುವ ಪ್ರಜೆಯೂ ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇದು -


ಸಾಲಕ್ಕೆ ಬಡ್ಡಿತೆಗೆದು ಲಾಭಕ್ಕೆ ಹಣಕೊಟ್ಟು ಬಲಾತ್ಕಾರಿಯೂ ರಕ್ತ ಸುರಿಸುವವನೂ ಆಗಿದ್ದರೆ ಬಾಳುವನೇ? ಬಾಳಲೇ ಬಾಳನು; ಈ ದುರಾಚಾರಗಳನ್ನೆಲ್ಲಾ ನಡಿಸಿದನಲ್ಲಾ; ಸತ್ತೇ ಸಾಯುವನು; ತನ್ನ ಮರಣದಂಡನೆಗೆ ತಾನೇ ಕಾರಣ.


ಕೊಂಬಿನ ಕೂಗನ್ನು ಕೇಳಿದ ಯಾವನೇ ಆಗಲಿ ಎಚ್ಚರಗೊಳ್ಳದೆ ಬೀಳುವ ಖಡ್ಗಕ್ಕೆ ಸಿಕ್ಕಿ ನಾಶವಾದರೆ ತನ್ನ ಮರಣಕ್ಕೆ ತಾನೇ ಕಾರಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು